Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಹಿರಿಯೂರು | ಗೋಡೆ ಕುಸಿದು ವೃದ್ದೆ ಸಾವು

07:53 PM Oct 21, 2024 IST | suddionenews
Advertisement

 

Advertisement

ಸುದ್ದಿಒನ್, ಹಿರಿಯೂರು, ಅಕ್ಟೋಬರ್. 21 : ನಿರಂತರ ಸುರಿದ ಮಳೆಯಿಂದ ಮನೆಯ ಗೋಡೆ ಕುಸಿದು ತಾಲ್ಲೂಕಿನ ಧರ್ಮಪುರ ಹೋಬಳಿಯ ಬ್ಯಾಡರಹಳ್ಳಿ ಗ್ರಾಮದ ವಾಸಿ ಮೀನಾಕ್ಷಮ್ಮ (63 ವರ್ಷ) ಮೃತಪಟ್ಟ ಘಟನೆ ಸೋಮವಾರ ನಡೆದಿದೆ.

ಘಟನೆ ವಿವರ : ತಾಲ್ಲೂಕಿನಲ್ಲಿ ಕಳೆದ ಕೆಲವು ದಿನಗಳಿಂದ
ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ವಾಸದ ಮನೆಯ ಗೋಡೆ ನೆನೆದು ಇಂದು (ಸೋಮವಾರ) ಮಧ್ಯಾಹ್ನ 12.00 ಗಂಟೆಗೆ ಮನೆ ಕುಸಿದು ಮೀನಾಕ್ಷಮ್ಮನವರ ಮೇಲೆ ಬಿದ್ದಿದೆ. ತಕ್ಷಣವೇ ಗಾಯಗೊಂಡ ಅವರನ್ನು ತಾಲ್ಲೂಕು ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಲಾಯಿತು. ಆದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

Advertisement

ಧರ್ಮಪುರ ಹೋಬಳಿಯ ರಾಜಸ್ವ ನಿರೀಕ್ಷಕರು ಹಾಗೂ ಗ್ರಾ.ಅ.ಅ. ಬ್ಯಾಡರಹಳ್ಳಿ ಸೇರಿದಂತೆ ಕಂದಾಯ ಇಲಾಖೆಯ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

Advertisement
Tags :
bengaluruchitradurgacollapseddiedhiriyurusuddionesuddione newsWomanಚಿತ್ರದುರ್ಗಬೆಂಗಳೂರುಸುದ್ದಿಒನ್ಸುದ್ದಿಒನ್ ನ್ಯೂಸ್ಹಿರಿಯೂರು
Advertisement
Next Article