ಹಿರಿಯೂರು | ಜೆಜಿ ಹಳ್ಳಿ ಭಾಗದ ಕೆರೆಗಳಿಗೆ ನೀರು ಹರಿಸಲು ಪ್ರಯತ್ನಿಸುವೆ : ಸಚಿವ ಡಿ ಸುಧಾಕರ್
ಹಿರಿಯೂರು : ನನಗೆ ಸುಳ್ಳು ಹೇಳುವುದು ಬರುವುದಿಲ್ಲ ಈಗಾಗಲೇ ವಾಣಿವಿಲಾಸ ಜಲಾಶಯಕ್ಕೆ ನೀರಿನ ಅಲೋಕೇಶನ್ ಆಗಿದ್ದು, ವಾಣಿವಿಲಾಸ ಜಲಾಶಯದಿಂದ ನೀರು ಹಂಚಿಕೆ ಮಾಡಲು ಸಾಧ್ಯವಿಲ್ಲ ಆದರೂ ನಾನು ಏನಾದರೂ ಮಾಡಿ ಭದ್ರಾ ಮೇಲ್ದಂಡೆ ಯೋಜನೆಯಿಂದ ಹೆಚ್ಚುವರಿ ನೀರು ಅಲೋಕೇಶನ್ ಮಾಡಿಸಿ 0.25 ಟಿಎಂಸಿ ನೀರನ್ನು ಜೆಜೆ ಹಳ್ಳಿ ಭಾಗಕ್ಕೆ ನೀರು ಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆಂದು ಜಿಲ್ಲಾ ಉಸ್ತುವಾರಿ ಸಚಿವ ಡಿ ಸುಧಾಕರ್ ಭರವಸೆ ನೀಡಿದರು.
ನಗರದ ಪ್ರವಾಸಿ ಮಂದಿರದಲ್ಲಿ ಭಾನುವಾರ ಸಂಜೆ ಜೆಜಿ ಹಳ್ಳಿ ಭಾಗದ ಎಲ್ಲಾ ಕೆರೆಗಳಿಗೆ ನೀರು ತುಂಬಿಸುವಂತೆ ನಡೆಸುತ್ತಿರುವ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ರೈತರ ಮುಖಂಡರ ಜೊತೆ ಸಭೆ ನಡೆಸಿ ಮಾತನಾಡಿದರು.
ಜೆಜಿ ಹಳ್ಳಿ ಭಾಗದ ಎಲ್ಲಾ ಕೆರೆಗಳಿಗೆ ನೀರು ಹರಿಸಲು ಲೈನಿಂಗ್, ಎಸ್ಟಿಮೆಂಟ್ ಮಾಡುವಂತೆ ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದರು. ನಂತರ ಸರ್ಕಾರದಿಂದ ಡಿಪಿಆರ್ ಮಾಡಿಸಲಾಗುತ್ತದೆ. ಬಳಿಕ ಸರ್ಕಾರದಿಂದ ಹಣ ಮಂಜೂರಾತಿ ಮಾಡಿಸಿ ಆ ಭಾಗಕ್ಕೆ ನೀರು ಕೊಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ನನಗೂ ನನ್ನ ಅವಧಿಯಲ್ಲಿ ಆ ಭಾಗಕ್ಕೆ ನೀರು ಬಂದರೆ ಸಾರ್ಥಕವಾಗುತ್ತದೆ ದಯಮಾಡಿ ರೈತರು ಧರಣಿ ಸ್ಥಗಿತಗೊಳಿಸಿ ಎಂದರು.
ಸಚಿವರ ಮಾತಿಗೆ ಪ್ರತಿಕ್ರಿಯಿಸಿದ ರೈತರು ಮೊದಲು ಡಿ ಪಿಆರ್ ರೆಡಿ ಮಾಡಿ ಅಲೋಕೇಶನ್ ಆದೇಶ ಬರುವವರೆಗೂ ಹೋರಾಟ ನಿಲ್ಲುವುದಲ್ಲ ಎಂದು ಹೇಳಿದರು. ಈ ಸಂದರ್ಭದಲ್ಲಿ ರೈತ ಸಂಘದ ಅಧ್ಯಕ್ಷ ಕೆಟಿ ತಿಪ್ಪೇಸ್ವಾಮಿ, ಆಲೂರು ಸಿದ್ದರಾಮಣ್ಣ,
ಈರಣ್ಣ, ಕನ್ಯಪ್ಪ, ತಿಮ್ಮರಾಯಪ್ಪ , ಎಂಆರ್ ಈರಣ್ಣ, ನಾಗೇಂದ್ರಪ್ಪ, ವಿಶ್ವನಾಥ್, ಪಾಪಣ್ಣ, ವಜೀರ್ ಸಾಬ್, ಕಲೀಮ್ ಸಾಬ್, ಕೆ ಆರ್ ಹಳ್ಳಿ ರಾಜಪ್ಪ, ರಾಮಯ್ಯ, ಜೈರಾಮಯ್ಯ, ರಾಮಕೃಷ್ಣ, ಸುರೇಶ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.