For the best experience, open
https://m.suddione.com
on your mobile browser.
Advertisement

ಸರ್ಕಾರಿ ನೌಕರರು ಹುಟ್ಟಿದ ಊರನ್ನೆ ಮರೆಯಬಾರದು : ಸಂಸದ ಗೋವಿಂದ ಎಂ.ಕಾರಜೋಳ

04:41 PM Dec 22, 2024 IST | suddionenews
ಸರ್ಕಾರಿ ನೌಕರರು ಹುಟ್ಟಿದ ಊರನ್ನೆ ಮರೆಯಬಾರದು   ಸಂಸದ ಗೋವಿಂದ ಎಂ ಕಾರಜೋಳ
Advertisement

Advertisement

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ,ಡಿಸೆಂಬರ್. 22 : ತುಳಿತಕ್ಕೊಳಗಾಗಿರುವ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದವರು ಸರ್ಕಾರದ ಯೋಜನೆಗಳನ್ನು ಸದುಪಯೋಗಪಡಿಸಿಕೊಂಡು ಮೇಲೆ ಬರುವಂತೆ ಸಂಸದ
ಗೋವಿಂದ ಎಂ.ಕಾರಜೋಳ ಕರೆ ನೀಡಿದರು.

Advertisement
Advertisement

ಚಿತ್ರದುರ್ಗ ವಾಲ್ಮೀಕಿ ನಾಯಕ ನೌಕರರ ಕ್ಷೇಮಾಭಿವೃದ್ದಿ ಮತ್ತು ಸಾಂಸ್ಕøತಿಕ ಸಂಘದಿಂದ ತ.ರಾ.ಸು.ರಂಗಮಂದಿರದಲ್ಲಿ ಭಾನುವಾರ ನಡೆದ ವಾಲ್ಮೀಕಿ ನಾಯಕ ನೌಕರರ ಸಮಾವೇಶ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

ಪರಿಶಿಷ್ಟ ಜನಾಂಗದ ಮಕ್ಕಳು ಶಿಕ್ಷಣದಿಂದ ಮುಂದೆ ಬರಬೇಕು. ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಶಿಕ್ಷಣ, ಸಂಘಟನೆ, ಹೋರಾಟಕ್ಕೆ ಮಹತ್ವ ನೀಡಿದ್ದಾರೆ. ಅವರ ದಾರಿಯಲ್ಲಿ ಎಲ್ಲರೂ ಸಾಗಬೇಕಿದೆ. ಸರ್ಕಾರಿ ಕೆಲಸ ಸಿಕ್ಕವರು ಹುಟ್ಟಿದ ಊರನ್ನೆ ಮರೆಯಬಾರದು. ಎಲ್ಲರಿಗೂ ಸರ್ಕಾರಿ ನೌಕರಿ ಸಿಗುವುದಿಲ್ಲ. ಸಿಕ್ಕವರು ತಾವಾಯಿತು ತಮ್ಮ ಕುಟುಂಬವಾಯಿತೆಂದು ಸುಮ್ಮನಿರುವ ಬದಲು ಬಂಧು, ಬಳಗ, ಅಸಹಾಯಕರನ್ನು ಜೊತೆಯಲ್ಲಿ ತೆಗೆದುಕೊಂಡು ಹೋಗಬೇಕು ಎಂದು ತಿಳಿಸಿದರು.

ಬಸವರಾಜ ಬೊಮ್ಮಾಯಿ ರಾಜ್ಯದ ಮುಖ್ಯಮಂತ್ರಿಯಾಗಿದ್ದಾಗ ಪರಿಶಿಷ್ಟ ವರ್ಗಕ್ಕೆ ಶೇ. 3 ರಿಂದ 7 ಹಾಗೂ ಪರಿಶಿಷ್ಠ ಜಾತಿಗೆ ಶೇ.15 ರಿಂದ 17 ಪರ್ಸೆಂಟ್ ಮೀಸಲಾತಿಯನ್ನು ಹೆಚ್ಚಿಸಿದ್ದರಿಂದ ಶಿಕ್ಷಣ, ಉದ್ಯೋಗದಲ್ಲಿ ಅನುಕೂಲವಾಗಿದೆಯಲ್ಲದೆ ಇಂಜಿನಿಯರಿಂಗ್, ವೈದ್ಯಕೀಯ ಸೀಟು ಪಡೆದುಕೊಳ್ಳಲು ಸುಲಭವಾಗುತ್ತಿದೆ. ಹಾಗಾಗಿ ಅವರನ್ನು ಈ ಸಂದರ್ಭದಲ್ಲಿ ನೆನಪಿಸಿಕೊಳ್ಳಬೇಕು ಎಂದರು.

ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ ಮಾತನಾಡಿ ಚಿತ್ರದುರ್ಗದಲ್ಲಿ ಮದಕರಿನಾಯಕ ಆಳ್ವಿಕೆ ಮಾಡಿರುವುದರಿಂದ ನಾಯಕ ಜನಾಂಗಕ್ಕೆ ಇತಿಹಾಸವಿದೆ. ಕಳೆದ ಹದಿನೈದು ವರ್ಷಗಳಿಂದಲೂ ವಾಲ್ಮೀಕಿ ನಾಯಕ ನೌಕರರ ಸಮಾವೇಶ ಹಾಗೂ ಪ್ರತಿಭಾ ಪುರಸ್ಕಾರ ಹಮ್ಮಿಕೊಂಡು ಬರುತ್ತಿರುವುದರಿಂದ ಈ ಜನಾಂಗದ ಸಾಧಕರು, ಪ್ರತಿಭಾವಂತರನ್ನು ಗುರುತಿಸಲು ನೆರವಾಗಿದೆ. ಎಲ್ಲಾ ಜಾತಿ, ಸಮಾಜಗಳಲ್ಲಿ ರಾಜಕೀಯ ವ್ಯವಸ್ಥೆ ಇದೆ. ಅದಕ್ಕಾಗಿ ಜನಪ್ರತಿನಿಧಿಗಳು ಕೇವಲ ಒಂದು ಜನಾಂಗಕ್ಕೆ ಸೀಮಿತವಾಗಿರುವುದು ಕಷ್ಟ. ಎಲ್ಲರ ಕಷ್ಟ-ಸುಖಗಳನ್ನು ಕೇಳಿ ಸಮಸ್ಯೆಗಳಿಗೆ ಪರಿಹಾರ ನೀಡಬೇಕಿದೆ ಎಂದು ಹೇಳಿದರು.

ಸರ್ಕಾರಿ ನೌಕರಿ ಸಿಕ್ಕಿತೆಂದು ನಿಮ್ಮ ಪಾಡಿಗೆ ನೀವು ಇರುವುದು ಸರಿಯಲ್ಲ. ಶೋಷಿತರು, ತುಳಿತಕ್ಕೊಳಗಾದವರು, ಕುಟುಂಬದವರಿಗೆ ನೆರವಿನ ಹಸ್ತ ಚಾಚಬೇಕು. ಪರಿಶ್ರಮ ಇಚ್ಚಾಶಕ್ತಿಯಿದ್ದರೆ ಮಾತ್ರ ಜೀವನದಲ್ಲಿ ಏನನ್ನಾದರೂ ಸಾಧನೆ ಮಾಡಬಹುದು. ಯಾವ ಹುದ್ದೆ, ಅಧಿಕಾರದಲ್ಲಿದ್ದೇವೆನ್ನುವುದು ಮುಖ್ಯವಲ್ಲ. ಸಾಧನೆ ಮಾಡುವ ಛಲವಿರಬೇಕು. ವಿದ್ಯಾರ್ಥಿಗಳು ಕೇವಲ ಅಂಕಗಳನ್ನು ಗಳಿಸುವುದಷ್ಟೆ ಸಾಧನೆ ಅಂದುಕೊಳ್ಳಬಾರದು. ಶಿಕ್ಷಣದ ಜೊತೆ ಗುರು-ಹಿರಿಯರು ತಂದೆ-ತಾಯಿಗಳನ್ನು ಗೌರವಿಸುವ ಸಂಸ್ಕೃತಿ ಸಂಸ್ಕಾರವನ್ನು ಕಲಿಯಬೇಕೆಂದು ತಿಳಿಸಿದರು.

ಇತ್ತೀಚಿನ ದಿನಗಳಲ್ಲಿ ಯುವ ಜನಾಂಗ ಮೊಬೈಲ್ ಗೀಳಿಗೆ ಬಲಿಯಾಗಿರುವುದು ಅತ್ಯಂತ ದುಃಖದ ಸಂಗತಿ. ಮೊಬೈಲನ್ನು ಒಳ್ಳೆಯದು, ಕೆಟ್ಟದ್ದು, ಎರಡಕ್ಕೂ ಬಳಸಿಕೊಳ್ಳಬಹುದು. ಆಯ್ಕೆ ನಿಮ್ಮ ಕೈಯಲ್ಲಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಜನಾಂಗದವರು ಕಷ್ಟದಲ್ಲಿರುವ ಬೇರೆ ಜಾತಿಯವರಿಗೆ ಸಹಾಯ ಮಾಡುವ ಗುಣ ಬೆಳೆಸಿಕೊಳ್ಳಿ. ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದಪುರಿ ಮಹಾಸ್ವಾಮಿಗಳು ಬೆಂಗಳೂರಿನ ಉದ್ಯಾನವನದಲ್ಲಿ 258 ದಿನಗಳ ಕಾಲ ಧರಣಿ ಸತ್ಯಾಗ್ರಹ ನಡೆಸಿದ ಫಲವಾಗಿ ಅಂದಿನ ಮುಖ್ಯಮಂತ್ರಿ ಬಸವರಾಜಬೊಮ್ಮಾಯಿ ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗದವರಿಗೆ ಶೇ.3 ರಿಂದ 7 ಹಾಗೂ ಶೇ.15 ರಿಂದ 17 ರಷ್ಟು ಮೀಸಲಾತಿಯನ್ನು ಹೆಚ್ಚಿಸಿರುವುದನ್ನು ಸದುಪಯೋಗಪಡಿಸಿಕೊಂಡು ಜನಾಂಗದ ಮಕ್ಕಳು ಶಿಕ್ಷಣವಂತರಾಗಿ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ, ರಾಜಕೀಯವಾಗಿ ಬಲಾಢ್ಯರಾಗಬಹುದು. ಸಂವಿಧಾನಶಿಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಮಾರ್ಗದಲ್ಲಿ ಎಲ್ಲರೂ ಸಾಗೋಣ. ಸದಾ ಜನಾಂಗದ ಜೊತೆಯಲ್ಲಿರುತ್ತೇನೆಂದು ಟಿ.ರಘುಮೂರ್ತಿ ಭರವಸೆ ನೀಡಿದರು.

ಚಿತ್ರದುರ್ಗ ವಾಲ್ಮೀಕಿ ನಾಯಕ ನೌಕರರ ಕ್ಷೇಮಾಭಿವೃದ್ದಿ ಮತ್ತು ಸಾಂಸ್ಕøತಿಕ ಸಂಘದ ಅಧ್ಯಕ್ಷ ಡಾ.ಹೆಚ್.ಗುಡ್ಡದೇಶ್ವರಪ್ಪ ಸಮಾವೇಶದ ಅಧ್ಯಕ್ಷತೆ ವಹಿಸಿ ಪ್ರಾಸ್ತಾವಿಕವಾಗಿ ಮಾತನಾಡಿರು.

ಹಿರಿಯ ನ್ಯಾಯವಾದಿ ಎಚ್.ಎಂ.ಎಸ್.ನಾಯಕ, ಮದಕರಿನಾಯಕ ವಿದ್ಯಾಸಂಸ್ಥೆಯ ಅಧ್ಯಕ್ಷ ಎಸ್.ಸಂದೀಪ್, ವಿಜಯನಗರ ಜಿಲ್ಲಾ ಪಂಚಾಯಿತಿ ಮುಖ್ಯ ಲೆಕ್ಕಾಧಿಕಾರಿ
ಸಿ.ಜಿ.ಶ್ರೀನಿವಾಸ್, ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ಜಂಟಿ ನಿರ್ದೇಶಕ ಕೆ.ಪಿ.ಮಧುಸೂದನ್, ಡಾ.ಸಿ.ಎಲ್.ಪಾಲಾಕ್ಷ ಸೇರಿದಂತೆ ನಾಯಕ ಸಮಾಜದ ಅನೇಕರು ವೇದಿಕೆಯಲ್ಲಿದ್ದರು.
ನಾಯಕ ಜನಾಂಗದ ಸಾಧಕರುಗಳಾದ ಮಹರ್ಷಿ ವಾಲ್ಮೀಕಿ ರಾಜ್ಯ ಪ್ರಶಸ್ತಿ ಪುರಸ್ಕøತ ಕಿಲಾರಿ ಜೋಗಯ್ಯ, ಬಿ.ಟಿ.ವಿ.ವರದಿಗಾರ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕøತ ರಾಜಶೇಖರ ಸಿ. ಉದ್ಯಮಿ ಮಂಜುಳ, ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಡಿ.ವೈ.ಎಸ್ಪಿ. ಗಣೇಶ್, ಹಿರಿಯ ನ್ಯಾಯವಾದಿ ಎಚ್.ಎಂ.ಎಸ್.ನಾಯಕ ಇವರುಗಳನ್ನು ಸನ್ಮಾನಿಸಲಾಯಿತು.

ಓ.ಬಿ.ಬಸವರಾಜಪ್ಪ, ಹೆಚ್.ತಿಪ್ಪಯ್ಯ, ಸವಿತ ಪಿ.ವಿ. ನಾಗರಾಜ ಎ. ರಾಜಪ್ಪ ಎಸ್. ವಿಮಲಾಕ್ಷಿ ಬಿ. ತಿಪ್ಪೇಸ್ವಾಮಿ ಎಂ.ಎಂ. ಜೆ.ಎಸ್.ರವಿಕುಮಾರ್, ಬೋರೇಶ ಎಂ.ಜಿ. ಹಾಗೂ ನಾಯಕ ಜನಾಂಗದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಯಿತು.

Tags :
Advertisement