For the best experience, open
https://m.suddione.com
on your mobile browser.
Advertisement

ಬಿಜೆಪಿ ಅಭ್ಯರ್ಥಿ ವೈ.ಎ.ನಾರಾಯಣಸ್ವಾಮಿಯವರಿಗೆ ಪ್ರಥಮ ಪ್ರಾಶಸ್ತ್ಯದ ಮತ ನೀಡಿ : ಮಾಜಿ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಮನವಿ

04:30 PM May 22, 2024 IST | suddionenews
ಬಿಜೆಪಿ ಅಭ್ಯರ್ಥಿ ವೈ ಎ ನಾರಾಯಣಸ್ವಾಮಿಯವರಿಗೆ ಪ್ರಥಮ ಪ್ರಾಶಸ್ತ್ಯದ ಮತ ನೀಡಿ   ಮಾಜಿ ಶಾಸಕ ಜಿ ಹೆಚ್ ತಿಪ್ಪಾರೆಡ್ಡಿ ಮನವಿ
Advertisement

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552

Advertisement

ಸುದ್ದಿಒನ್, ಚಿತ್ರದುರ್ಗ, ಮೇ. 22 : ವಿಧಾನಸಭೆಯಲ್ಲಿ ಮನ ಬಂದಂತೆ ಪಾಸ್ ಮಾಡುವ ಬಿಲ್‍ಗಳನ್ನು ವಿಧಾನಪರಿಷತ್‍ನಲ್ಲಿ ತಿರಸ್ಕರಿಸಬೇಕಾದರೆ ಬಹುಮತವಿರಬೇಕು. ಅದಕ್ಕಾಗಿ ಈ ಬಾರಿಯ ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಸ್ಪರ್ಧಿಸಿರುವ ಬಿಜೆಪಿ. ಅಭ್ಯರ್ಥಿ ವೈ.ಎ.ನಾರಾಯಣಸ್ವಾಮಿರವರಿಗೆ ಪ್ರಥಮ ಪ್ರಾಶಸ್ತ್ಯದ ಮತ ನೀಡಿ ಗೆಲ್ಲಿಸುವಂತೆ ಮಾಜಿ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಶಿಕ್ಷಕರುಗಳಲ್ಲಿ ಮನವಿ ಮಾಡಿದರು.


ರಾಷ್ಟ್ರೀಯ ಹೆದ್ದಾರಿ-13 ಪಿಳ್ಳೆಕೆರನಹಳ್ಳಿಯಲ್ಲಿರುವ ಬಾಪೂಜಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ವೈ.ಎ.ನಾರಾಯಣಸ್ವಾಮಿರವರ ಪರ ಬುಧವಾರ ಮತಯಾಚಿಸಿ ಮಾತನಾಡಿದರು.

Advertisement

ನರೇಂದ್ರಮೋದಿ ದೇಶದ ಪ್ರಧಾನಿಯಾದಾಗಿನಿಂದಲೂ ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರತಕ್ಕೆ ಗೌರವ ಸಿಕ್ಕಿದೆ. ವಿಧಾನಸಭೆಯಲ್ಲಿ ಕಾಂಗ್ರೆಸ್ ಮಾಡುವ ಕಾನೂನುಗಳನ್ನು ಮೇಲ್ಮನೆಗೆ ಕಳಿಸಿದಾಗ ಅಲ್ಲಿ ತೀರ್ಮಾನಿಸಲು ಪಕ್ಷಕ್ಕೆ ಬಹುಮತವಿರಬೇಕು. ಹಾಗಾಗಿ ವಿಧಾನಪರಿಷತ್ ಚುನಾವಣೆ ಅತ್ಯಂತ ಮಹತ್ವದ್ದು, ಮತ ಪಡೆಯುವುದಕ್ಕಾಗಿ ಕಾಂಗ್ರೆಸ್ ಪಕ್ಷ ವಿಧಾನಸಭೆ ಚುನಾವಣೆಗೆ ಮುನ್ನ ಉಚಿತ ಗ್ಯಾರೆಂಟಿಗಳನ್ನು ನೀಡಿ ಜನರ ಮನವೊಲಿಸಿತು.

Advertisement

ಪ್ರಧಾನಿ ನರೇಂದ್ರಮೋದಿರವರು ಏನು ಬೇಕಾದರೂ ಉಚಿತ ಗ್ಯಾರೆಂಟಿಗಳನ್ನು ನೀಡಬಹುದಿತ್ತು. ದೇಶ ದಿವಾಳಿಯಾಗಿಸಲು ಅವರಿಗೆ ಇಷ್ಟವಿಲ್ಲ. ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಒಬ್ಬ ಮಹಿಳೆಗೆ ಒಂದು ಲಕ್ಷ ರೂ.ಗಳನ್ನು ನೀಡುವುದಾಗಿ ಘೋಷಿಸಿದೆ. ಅದಕ್ಕಾಗಿ 84 ಲಕ್ಷ ಕೋಟಿ ರೂ.ಗಳು ಬೇಕಾಗುತ್ತದೆ. ಹಣ ಎಲ್ಲಿಂದ ತರುತ್ತಾರೆಂದು ಪ್ರಶ್ನಿಸಿದರು?
ನರೇಂದ್ರಮೋದಿರವರ ಪಾರದರ್ಶಕ ಆಡಳಿತಕ್ಕೆ ಅಮೇರಿಕಾ, ಬ್ರಿಟನ್, ಜರ್ಮನ್, ರಷ್ಯ ದೇಶಗಳಿಗೆ ನಡುಕ ಉಂಟಾಗಿದೆ. ಮತ್ತೊಮ್ಮೆ ಮೋದಿ ದೇಶದ ಪ್ರಧಾನಿಯಾಗುವುದು ಖಚಿತ ಎಂದು ಹೇಳಿದರು.

ವಿಧಾನ ಪರಿಷತ್ ಸದಸ್ಯ ಅರುಣ್ ಶಹಾಪುರ್ ಮಾತನಾಡಿ ದೇಶದಲ್ಲಿ ನಿರುದ್ಯೋಗ ಹೋಗಲಾಡಿಸಬೇಕಾದರೆ ಮೊದಲು ಶಿಕ್ಷಣ ಬೇಕು. ಪ್ರಧಾನಿ ಮೋದಿರವರು ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ತರಲು ಹೊರಟಿದ್ದಾರೆ. ಆದರೆ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಮಾತ್ರ ಇದು ಬೇಕಿಲ್ಲ. 6, 9 ನೇ ತರಗತಿಗೆ ಸಿ.ಬಿ.ಎಸ್.ಇ. ಐಸಿಎಸ್‍ಇ. ನಲ್ಲಿ ಬದಲಾವಣೆ ಪರ್ವ ಆರಂಭವಾಗಿದೆ.

ಅನರ್ಹರಿಗೆ ರಾಜ್ಯದಲ್ಲಿ ಅಧಿಕಾರ ಸಿಕ್ಕಿರುವುದು ಭವಿಷ್ಯಕ್ಕೆ ಮಾರಕವಾಗಿದೆ. ಎಸ್.ಎಂ.ಕೃಷ್ಣ ರಾಜ್ಯದ ಮುಖ್ಯಮಂತ್ರಿಯಾಗಿದ್ದಾಗ 2021-22 ರಲ್ಲಿ ಅನುದಾನಿತ ಶಾಲೆಗಳಿಗೆ ನೀಡಲಾಗಿದ್ದ ಅನುದಾನವನ್ನು ಹಿಂದಕ್ಕೆ ಪಡೆದಾಗ ಶಿಕ್ಷಕರ ಪರವಾಗಿ ದೊಡ್ಡ ಹೋರಾಟ ಮಾಡಿದೆವು. ಖಾಸಗಿ ಶಿಕ್ಷಣ ವ್ಯವಸ್ಥೆ ಈಗಲೂ ರಾಜ್ಯದಲ್ಲಿ ಉಳಿದಿದೆ ಎನ್ನುವುದಾದರೆ ಅದು ಬಿ.ಎಸ್.ಯಡಿಯೂರಪ್ಪನವರು ರಾಜ್ಯದ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಎನ್ನುವುದನ್ನು ಶಿಕ್ಷಕರುಗಳಿಗೆ ನೆನಪಿಸಿದರು.

ಆಗ್ನೇಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ವೈ.ಎ.ನಾರಾಯಣಸ್ವಾಮಿ ಕೋವಿಡ್‍ನಲ್ಲಿ ಜೀವಕ್ಕೆ ಹೆದರದೆ ಶಿಕ್ಷಕರುಗಳಿಗೆ ಕಿಟ್‍ಗಳನ್ನು ನೀಡಿದರು. ಶಿಕ್ಷಣ ಕ್ಷೇತ್ರಕ್ಕೆ ಬೇಕಾಗಿರುವ ಗಟ್ಟಿ ಧ್ವನಿಯುಳ್ಳ ಅವರಿಗೆ ಪ್ರಥಮ ಪ್ರಾಶಸ್ತ್ಯದ ಮತ ನೀಡಿ ಗೆಲ್ಲಿಸಿ ಎಂದು ಶಿಕ್ಷಕರುಗಳಲ್ಲಿ ಮನವಿ ಮಾಡಿದರು.

ಸದನದಲ್ಲಿ ಶಿಕ್ಷಕರುಗಳ ಬೇಡಿಕೆ, ಸಮಸ್ಯೆಗಳ ಬಗ್ಗೆ ಹಿಂದಿನಿಂದಲೂ ಜಗಳವಾಡುತ್ತಿದ್ದೇವೆ. ಶಿಕ್ಷಣ ವ್ಯವಸ್ಥೆಯನ್ನು ಹೊಸ ಉತ್ತುಂಗಕ್ಕೆ ತೆಗೆದುಕೊಂಡು ಹೋಗಬೇಕಾಗಿರುವುದರಿಂದ ಮುಂದಿನ ತಿಂಗಳು ಮೂರನೆ ತಾರೀಖು ನಡೆಯುವ ಚುನಾವಣೆಯಲ್ಲಿ ವೈ.ಎ.ನಾರಾಯಣಸ್ವಾಮಿರವರನ್ನು ಗೆಲ್ಲಿಸಿ. ಆತ್ಮವಿಶ್ವಾಸದಿಂದ ಪರೀಕ್ಷೆಗಳನ್ನು ಎದುರಿಸಿ ಶಿಕ್ಷಕರುಗಳಾಗಿ ಎಂದು ತಿಳಿಸಿದರು.

ಬಾಪೂಜಿ ಶಿಕ್ಷಣ ಮಹಾವಿದ್ಯಾಲಯದ ಕಾರ್ಯದರ್ಶಿ ಕೆ.ಎಂ.ವೀರೇಶ್, ಬಿಜೆಪಿ. ಜಿಲ್ಲಾಧ್ಯಕ್ಷ ಎ.ಮುರಳಿ, ಗ್ರಾಮಾಂತರ ಮಂಡಲ ಅಧ್ಯಕ್ಷ ಕಲ್ಲೇಶಯ್ಯ, ಶಿಕ್ಷಣ ಜಯಣ್ಣ ವೇದಿಕೆಯಲ್ಲಿದ್ದರು. ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಶೈಲಜಾರೆಡ್ಡಿ, ಬಿಜೆಪಿ. ಉಪಾಧ್ಯಕ್ಷೆ ಚಂದ್ರಿಕ ಲೋಕನಾಥ್, ನಗರ ಮಂಡಲ ಅಧ್ಯಕ್ಷ ನವೀನ್ ಚಾಲುಕ್ಯ, ಮಾಧ್ಯಮ ವಕ್ತಾರ ದಗ್ಗೆಶಿವಪ್ರಕಾಶ್, ವಕ್ತಾರ ನಾಗರಾಜ್‍ಬೇದ್ರೆ, ಬಾಪೂಜಿ ಶಿಕ್ಷಣ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಶ್ರೀಮತಿ ಜಯಲಕ್ಷ್ಮಿ, ಉಪ ಪ್ರಾಂಶುಪಾಲರಾದ ಶಿವಕುಮಾರ್ ಈ ಸಂದರ್ಭದಲ್ಲಿದ್ದರು.

Advertisement
Tags :
Advertisement