For the best experience, open
https://m.suddione.com
on your mobile browser.
Advertisement

“ಉತ್ತಮ ಜೀವನಕ್ಕೆ ಮಾನವ ಹಕ್ಕುಗಳು ಅವಶ್ಯಕ : ಹಿರಿಯ ಸಿವಿಲ್ ನ್ಯಾಯಾಧೀಶ ಎಂ.ವಿಜಯ್

04:35 PM Jan 12, 2024 IST | suddionenews
“ಉತ್ತಮ ಜೀವನಕ್ಕೆ ಮಾನವ ಹಕ್ಕುಗಳು ಅವಶ್ಯಕ   ಹಿರಿಯ ಸಿವಿಲ್ ನ್ಯಾಯಾಧೀಶ ಎಂ ವಿಜಯ್
Advertisement

ಚಿತ್ರದುರ್ಗ. ಜ.12: “ಸಾರ್ವಜನಿಕರು ಯಾವುದೇ ಅಡೆತಡೆ ಇಲ್ಲದೇ ಸಮಾಜದಲ್ಲಿ ಘನತೆಯಿಂದ ಜೀವನ ನಡೆಸಲು ಮಾನವ ಹಕ್ಕುಗಳು ಅವಶ್ಯಕ” ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಎಂ.ವಿಜಯ್ ಹೇಳಿದರು.

Advertisement
Advertisement

ಚಿತ್ರದುರ್ಗ ತಾಲ್ಲೂಕು ಜಿ.ಆರ್.ಹಳ್ಳಿಯ ದಾವಣಗೆರೆ ವಿಶ್ವವಿದ್ಯಾಲಯ ಜ್ಞಾನಗಂಗೋತ್ರಿ ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಶುಕ್ರವಾರ ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯ, ನೆಹರು ಯುವ ಕೇಂದ್ರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ, ದಾವಣಗೆರೆ ವಿಶ್ವವಿದ್ಯಾನಿಲಯ ಜಿ.ಆರ್.ಹಳ್ಳಿ ಜ್ಞಾನ ಗಂಗೋತ್ರಿ ಸ್ನಾತಕೋತ್ತರ ಅಧ್ಯಯನ ಕೇಂದ್ರ ಇವರುಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಸ್ವಾಮಿ ವಿವೇಕಾನಂದರ 161ನೇ ಜನ್ಮ ದಿನಾಚರಣೆ-ರಾಷ್ಟ್ರೀಯ ಯುವ ದಿನಾಚರಣೆ ಅಂಗವಾಗಿ ಯುವ ಜನರಿಗೆ ಕಾನೂನು ಅರಿವು-ನೆರವು ಕಾರ್ಯಕ್ರಮ ಉದ್ಘಾಟಿಸಿ, ಮಾನವ ಹಕ್ಕುಗಳ ಕುರಿತು ಉಪನ್ಯಾಸ ನೀಡಿದರು.

Advertisement

ನಮಗೆ ನೈಸರ್ಗಿಕವಾಗಿ, ನಮ್ಮ ಅವಶ್ಯಕತೆ, ಉಳಿವಿಗಾಗಿ, ಅಸ್ತಿತ್ವಕ್ಕಾಗಿ ಇರಬೇಕಾದ ಮೂಲಭೂತ ಹಕ್ಕು ಮತ್ತು ಸ್ವಾತಂತ್ರ್ಯವೇ ಮಾನವ ಹಕ್ಕುಗಳು. ಈ ಮಾನವ ಹಕ್ಕುಗಳು ಜಾಗತಿಕವಾಗಿ ಎಲ್ಲರಿಗೂ ಯಾವುದೇ ಲಿಂಗಭೇದವಿಲ್ಲದೇ ಸಿಗುವಂತಹ ಹಕ್ಕು ಮತ್ತು ಸ್ವಾತಂತ್ರ್ಯ ಎಂದು ಹೇಳಿದರು.
ಮಾನವ ಹಕ್ಕುಗಳ ಇಲ್ಲದಿದ್ದರೆ ಸಮಾಜದಲ್ಲಿ ಅರಾಜಕತೆ ಸೃಷ್ಠಿಯ ಜೊತೆಗೆ ಮನುಷ್ಯನ ಅಸ್ತಿತ್ವವೂ ಕಳೆದುಹೋಗಲಿದೆ. ಹಾಗಾಗಿ ಮಾನವ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾ, ರಾಜ್ಯ ಮತ್ತು ರಾಷ್ಟ್ರೀಯ ಮಟ್ಟದಲ್ಲಿ ಮಾನವ ಹಕ್ಕುಗಳ ಆಯೋಗ ಇರಲಿದ್ದು, ಮಾನವ ಹಕ್ಕುಗಳ ಉಲ್ಲಂಘನೆಯಾದ ಸಂದರ್ಭದಲ್ಲಿ ರಕ್ಷಣೆ ನೀಡಿ, ಉಲ್ಲಂಘನೆ ಮಾಡಿದವರ ವಿರುದ್ಧ ಕ್ರಮಕೈಗೊಳ್ಳಲಾಗುತ್ತಿದೆ ಎಂದು ತಿಳಿದರು.

Advertisement

ಜಿಲ್ಲಾ ಯುವಜನ ಅಧಿಕಾರಿ ಎನ್.ಸುಹಾಸ್  ಮಾತನಾಡಿ, ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆ ಅಂಗವಾಗಿ ದೇಶದೆಲ್ಲೆಡೆ ರಾಷ್ಟ್ರೀಯ ಯುವ ದಿನಾಚರಣೆ ಆಚರಿಸಲಾಗುತ್ತಿದೆ. ಯುವಜನರನ್ನು ಒಳ್ಳೆಯ ಪ್ರಜೆಗಳಾಗಿ, ಉತ್ತಮ ವ್ಯಕ್ತಿತ್ವ ನಿರ್ಮಾಣ, ದೇಶದ ಪ್ರಗತಿಯಲ್ಲಿ ಯುವಜನರು ಸಕ್ರಿಯವಾಗಿ ತೊಡಗಿಸಿಕೊಳ್ಳುವ ನಿಟ್ಟಿನಲ್ಲಿ ಯುವ ದಿನಾಚರಣೆ ಆಚರಿಸಲಾತ್ತಿದೆ ಎಂದು ತಿಳಿಸಿದರು.

ಭಾರತ ದೇಶವು ಹೆಚ್ಚಿನ ಯುವ ಜನರನ್ನು ಹೊಂದಿರುವ ದೇಶವಾಗಿದ್ದು, ಯುವ ಜನರು ದೇಶದ ನಿರ್ಮಾಣದ ಕಡೆ ಹಾಗೂ ಉತ್ತಮ ವ್ಯಕ್ತಿತ್ವ ನಿರ್ಮಾಣದ ಕಡೆ ಒಲವು ತೋರಬೇಕು. ಸ್ವಾಮಿ ವಿವೇಕಾನಂದರ ಸಂದೇಶಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಅವರು ತೋರಿದ ದಾರಿಯಲ್ಲಿ ನಡೆಯೋಣ ಎಂದು ಸಲಹೆ ನೀಡಿದರು.
ವಕೀಲರ ಸಂಘದ ಅಧ್ಯಕ್ಷ ವೈ.ತಿಪ್ಪೇಸ್ವಾಮಿ ಮಾತನಾಡಿ, ಯುವ ಜನತೆ ಸ್ವಾಮಿ ವಿವೇಕಾನಂದರ ಆದರ್ಶಗಳನ್ನು ನೆನಪಿಸಿಕೊಳ್ಳಬೇಕು. ಯುವ ಜನರ ಪ್ರೇರಣೆ, ಮೌಲ್ಯಗಳ ಬಹುದೊಡ್ಡ ಆದರ್ಶ ವ್ಯಕ್ತಿತ್ವ ಹೊಂದಿರುವ ವಿವೇಕಾನಂದರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಅವರು ಸಾಗಿದ ದಾರಿಯಲ್ಲಿ ಹೆಜ್ಜೆ ಹಾಕಬೇಕು ಎಂದರು.
ದೇಶದ ಪ್ರತಿಯೊಬ್ಬ ನಾಗರಿಕರು ಕೂಡ ನಮ್ಮ ಹಕ್ಕು ಹಾಗೂ ಕರ್ತವ್ಯಗಳು ಕುರಿತು ಅರಿವು ಹಾಗೂ ತಿಳುವಳಿಕೆ ಹೊಂದಿರಬೇಕು ಎಂದು ಸಲಹೆ ನೀಡಿದರು.

ಜಿ.ಆರ್.ಹಳ್ಳಿ ಸ್ನಾತಕೋತ್ತರ ಅಧ್ಯಯನ ಕೇಂದ್ರ ಕನ್ನಡ ವಿಭಾಗದ ವಿಷಯ ಸಂಯೋಜಕ ಡಾ.ಹೆಚ್.ಜಿ.ವಿಜಯಕುಮಾರ್ ಮಾತನಾಡಿ, ಪ್ರತಿಯೊಂದು ರಾಷ್ಟ್ರದ ಅಭಿವೃದ್ಧಿಯಲ್ಲಿ ಯುವ ಸಮುದಾಯದ ಪಾತ್ರ ಮಹತ್ವವಾದುದು.  ಜಾತಿ, ಧರ್ಮ, ರಾಜಕೀಯ ಪಕ್ಷಗಳನ್ನು ಮೀರಿ ಯುವ ಸಮುದಾಯ ಹೊರಬಂದರೆ ಸದೃಢ ರಾಜ್ಯ ನಿರ್ಮಾಣ ಮಾಡಬಹುದು ಎಂದು ಅಭಿಪ್ರಾಯಪಟ್ಟರು.
ಕಾರ್ಯಕ್ರಮದಲ್ಲಿ ವಕೀಲರ ಸಂಘದ ಉಪಾಧ್ಯಕ್ಷ ಬಿ.ಎಂ.ಅನಿಲ್ ಕುಮಾರ್, ಪ್ರಧಾನ ಕಾರ್ಯದರ್ಶಿ ಆರ್.ಗಂಗಾಧರ್, ದಾವಣಗೆರೆ ವಿಶ್ವವಿದ್ಯಾಲಯ ಜ್ಞಾನ ಗಂಗೋತ್ರಿ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಅರ್ಥಶಾಸ್ತ್ರ ಅಧ್ಯಯನ ವಿಭಾಗದ ಸಂಯೋಜಕ ಡಿ.ಹೆಚ್.ಗಿರೀಶ, ಸಸ್ಯಶಾಸ್ತ್ರ ಅಧ್ಯಯನ ವಿಭಾಗದ ಸಂಯೋಜಕಿ ನಿವೇದಿತಾ ಸೇರಿದಂತೆ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಸಹಾಯಕ ಪ್ರಾಧ್ಯಾಪಕರು ಹಾಗೂ ವಿದ್ಯಾರ್ಥಿಗಳು  ಇದ್ದರು.

Advertisement
Tags :
Advertisement