Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ವೈ.ಎ.ನಾರಾಯಣಸ್ವಾಮಿಯವರಿಗೆ ಮೊದಲ ಪ್ರಾಶಸ್ತ್ಯದ ಮತ ನೀಡಿ ಗೆಲ್ಲಿಸಿ : ಮಾಜಿ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ

04:38 PM May 23, 2024 IST | suddionenews
Advertisement

 

Advertisement

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಮೇ. 23 : ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ವಿಧಾನಪರಿಷತ್ ಚುನಾವಣೆಗೆ ಬಿಜೆಪಿ.ಯಿಂದ ಸ್ಪರ್ಧಿಸಿರುವ ವೈ.ಎ.ನಾರಾಯಣಸ್ವಾಮಿವರಿಗೆ ಮೊದಲ ಪ್ರಾಶಸ್ತ್ಯದ ಮತ ನೀಡಿ ಗೆಲ್ಲಿಸುವಂತೆ ಮಾಜಿ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಸರ್ಕಾರಿ ಕಲಾ ಕಾಲೇಜು(ಸ್ವಾಯತ್ರ) ಇಲ್ಲಿ ಉಪನ್ಯಾಸಕರು ಹಾಗೂ ಪ್ರಾಧ್ಯಾಪಕರುಗಳಲ್ಲಿ ಮನವಿ ಮಾಡಿದರು.

Advertisement

ನಾಲ್ಕನೆ ಬಾರಿಗೆ ಸ್ಪರ್ಧಿಸುತ್ತಿರುವ ವೈ.ಎ.ನಾರಾಯಣಸ್ವಾಮಿರವರು ಕಳೆದ ಹದಿನೆಂಟು ವರ್ಷಗಳಿಂದಲೂ ಶಿಕ್ಷಕರುಗಳ ಸಮಸ್ಯೆಗಳನ್ನು ಹತ್ತಿರದಿಂದ ಕಂಡಿದ್ದಾರೆ. ಹಾಗಾಗಿ ಶಿಕ್ಷಕರುಗಳ ನಾನಾ ಬೇಡಿಕೆಗಳು ಈಡೇರಬೇಕಾದರೆ ವೈ.ಎ.ನಾರಾಯಣಸ್ವಾಮಿರವರು ಗೆಲ್ಲಲೇಬೇಕು ಎಂದು ಪ್ರಾಧ್ಯಾಪಕರುಗಳಲ್ಲಿ ವಿನಂತಿಸಿದರು.

ವಿಧಾನಪರಿಷತ್ ಮಾಜಿ ಸದಸ್ಯ ಅರುಣ್ ಶಹಾಪುರ ಮಾತನಾಡುತ್ತ ಸೇವಾ ಭದ್ರತೆಯಿಲ್ಲದೆ ಕೆಲಸ ಮಾಡುತ್ತಿರುವ ಅತಿಥಿ ಉಪನ್ಯಾಸಕರುಗಳಿಗೆ ಗಟ್ಟಿ ನಾಯಕತ್ವ ಬೇಕು. ನಮ್ಮ ಸರ್ಕಾರ ಅಧಿಕಾರಲ್ಲಿದ್ದಾಗ ಅತಿಥಿ ಉಪನ್ಯಾಸಕರ ಗೌರವ ಧನ ಹೆಚ್ಚಳವಾಯಿತು. ನಿಮ್ಮ ಪರವಾಗಿ ವೈ.ಎ.ನಾರಾಯಣಸ್ವಾಮಿರವರು ಸದನದಲ್ಲಿ ಸದಾ ಧ್ವನಿ ಎತ್ತುತ್ತಿರುತ್ತಾರೆ. ಅದಕ್ಕಾಗಿ ಈ ಬಾರಿಯ ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಅವರಿಗೆ ಪ್ರಥಮ ಪ್ರಾಶಸ್ತ್ಯದ ಮತ ನೀಡಿ ಗೆಲ್ಲಿಸುವಂತೆ ಉಪನ್ಯಾಸಕರು ಹಾಗೂ ಪ್ರಾಧ್ಯಾಪಕರುಗಳಲ್ಲಿ ಕೋರಿದರು.

ಬಿಜೆಪಿ.ಗೆ ಶಿಕ್ಷಣ ಮೊದಲ ಆದ್ಯತೆ. ನಿಮ್ಮ ಪರವಾಗಿ ನಾವಿದ್ದೇವೆ. ವೈದ್ಯಕೀಯ ವಿಮೆ ಸೌಲಭ್ಯ ಸೇರಿದಂತೆ ಅನೇಕ ಬೇಡಿಕೆಗಳು ಈಡೇರಬೇಕಾಗಿದೆ. ಹಾಗಾಗಿ ಈ ಬಾರಿಯ ಚುನಾವಣೆ ಅತ್ಯಂತ ಮಹತ್ವದ್ದು ಎಂದು ಹೇಳಿದರು.

ಕಾಲೇಜಿನ ಪ್ರಾಂಶುಪಾಲರಾದ ತಿಪ್ಪೇರುದ್ರಸ್ವಾಮಿ, ಬಿಜೆಪಿ. ಜಿಲ್ಲಾಧ್ಯಕ್ಷ ಎ.ಮುರಳಿ, ಗ್ರಾಮಾಂತರ ಮಂಡಲ ಅಧ್ಯಕ್ಷ ಕಲ್ಲೇಶಯ್ಯ, ಮಾಧ್ಯಮ ವಕ್ತಾರ ದಗ್ಗೆಶಿವಪ್ರಕಾಶ್, ವಕ್ತಾರ ನಾಗರಾಜ್‍ಬೇದ್ರೆ, ಛಲವಾದಿ ತಿಪ್ಪೇಸ್ವಾಮಿ, ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಮಾಜಿ ಅಧ್ಯಕ್ಷ ಜಯಣ್ಣ ಇನ್ನು ಅನೇಕರು ಈ ಸಂದರ್ಭದಲ್ಲಿದ್ದರು.

Advertisement
Tags :
bengaluruchitradurgafirst preferenceformer MLA GH Tippareddysuddionesuddione newsvoteYA Narayanaswamyಗೆಲ್ಲಿಸಿಚಿತ್ರದುರ್ಗಬೆಂಗಳೂರುಮತಮಾಜಿ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿಮೊದಲ ಪ್ರಾಶಸ್ತ್ಯವೈ.ಎ.ನಾರಾಯಣಸ್ವಾಮಿಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article