Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಹೊಳಲ್ಕೆರೆ | ಅತ್ಯಾಚಾರ, ಕೊಲೆ ಮಾಡಿ ದುಷ್ಕರ್ಮಿಗಳು ಪರಾರಿ..!

08:40 PM Jan 11, 2024 IST | suddionenews
Advertisement

 

Advertisement

ಸುದ್ದಿಒನ್, ಚಿತ್ರದುರ್ಗ, ಜನವರಿ.11 : ಮಹಿಳೆ ಮೇಲೆ ದುಷ್ಕರ್ಮಿಗಳು ಅತ್ಯಾಚಾರವೆಸಗಿ ಕೊಲೆ ಮಾಡಿ ಪರಾರಿಯಾದ ಘಟನೆ ಜಿಲ್ಲೆಯ ಹೊಳಲ್ಕೆರೆ ತಾಲ್ಲೂಕಿನ ಚಿಕ್ಕಜಾಜೂರು ವ್ಯಾಪ್ತಿಯ ಚಿಕ್ಕಂದವಾಡಿ ಗ್ರಾಮದ ಸರ್ಕಾರಿ ಗೋಮಾಳದಲ್ಲಿ ಇಂದು (ಗುರುವಾರ) ಬೆಳಿಗ್ಗೆ ಈ ಘಟನೆ ನಡೆದಿದೆ. ಮೃತ ಮಹಿಳೆಯನ್ನು ಚಿಕ್ಕಂದವಾಡಿ ಗ್ರಾಮದ ಸುಂದರಮ್ಮ (55) ವರ್ಷ ಎಂದು ಗುರುತಿಸಲಾಗಿದೆ.

ದುಷ್ಕರ್ಮಿಗಳ ಅತ್ಯಾಚಾರ ಮಾಡಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಆಕೆಯ ಮನೆಯಿಂದ ಸುಮಾರು 1.5 ಕಿ.ಮೀ ದೂರದಲ್ಲಿ ಮೃತ ದೇಹ ಪತ್ತೆಯಾಗಿದೆ. ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದ್ರ ಕುಮಾರ್ ಮೀನಾ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೊಳಲ್ಕೆರೆಯ ಚಿಕ್ಕಜಾಜೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳ ಹುಡುಕಾಟಕ್ಕಾಗಿ ಪೊಲೀಸರು ತೀವ್ರ ಶೋಧ ಕಾರ್ಯ ಮುಂದುವರಿಸಿದ್ದಾರೆ.

Advertisement

Advertisement
Tags :
chitradurgacriminalsescapeholalkeremurderRapesuddioneಅತ್ಯಾಚಾರಕೊಲೆದುಷ್ಕರ್ಮಿಗಳುಪರಾರಿಸುದ್ದಿಒನ್ಹೊಳಲ್ಕೆರೆ
Advertisement
Next Article