For the best experience, open
https://m.suddione.com
on your mobile browser.
Advertisement

ಗೌರವ ಡಾಕ್ಟರೇಟ್‌ ಪುರಸ್ಕೃತ ಕೆ.ಎಂ.ವೀರೇಶ್‍ರವರಿಗೆ ಕೋಟೆ ನಾಡಿನ ಗೆಳೆಯರ ಬಳಗದಿಂದ ಸನ್ಮಾನ

06:03 PM Mar 20, 2024 IST | suddionenews
ಗೌರವ ಡಾಕ್ಟರೇಟ್‌ ಪುರಸ್ಕೃತ ಕೆ ಎಂ ವೀರೇಶ್‍ರವರಿಗೆ ಕೋಟೆ ನಾಡಿನ ಗೆಳೆಯರ ಬಳಗದಿಂದ ಸನ್ಮಾನ
Advertisement

Advertisement
Advertisement

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552

Advertisement

ಸುದ್ದಿಒನ್, ಚಿತ್ರದುರ್ಗ, ಮಾರ್ಚ್.20 : ಶಿಕ್ಷಣ ಕ್ಷೇತ್ರದಲ್ಲಿನ ಸೇವೆಯನ್ನು ಗುರುತಿಸಿ ಮೈಸೂರು ಮುಕ್ತ ವಿಶ್ವವಿದ್ಯಾನಿಲಯ ಬಾಪೂಜಿ ಶಿಕ್ಷಣ ಮಹಾವಿದ್ಯಾಲಯದ ಕಾರ್ಯದರ್ಶಿ, ಜಿಲ್ಲಾ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಕೆ.ಎಂ.ವೀರೇಶ್‍ರವರಿಗೆ ಡಾಕ್ಟರೇಟ್ ನೀಡಿ ಗೌರವಿಸಿರುವುದಕ್ಕೆ ಕೋಟೆ ನಾಡಿನ ಗೆಳೆಯರ ಬಳಗದ ವತಿಯಿಂದ ಸನ್ಮಾನಿಸಲಾಯಿತು.

Advertisement
Advertisement

ಬಾಪೂಜಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಕೆ.ಎಂ.ವೀರೇಶ್‍ರವರಿಗೆ ಬೃಹದಾಕಾರವಾದ ಹಾರ, ಮೈಸೂರ ಪೇಟೆ ತೊಡಿಸಿ ಗೌರವಿಸಲಾಯಿತು.
ಇತಿಹಾಸ ಸಂಶೋಧಕ ಡಾ.ಬಿ.ರಾಜಶೇಖರಪ್ಪ ಮಾತನಾಡಿ ಕೆ.ಎಂ.ವೀರೇಶ್‍ರವರು ಎಸ್.ಜೆ.ಎಂ. ವಿದ್ಯಾ ಸಂಸ್ಥೆಯಲ್ಲಿದ್ದಾಗಿನಿಂದಲೂ ಉತ್ತಮ ಕೆಲಸಗಳನ್ನು ಮಾಡಿಕೊಂಡು ಬಂದಿದ್ದರಲ್ಲದೆ ಅನೇಕರ ಜೀವನಕ್ಕೆ ನೆರವಾಗಿದ್ದಾರೆ. ತದ ನಂತರ ಅವರದೆ ಆದ ಬಾಪೂಜಿ ಸಮೂಹ ಶಿಕ್ಷಣ ಸಂಸ್ಥೆ ಆರಂಭಿಸಿ ಬಡ ಮಕ್ಕಳಿಗೆ ಉಚಿತ ಶಿಕ್ಷಣ ನೀಡಿದ್ದಾರೆಂದು ಸ್ಮರಿಸಿದರು.

ಬಾಪೂಜಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಸಾಕಷ್ಟು ಬಡವರ ಜೀವನಕ್ಕೆ ದಾರಿ ತೋರಿಸಿರುವ ಕೆ.ಎಂ.ವೀರೇಶ್‍ರವರು ಒಳ್ಳೆಯ ಕಲಾವಿದರೂ ಹೌದು. ವೀರ ಸನ್ಯಾಸಿ ಸ್ವಾಮಿ ವಿವೇಕಾನಂದ, ಮುರುಘಾಸ್ವಾಮಿ ಪಾತ್ರವನ್ನು ಅಚ್ಚುಕಟ್ಟಾಗಿ ಅಭಿನಯಿಸುತ್ತಿದ್ದರು. ಅನೇಕ ಕಾರ್ಯಕ್ರಮಗಳಿಗೆ ದೇಣಿಗೆ ನೀಡುವುದು ಇವರ ಉದಾರತನ. ಕಲಾವಿದರಿಗೆ, ಲೇಖಕರಿಗೆ ಆಶ್ರಯ ನೀಡಿದ್ದಾರೆ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾಗಿದ್ದಾಗ ಅಖಿಲ ಭಾರತ ಎಪ್ಪತ್ತೈದನೆ ಕನ್ನಡ ಸಾಹಿತ್ಯ ಸಮ್ಮೇಳನ ಚಿತ್ರದುರ್ಗದಲ್ಲಿ ನಡೆದಿದ್ದಂತೂ ಅತ್ಯಂತ ಸಂತೋಷದ ಸಂಗತಿ ಎಂದು ಗುಣಗಾನ ಮಾಡಿದರು.

ಜಿಲ್ಲಾ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿರುವ ಕೆ.ಎಂ.ವೀರೇಶ್‍ರವರು ಚಿತ್ರದುರ್ಗದಲ್ಲಿ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ಸಮ್ಮೇಳನ ನಡೆಸಲು ಹೊರಟಿರುವುದು ಇನ್ನು ಖುಷಿಯ ವಿಚಾರ. ಚಿತ್ರದುರ್ಗ ಶರಣ ಸಾಹಿತ್ಯಕ್ಕೆ ಅಪಾರ ಕೊಡುಗೆ ನೀಡಿರುವ ಸ್ಥಳ. ಮುರುಘಾ ಪರಂಪರೆಯ ಯತಿಗಳ ಸಾಹಿತ್ಯ ಸೇವೆ ಕೂಡ ಅಪಾರವಾಗಿದೆ ಎಂದು ನೆನಪಿಸಿಕೊಂಡರು.

ಶಿಕ್ಷಣ ಹಾಗೂ ಸಾಹಿತ್ಯ ಕ್ಷೇತ್ರದಲ್ಲಿನ ಇವರ ಪ್ರಾಮಾಣಿಕ ಸೇವೆಯನ್ನು ಗುರುತಿಸಿ ಮೈಸೂರು ವಿಶ್ವವಿದ್ಯಾನಿಲಯ ಗೌರವ ಡಾಕ್ಟರೇಟ್ ನೀಡಿ ಸನ್ಮಾನಿಸಿರುವುದು ಚಿತ್ರದುರ್ಗಕ್ಕೆ ಸಂದ ಕೀರ್ತಿ ಎಂದು ಡಾ.ಬಿ.ರಾಜಶೇಖರಪ್ಪ ಹೇಳಿದರು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಕೆ.ಎಂ.ವೀರೇಶ್ ಶಿಕ್ಷಣ ರಂಗದಲ್ಲಿ ನಾನು ಸಲ್ಲಿಸಿರುವ ಸೇವೆಯನ್ನು ಗುರುತಿಸಿ ಮೈಸೂರು ವಿಶ್ವವಿದ್ಯಾನಿಲಯ ಗೌರವ ಡಾಕ್ಟರೇಟ್ ನೀಡಿರುವುದಕ್ಕೆ ಸಂತಸಗೊಂಡಿರುವ ಅಪಾರ ಅಭಿಮಾನಿಗಳು ನನ್ನನ್ನು ಗೌರವಿಸುತ್ತಿರುವುದಕ್ಕೆ ಚಿರಋಣಿಯಾಗಿದ್ದೇನೆಂದು ಕೃತಜ್ಞತೆಗಳನ್ನು ಸಲ್ಲಿಸಿದರು.

ಮದಕರಿನಾಯಕ ಸಾಂಸ್ಕøತಿಕ ಕೇಂದ್ರದ ಅಧ್ಯಕ್ಷ ಡಿ.ಗೋಪಾಲಸ್ವಾಮಿ ನಾಯಕ ಮಾತನಾಡಿ ಶೈಕ್ಷಣಿಕ, ಸಾಮಾಜಿಕ, ಸಾಹಿತ್ಯಿಕ ಕ್ಷೇತ್ರಗಳಲ್ಲಿ ಸಮಾಜಮುಖಿಯಾಗಿ ಸೇವೆ ಸಲ್ಲಿಸುತ್ತಿರುವ ಕೆ.ಎಂ.ವೀರೇಶ್‍ರವರ ಕಾಳಜಿಯನ್ನು ಗುರುತಿಸಿ ಮೈಸೂರು ವಿಶ್ವವಿದ್ಯಾನಿಲಯ ಗೌರವ ಡಾಕ್ಟರೇಟ್ ಪ್ರಶಸ್ತಿ ನೀಡಿರುವುದು ಅವರ ಪರಿಶ್ರಮಕ್ಕೆ ತಕ್ಕ ಪ್ರತಿಫಲ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾಗಿಯೂ ಕನ್ನಡಾಂಭೆಗೆ ಸೇವೆ ಸಲ್ಲಿಸಿರುವ ಇವರು ಜಿಲ್ಲಾ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷರಾಗಿ ಸೇವೆಯನ್ನು ಮುಂದುವರೆಸುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಇನ್ನು ಉನ್ನತ ಮಟ್ಟದ ಪ್ರಶಸ್ತಿಗಳು ಲಭಿಸಲಿ ಎಂದು ಶುಭ ಹಾರೈಸಿದರು.

ಆರ್ಥಿಕ ಚಿಂತಕ ಡಾ.ಜಿ.ಎನ್.ಮಲ್ಲಿಕಾರ್ಜುನಪ್ಪ, ಡಾ.ಪಿ.ಯಶೋಧ ಬಿ.ರಾಜಶೇಖರಪ್ಪ, ನಾಗರಾಜ್ ಸಂಗಮ್, ಕೆ.ಇ.ಬಿ.ಷಣ್ಮುಖಪ್ಪ, ಸೋಮು, ಕಿರಣ್ ಇನ್ನು ಅನೇಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Advertisement
Tags :
Advertisement