Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಹೊಳಲ್ಕೆರೆ | ದಾಖಲೆ ಇಲ್ಲದ 8 ಕೋಟಿ ಹಣ ವಶ

10:25 PM Nov 29, 2023 IST | suddionenews
Advertisement

ಸುದ್ದಿಒನ್, ಚಿತ್ರದುರ್ಗ : ದಾಖಲೆ ಇಲ್ಲದೆ ಕಾರಿನಲ್ಲಿ ಸಾಗಿಸುತ್ತಿದ್ದ 8 ಕೋಟಿ ಹಣವನ್ನು  ಹೊಳಲ್ಕೆರೆ ಪೊಲೀಸರು ಬುಧವಾರ ರಾತ್ರಿ ವಶಪಡಿಸಿಕೊಂಡಿದ್ದಾರೆ.

Advertisement

ಜಿಲ್ಲೆಯ ಹೊಳಲ್ಕೆರೆ ತಾಲ್ಲೂಕಿನ ಮಲ್ಲಾಡಿಹಳ್ಳಿ ಬಳಿ ಚಿತ್ರದುರ್ಗದಿಂದ ಶಿವಮೊಗ್ಗದತ್ತ ತೆರಳುತ್ತಿದ್ದ ಇನೋವಾ ಕಾರಿನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಹಣವನ್ನು ವಶಕ್ಕೆ ಪಡೆದು ಚಾಲಕ ಸಚಿನ್ ನನ್ನು ವಿಚಾರಣೆ ನಡೆಸಿದ್ದಾರೆ.

ಅಪರಿಚಿತರು ಪೊಲೀಸರಿಗೆ ದೂರವಾಣಿಯ ಮೂಲಕ ಕರೆ ಮಾಡಿ ಕಾರಿನಲ್ಲಿ ಅಕ್ರಮವಾಗಿ ಹಣ ಸಾಗಣೆ ಮಾಡುತ್ತಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ. ಮಾಹಿತಿ ಅನ್ವಯ ಹೊಳಲ್ಕೆರೆ ಪೊಲೀಸರು ಕಾರ್ಯಾಚರಣೆ ನಡೆಸಿ ಕಾರನ್ನು ಪರಿಶೀಲಿಸಿದಾಗ ಹಣ ಪತ್ತೆಯಾಗಿದೆ.

Advertisement

ಚಿತ್ರದುರ್ಗದ ಉದ್ಯಮಿಯೊಬ್ಬರಿಗೆ ಸೇರಿದ ಹಣ ಇದಾಗಿದ್ದು, ಶಿವಮೊಗ್ಗಕ್ಕೆ ಕಾರಿನಲ್ಲಿ  ಸಾಗಿಸಲಾಗುತ್ತಿತ್ತು. ಈ ಕುರಿತು
ಯಾವುದೇ ದೂರು ದಾಖಲಾಗಿಲ್ಲ. ವಿಚಾರಣೆ ಬಳಿಕ ಕೇಸ್ ದಾಖಲಿಸುವ ಸಾಧ್ಯತೆ ಇದೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಹೊಳಲ್ಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Advertisement
Tags :
8 crore8 ಕೋಟಿ ಹಣ ವಶbreaking newschitradurgaChitradurga latest newsholalkeremoney seizedundocumentedಚಿತ್ರದುರ್ಗಹೊಳಲ್ಕೆರೆ
Advertisement
Next Article