Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಚಿತ್ರದುರ್ಗ ಜಿಲ್ಲೆಯ ತಾಲ್ಲೂಕುವಾರು ಮತದಾರರ ಅಂಕಿ ಅಂಶ ಇಲ್ಲಿದೆ...!

05:23 PM Jan 22, 2024 IST | suddionenews
Advertisement

 

Advertisement

ಸುದ್ದಿಒನ್, ಚಿತ್ರದುರ್ಗ.ಜ.22: ಭಾರತ ಚುನಾವಣಾ ಆಯೋಗದ ಸೂಚನೆಯಂತೆ ಜಿಲ್ಲೆಯ ವಿಧಾನಸಭಾ ಕ್ಷೇತ್ರವಾರು ಮತದಾರರ ಅಂತಿಮ ಪಟ್ಟಿಯನ್ನು ಸೋಮವಾರ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಮ್ಮುಖದಲ್ಲಿ ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ಪ್ರಕಟಿಸಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ವಿಧಾನಸಭಾ ಕ್ಷೇತ್ರವಾರು ಮತದಾರರ ಅಂತಿಮ ಪಟ್ಟಿ ಪ್ರಕಟ ಸಂಬಂಧ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ನಡೆಸಿದ ಸಭೆಯಲ್ಲಿ ಮತದಾರರ ಅಂತಿಮ ಪಟ್ಟಿ ಪ್ರಕಟಿಸಿ ಮಾತನಾಡಿದ ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ, ಚುನಾವಣಾ ಆಯೋಗದ ನಿರ್ದೇಶನದಂತೆ ವಿಧಾನಸಭಾ ಕ್ಷೇತ್ರವಾರು ಮತದಾರರ ಪಟ್ಟಿಗಳ ಅಂತಿಮ ಪ್ರಕಟಣೆಯನ್ನು ಸೋಮವಾರ ಪ್ರಕಟಿಸಲಾಗಿದೆ ಎಂದು ತಿಳಿಸಿದರು.

Advertisement

2023ರ ಅಕ್ಟೋಬರ್27 ರಂದು ವಿಧಾನಸಭಾ ಕ್ಷೇತ್ರವಾರು ಕರಡು ಮತದಾರರ ಪಟ್ಟಿ ಪ್ರಚುರಪಡಿಸಲಾಗಿತ್ತು. ನವೆಂಬರ್ ಹಾಗೂ ಡಿಸೆಂಬರ್ ಮಾಹೆಯಲ್ಲಿ ವಿಶೇಷ ಪರಿಷ್ಕರಣೆಕಾರ್ಯ ನಡೆದಿದ್ದು, ಇದೀಗ ಮತದಾರರ ಅಂತಿಮ ಪಟ್ಟಿ ಪ್ರಕಟಿಸಲಾಗಿದೆ. ಮತದಾರರ ಅಂತಿಮ ಪಟ್ಟಿ ಪ್ರಕಟವಾದ ನಂತರವೂ ಸಹ ನಿರಂತರವಾಗಿ ಮತದಾರರ ಪಟ್ಟಿಗೆ ಅರ್ಹರ ಸೇರ್ಪಡೆ ಹಾಗೂ ತಿದ್ದುಪಡಿಗೆ ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದರು.

ಜಿಲ್ಲೆಯಲ್ಲಿ 1418211 ಮತದಾರರು:  ಜಿಲ್ಲೆಯಲ್ಲಿ ಒಟ್ಟು 1661 ಮತಗಟ್ಟೆಗಳಿದ್ದು, ಕರಡು ಮತದಾರರ ಪಟ್ಟಿಯಲ್ಲಿ 1401830 ಮತದಾರರು ಇದ್ದರು.  ಮತದಾರರ ಅಂತಿಮ ಪಟ್ಟಿ ಪ್ರಕಟ ಅನ್ವಯ 704896 ಪುರುಷ ಮತದಾರರು, 713228 ಮಹಿಳಾ ಮತದಾರರು ಹಾಗೂ 87 ಇತರೆ ಮತದಾರರು ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು 1418211 ಮತದಾರರು ಇದ್ದಾರೆ ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ತಿಳಿಸಿದರು.

ಮೊಳಕಾಲ್ಮುರು ವಿಧಾನಸಭಾ ಕ್ಷೇತ್ರದಲ್ಲಿ 125058 ಪುರುಷರು, 124181 ಮಹಿಳೆಯರು ಹಾಗೂ 13 ಇತರೆ ಸೇರಿದಂತೆ ಒಟ್ಟು 249252 ಮತದಾರರರಿದ್ದಾರೆ.

ಚಳ್ಳಕೆರೆ ವಿಧಾನಸಭಾ ಕ್ಷೇತ್ರದಲ್ಲಿ 110448 ಪುರುಷರು, 112106 ಮಹಿಳೆಯರು ಹಾಗೂ 6 ಇತರೆ ಸೇರಿದಂತೆ ಒಟ್ಟು 222560 ಮತದಾರರಿದ್ದಾರೆ.

ಚಿತ್ರದುರ್ಗ ವಿಧಾನಸಭಾ ಕ್ಷೇತ್ರದಲ್ಲಿ 129809 ಪುರುಷರು, 134398 ಮಹಿಳೆಯರು ಹಾಗೂ 41 ಇತರೆ ಸೇರಿ ಒಟ್ಟು 264248 ಮತದಾರರಿದ್ದಾರೆ.

ಹಿರಿಯೂರು ವಿಧಾನಸಭಾ ಕ್ಷೇತ್ರದಲ್ಲಿ 121502 ಪುರುಷರು, 124210 ಮಹಿಳೆಯರು ಹಾಗೂ 16 ಇತರೆ ಮತದಾರರು ಸೇರಿದಂತೆ ಒಟ್ಟು 245728 ಮತದಾರರು ಇದ್ದಾರೆ.

ಹೊಸದುರ್ಗ ವಿಧಾನಸಭಾ ಕ್ಷೇತ್ರದಲ್ಲಿ 99860 ಪುರುಷರು, 99596 ಹಾಗೂ 1 ಇತರೆ ಮತದಾರರು ಸೇರಿದಂತೆ ಒಟ್ಟು 199457 ಮತದಾರರು ಇದ್ದಾರೆ. ಹೊಳಲ್ಕೆರೆ ವಿಧಾನಸಭಾ ಕ್ಷೇತ್ರದಲ್ಲಿ 118219 ಪುರುಷರು, 118737 ಮಹಿಳೆಯರು ಹಾಗೂ 10 ಇತರೆ ಸೇರಿದಂತೆ ಒಟ್ಟು 236966 ಮತದಾರರು ಇದ್ದಾರೆ. ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರಗಳು ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು 1418211 ಮತದಾರರು ಇದ್ದಾರೆ ಎಂದು ತಿಳಿಸಿದರು.

2023ರ ಅಕ್ಟೋಬರ್ ಹಾಗೂ ನವೆಂಬರ್ ಮಾಹೆಯಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಕಾರ್ಯಕ್ರಮದಲ್ಲಿ ಜಿಲ್ಲೆಯಲ್ಲಿ 11260 ಪುರುಷರು ಹಾಗೂ 14761 ಮಹಿಳೆಯರು ಹಾಗೂ 8 ಮಂದಿ ಇತರರು ಸೇರಿದಂತೆ ಒಟ್ಟು 26029 ಮತದಾರರು ಹೊಸದಾಗಿ ಮತದಾರರ ಪಟ್ಟಿಗೆ ಸೇರ್ಪಡೆಯಾಗಿದ್ದಾರೆ. ಮರಣ ಹೊಂದಿದ 9648 ಮತದಾರರನ್ನು ಗುರುತಿಸಿ ಅವರನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ ಎಂದರು.

35683 ಯುವ ಮತದಾರರು: ಮತದಾರರ ಅಂತಿಮ ಪಟ್ಟಿಯಲ್ಲಿ 18-19 ವರ್ಷ ವಯೋಮಿತಿಯ ಯುವ ಮತದಾರರು ಜಿಲ್ಲೆಯಲ್ಲಿ 35,683 ಮಂದಿ ಇದ್ದಾರೆ. ಕರಡು ಮತದಾರರ ಪಟ್ಟಿಯಲ್ಲಿ 23659 ಮತದಾರರು ಇದ್ದರು. ಕಳೆದ ಎರಡು-ಮೂರು ತಿಂಗಳಿಂದ ಬಿಎಲ್‍ಒಗಳು ಮನೆ ಮನೆ ಭೇಟಿ, ಕಾಲೇಜುಗಳಲ್ಲಿಯೂ ಸಹ ಯುವ ಮತದಾರರನ್ನು ಸೇರ್ಪಡೆ ಮಾಡಿದ್ದಾರೆ. ಚಿತ್ರದುರ್ಗ ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮತದಾರರ ನೊಂದಣಿ  ಕಾರ್ಯ ಮಾಡಿರುವುದಕ್ಕೆ ಭಾರತ ಚುನಾವಣಾ ಆಯೋಗವು ಸಹ ಶ್ಲಾಘನೆ ಮಾಡಿದೆ ಜಿಲ್ಲಾಧಿಕಾರಿಗಳು ತಿಳಿಸಿದರು.

ರಾಜಕೀಯ ಪಕ್ಷದವರು ಪ್ರತಿಯೊಂದು ಮತಗಟ್ಟೆಗೆ ಏಜೆಂಟರನ್ನು ನೇಮಕ ಮಾಡಬೇಕು. ಏಜೆಂಟರು ತಮ್ಮ ವ್ಯಾಪ್ತಿಯ ಮತದಾರರ ಪಟ್ಟಿಗೆ ಅರ್ಹರನ್ನು ಸೇರಿಸುವ,ಬಿಡತಕ್ಕ, ತಿದ್ದುಪಡಿ ಮಾಡಿಲು ಬಿಎಲ್‍ಓಗಳಿಗೆ ಸಹಕಾರ ನೀಡಬೇಕು ಎಂದು ಕೋರಿದರು.
ಮತದಾರರ ಪಟ್ಟಿಯಲ್ಲಿ ಮತದಾರರ ಹೆಸರನ್ನು ನೊಂದಾಯಿಸಲು ಪ್ರತಿಯೊಬ್ಬರ ನಾಗರೀಕರ ಹಕ್ಕಾಗಿರುತ್ತದೆ. ಈ ಸದಾಶಕಾಶವನ್ನು ಪ್ರತಿಯೊಬ್ಬರು ತಪ್ಪದೇ ಉಪಯೋಗಿಸಿಕೊಳ್ಳಬೇಕು. ಮತದಾರರ ಪಟ್ಟಿಯ ಬಗ್ಗೆ ಯಾವುದೇ ಸಂದೇಹಗಳಿದ್ದಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯ ಜಿಲ್ಲಾ ಸಂಪರ್ಕ ಕೇಂದ್ರದ ಸಹಾಯವಾಣಿ ಸಂಖ್ಯೆ 08194-222176 ಅಥವಾ ಟೋಲ್ ಫ್ರೀ ಸಂಖ್ಯೆ 1950 ಗೆ ಕರೆ ಮಾಡಬಹುದು ಎಂದು ತಿಳಿಸಿದರು.

ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಮಾತನಾಡಿ, ಅರ್ಹ ಮತದಾರರು ಸಂಬಂಧಿಸಿದ ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಲ್ಲದವರು ಹಾಗೂ ಹೆಸರು ಕೈಬಿಟ್ಟುಹೋಗಿರುವವರು ಹಾಗೂ ಮತದಾರರ ಪಟ್ಟಿಯಲ್ಲಿ ಮಾಹಿತಿಯನ್ನು ತಿದ್ದುಪಡಿ ಮಾಡಿಸಬೇಕಾದಲ್ಲಿ ಮತ್ತು ಅದೇ ವಿಧಾನಸಭಾ ಕ್ಷೇತ್ರದ ಬೇರೆ ಬೇರೆ ಮತಗಟ್ಟೆಗೆ ವರ್ಗಾಯಿಸಬೇಕಾಗಿದ್ದಲ್ಲಿ ನಿಗಧಿಪಡಿಸಿರುವ ನಮೂನೆಗಳಲ್ಲಿ ಅರ್ಜಿಗಳನ್ನು ಭರ್ತಿ ಮಾಡಿ ತಮ್ಮ ವ್ಯಾಪ್ತಿಯ ಮತದಾನ ಕೇಂದ್ರದಲ್ಲಿ, ತಾಲ್ಲೂಕು ಕಚೇರಿಯಲ್ಲಿ, ಉಪವಿಭಾಗಾಧಿಕಾರಿಗಳ ಕಾರ್ಯಾಲಯದಲ್ಲಿ ನೀಡಿ ಸ್ವೀಕೃತಿ ಪಡೆಯಬಹುದಾಗಿದೆ. ಹಾಗೂ  www.ceokarnataka.kar.nic.in & https://chitradurga.nic.in

ವೆಬ್‍ಸೈಟ್‍ನಲ್ಲಿಯೂ ಸಹ ಪರಿಶೀಲಿಸಿಕೊಂಡು ಪಟ್ಟಿಯಲ್ಲಿ ಹೆಸರು ಇಲ್ಲದಿದ್ದಲ್ಲಿ ಪೂರಕ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿಗಳನ್ನು VHA App (Voter help Line)  ನಲ್ಲಿಯೂ  ಆನ್‍ಲೈನ್ ಮೂಲಕ ಸಲ್ಲಿಸಹುದಾಗಿದೆ ಎಂದರು.

ಭಾವಚಿತ್ರವಿರುವ ಮತದಾರರ ಗುರುತಿನ ಚೀಟಿಯನ್ನು ಮತದಾರರು ನೀಡಿರುವ ವಿಳಾಸಕ್ಕೆ ಅಂಚೆ ಮೂಲಕ ಇನ್ನೂ ವಾರದೊಳಗೆ ಕಳುಹಿಸಲಾಗುವುದು ಎಂದರು.
ಸಭೆಯಲ್ಲಿ ಪ್ರಭಾರ ಉಪವಿಭಾಗಾಧಿಕಾರಿ ವಿವೇಕ್,  ಜೆಡಿಎಸ್ ಜಿಲ್ಲಾ ಮಹಾ ಪ್ರಧಾನ ಕಾರ್ಯದರ್ಶಿ ಗೋಪಾಲಸ್ವಾಮಿ ನಾಯಕ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಡಿ.ಎನ್.ಮೈಲಾರಪ್ಪ, ಕಾರ್ಯದರ್ಶಿ ಸಿ.ಜೆ.ನಾಸಿರುದ್ದೀನ್, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನರೇಂದ್ರ ಹೊನ್ನಾಳ್, ಸಿಪಿಐಎಂ ಡಿಒಸಿ ಸಿ.ಕೆ.ಗೌಸ್‍ಪೀರ್ ಸೇರಿದಂತೆ ಚುನಾವಣಾ ತಹಶೀಲ್ದಾರ್ ಎಂ.ಸಂತೋಷ್ ಕುಮಾರ್ ಹಾಗೂ ಚುನಾವಣೆ ಶಾಖೆಯ ಸಿಬ್ಬಂದಿ ವರ್ಗದವರು ಇದ್ದರು.

Advertisement
Tags :
chitradurga districtstatisticssuddionesuddione newsvotersಅಂಕಿ ಅಂಶಚಿತ್ರದುರ್ಗತಾಲ್ಲೂಕುವಾರುಮತದಾರರುಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article