Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಪ್ರಜಾಪ್ರಭುತ್ವಕ್ಕಾಗಿ ಮಾನವ ಸರಪಳಿ: ಜಿಲ್ಲೆಯಲ್ಲಿ ಲಕ್ಷಕ್ಕೂ ಹೆಚ್ಚು ಜನರು ಭಾಗಿ : ಸಚಿವ ಡಿ.ಸುಧಾಕರ್

06:38 PM Sep 09, 2024 IST | suddionenews
Advertisement

ಚಿತ್ರದುರ್ಗ. ಸೆ.09: ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಸೆ.15ರಂದು ಜಿಲ್ಲೆಯ ಲಕ್ಷಕ್ಕೂ ಹೆಚ್ಚು ಜನರಿಂದ 140 ಕಿ.ಮೀ ವ್ಯಾಪ್ತಿ ಮಾನವ ಸರಪಳಿ ನಿರ್ಮಾಣಗೊಳ್ಳಲಿದೆ ಎಂದು ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಹೇಳಿದರು.

Advertisement

ಚಳ್ಳಕೆರೆ ತಾಲ್ಲೂಕು ಪಂಚಾಯಿತಿ ಕಾರ್ಯಾಲಯದಲ್ಲಿ ಸೋಮವಾರ ಅಂತರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆ ಮಾನವ ಸರಪಳಿ ನಿರ್ಮಾಣ ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.
ಸರ್ಕಾರ ಬೃಹತ್ ಆಂದೋಲನ ರೂಪಿಸುವ ಮೂಲಕ ಪ್ರಜಾಪ್ರಭುತ್ವಕ್ಕೆ ಶಕ್ತಿ ತುಂಬಲಿದೆ. ಚುನಾಯಿತ ಜನಪ್ರತಿನಿಧಿಗಳು, ಸಂಘ ಸಂಸ್ಥೆಗಳು, ಮಹಿಳಾ ಸಂಘಟನೆಗಳು, ಅಂಗನವಾಡಿ, ಆಶಾ ಕಾರ್ಯಕರ್ತೆಯರು, ವಿದ್ಯಾರ್ಥಿಗಳು, ಸ್ತಿçÃಶಕ್ತಿ, ಯುವಕ ಸಂಘಗಳು ಪ್ರಜಾಪ್ರಭುತ್ವಕ್ಕಾಗಿ ಮಾನವ ಸರಪಳಿ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಗೊಳಿಸಬೇಕು. ಚಿತ್ರದುರ್ಗ ಜಿಲ್ಲೆಯಲ್ಲಿ ಮೊಳಕಾಲ್ಮೂರು, ಚಳ್ಳಕೆರೆ, ಹಿರಿಯೂರು ತಾಲ್ಲೂಕುಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ಅವಕಾಶ ಮಾಡಿಕೊಟ್ಟಿದೆ ಎಂದರು.

ಸರ್ಕಾರ ರಾಜ್ಯದ ಜನತೆಯ ಕಲ್ಯಾಣಕ್ಕಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತರುವ ಮೂಲಕ ಬಡವರ ಸಂಕಷ್ಟಗಳ ನಿವಾರಣೆಗೆ ಪ್ರಾಮಾಣಿಕ ಪ್ರಯತ್ನ ನಡೆಸುತ್ತಿದೆ. ಜನಪರ ಆಡಳಿತ ನೀಡುವಲ್ಲಿ ಯಶಸ್ವಿ ಹೆಜ್ಜೆ ಇಟ್ಟಿದೆ. ಪ್ರಜಾಪ್ರಭುತ್ವದ ಸಂರಕ್ಷಣೆಗಾಗಿ ಅಂತರಾಷ್ಟಿçÃಯ ಪ್ರಜಾಪ್ರಭುತ್ವ ದಿನಾಚರಣೆ, ಪ್ರಜಾಪ್ರಭುತ್ವಕ್ಕಾಗಿ ಮಾನವ ಸರಪಳಿ ನಿರ್ಮಿಸಿ ಜಾಗೃತಿ ಮೂಡಿಸಲಾಗುವುದು ಈ ಕಾರ್ಯಕ್ರಮಕ್ಕೆ ಸರ್ಕಾರಿ ಹಾಗೂ ಸರ್ಕಾರೇತರ ಸಂಸ್ಥೆಗಳು ಸಹಕಾರ ನೀಡಿ ಎಂದು ಮನವಿ ಮಾಡಿದರು.

Advertisement

ಶಾಸಕ ಟಿ.ರಘುಮೂರ್ತಿ ಮಾತನಾಡಿ, ಚಳ್ಳಕೆರೆ ವಿಧಾನಸಭಾ ಕ್ಷೇತ್ರದಿಂದ 40 ಸಾವಿರಕ್ಕೂ ಹೆಚ್ಚು ಜನರು ಭಾಗವಹಿಸುವಂತೆ ಕಾರ್ಯಕ್ರಮ ರೂಪಿಸಲಾಗಿದೆ.ಇಂತಹ ಕಾರ್ಯಕ್ರಮಗಳಿಂದ ಎಲ್ಲರಲ್ಲೂ ದೇಶದ ಬಗ್ಗೆ ಅಭಿಮಾನ ಮೂಡಲಿದೆ. ಸರ್ಕಾರ ಇದೇ ಮೊದಲ ಬಾರಿಗೆ ಭಾರಿ ಪ್ರಮಾಣದ ಕಾರ್ಯಕ್ರಮ ರೂಪಿಸುವ ಮೂಲಕ ಪ್ರಜಾಪ್ರಭುತ್ವದ ರಕ್ಷಣೆಗೆ ಮುಂದಾಗಿದೆ ಎಂದರು.

 

ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮಾತನಾಡಿ, ಅಂತರಾಷ್ಟಿçÃಯ ಪ್ರಜಾಪ್ರಭುತ್ವ ದಿನಾಚರಣೆ ಪ್ರಜಾಪ್ರಭುತ್ವಕ್ಕಾಗಿ ಮಾನವ ಸರಪಳಿ ನಿರ್ಮಾಣ ಕಾರ್ಯಕ್ರಮ ಜಿಲ್ಲೆಯಲ್ಲಿ ಹೆಚ್ಚು ಯಶಸ್ಸು ಕಾಣಬೇಕಿದೆ. ಪ್ರತಿ ಕಿ.ಮೀಗೆ 850ರಂತೆ ಜನರು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಅವಕಾಶ ಕಲ್ಪಿಸಿದೆ. ಇದೇ ಸೆ.15ರಂದು ಭಾನುವಾರ ಬೆಳಗ್ಗೆ ಈ ಕಾರ್ಯಕ್ರಮ ಆರಂಭವಾಗಲಿದ್ದು, ಮಾನವ ಸರಪಳಿ ನಿರ್ಮಿಸುವವರಿಗೆ ಜಿಲ್ಲಾಡಳಿತದಿಂದ ಅಗತ್ಯ ಮುಂಜಾಗ್ರತೆ ಕ್ರಮ ವಹಿಸಲಾಗುವುದು ಎಂದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ ಸೋಮಶೇಖರ್, ಉಪವಿಭಾಗಾಧಿಕಾರಿ ಎಂ.ಕಾರ್ತಿಕ್, ಕೃಷಿ ಇಲಾಖೆ ಜಂಟಿ ನಿರ್ದೇಶಕ ಮಂಜುನಾಥ, ತಹಶೀಲ್ದಾರ್ ರೇಹಾನ್ ಪಾಷ, ಇಒ ಶಶಿಧರ, ನಗರಸಭೆ ಅಧ್ಯಕ್ಷೆ ಜೈತುಂಬಿ, ಉಪಾಧ್ಯಕ್ಷೆ ಸುಜಾತ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.

Advertisement
Tags :
bengaluruchitradurgademocracyHuman chainMinister D. Sudhakarsuddionesuddione newsಚಿತ್ರದುರ್ಗಪ್ರಜಾಪ್ರಭುತ್ವಬೆಂಗಳೂರುಮಾನವ ಸರಪಳಿಸಚಿವ ಡಿ.ಸುಧಾಕರ್ಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article