Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಶೀಘ್ರದಲ್ಲಿಯೇ ಹಣದ ಬದಲು ಪೂರ್ಣ ಪ್ರಮಾಣದಲ್ಲಿ ಅಕ್ಕಿ : ಸಚಿವ ಡಿ.ಸುಧಾಕರ್

06:46 PM Feb 05, 2024 IST | suddionenews
Advertisement

ಚಿತ್ರದುರ್ಗ ಫೆ.05: ನಮ್ಮ ಸರ್ಕಾರ ಜನರಿಗೆ ನೀಡಿದ ಆಶ್ವಾಸನೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುವ ಮೂಲಕ ನುಡಿದಂತೆ ನಡೆದಿದ್ದೇವೆ ಎಂದು ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಹೇಳಿದರು.

Advertisement

ಹಿರಿಯೂರು ತಾಲ್ಲೂಕಿನ ಜವನಗೊಂಡನಹಳ್ಳಿಯ ಸರ್ಕಾರಿ ಪ್ರೌಢಶಾಲೆಯ ಆವರಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ “ಜವನಗೊಂಡನಹಳ್ಳಿ ಹೋಬಳಿಮಟ್ಟದ ಪಂಚ ಗ್ಯಾರಂಟಿಗಳ ಅನುಷ್ಠಾನ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.

ಸರ್ಕಾರ ಚುನಾವಣಾ ಪೂರ್ವದಲ್ಲಿ ನೀಡಲಾಗಿದ್ದ 200 ಯುನಿಟ್‍ವರೆಗೆ ಉಚಿತ ವಿದ್ಯುತ್ ನೀಡುವ “ಗೃಹಜ್ಯೋತಿ”, ಮನೆ ಯಜಮಾನಿಗೆ ತಿಂಗಳಿಗೆ ರೂ.2000 ನೀಡುವ “ಗೃಹಲಕ್ಷ್ಮೀ”,  ಉಚಿತ ಪ್ರಯಾಣದ “ಶಕ್ತಿಯೋಜನೆ”, 10  ಕೆ.ಜಿ.ಅಕ್ಕಿ ನೀಡುವ “ಅನ್ನಭಾಗ್ಯ ಯೋಜನೆ”, ಪದವೀಧರ, ಡಿಪ್ಲೊಮಾ ಉತ್ತೀರ್ಣರಾದವರಿಗೆ ಎರಡು ವರ್ಷಗಳವರೆಗೆ ನಿರುದ್ಯೋಗ ಭತ್ಯೆ ನೀಡುವ “ಯುವನಿಧಿ” ಯೋಜನೆಗಳನ್ನು ಜಾರಿಗೆ ತರುವ ಮೂಲಕ ಜನರಿಗೆ ಅನುಕೂಲ ಕಲ್ಪಿಸಿದೆ.
ಗ್ಯಾರಂಟಿ ಯೋಜನೆಗಳಿಂದ ಕುಟುಂಬದಲ್ಲಿ ಆರ್ಥಿಕ ಬಲಬಂದಿದ್ದು, ಜೀವನ ಮಟ್ಟ ಸುಧಾರಣೆ ಹಾಗೂ ನಿರ್ವಹಣೆ ಸುಲಭವಾಗಿದೆ. ಗ್ಯಾರಂಟಿ ಯೋಜನೆಗಳಿಂದ ಬಡವರು, ಮಧ್ಯಮ ವರ್ಗದವರಿಗೆ ಬಹಳ ಅನುಕೂಲವಾಗಿದೆ ಎಂದರು.

Advertisement

ಹಣದ ಬದಲು ಪೂರ್ಣ ಪ್ರಮಾಣದ ಅಕ್ಕಿ ವಿತರಣೆ ಶೀಘ್ರ: ಅನ್ನಭಾಗ್ಯ ಯೋಜನೆಯಡಿ ಅಕ್ಕಿಯ ಬದಲಿಗೆ ಅಕ್ಕಿಯ ಮೊತ್ತಕ್ಕೆ ಹಣ ಪಾವತಿಸಲಾಗಿದ್ದು, ಶೀಘ್ರವೇ ಹಣದ ಬದಲಿಗೆ ಪೂರ್ಣ ಪ್ರಮಾಣದಲ್ಲಿ ಅಕ್ಕಿಯನ್ನು ನೀಡಲಾಗುವುದು ಎಂದು ಸಚಿವ ಡಿ.ಸುಧಾಕರ್ ಹೇಳಿದರು.

ಬಹಳಷ್ಟು ಮಹಿಳೆಯರು ನಮಗೆ ಹಣ ಬೇಡ ಅಕ್ಕಿಯನ್ನೇ ನೀಡಿ ಎಂದು ಮನವಿ ಮಾಡುತ್ತಿದ್ದು, ಈ ಹಿನ್ನಲೆಯಲ್ಲಿ ಈಗಾಗಲೇ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹಾಗೂ ಸಚಿವರ ಗಮನಕ್ಕೆ ತರಲಾಗಿದ್ದು, ಎಲ್ಲ ಸಚಿವರು ಕೂಡ ಇದಕ್ಕೆ ಒಪ್ಪಿಗೆ ಸೂಚಿಸಿದ್ದು, ಮುಂದಿನ ದಿನಗಳಲ್ಲಿ ಪೂರ್ಣ ಪ್ರಮಾಣದಲ್ಲಿ ಅಕ್ಕಿಯನ್ನೇ ನೀಡಲಾಗುವುದು ಸಚಿವರು ತಿಳಿಸಿದರು.

Advertisement
Tags :
chitradurgaD. SudhakarDistrict in-charge minister D. SudhakarFull amountಚಿತ್ರದುರ್ಗಶೀಘ್ರಸಚಿವ ಡಿ.ಸುಧಾಕರ್
Advertisement
Next Article