For the best experience, open
https://m.suddione.com
on your mobile browser.
Advertisement

ಕ್ಷೇತ್ರದ ಜನ ಸಂತೋಷವಾಗಿರಲು ಹಗಲು-ರಾತ್ರಿ ಪ್ರಾಮಾಣಿಕವಾಗಿ ಶ್ರಮಿಸಿದ್ದೇನೆ : ಶಾಸಕ ಡಾ.ಎಂ.ಚಂದ್ರಪ್ಪ

04:56 PM Oct 27, 2024 IST | suddionenews
ಕ್ಷೇತ್ರದ ಜನ ಸಂತೋಷವಾಗಿರಲು ಹಗಲು ರಾತ್ರಿ ಪ್ರಾಮಾಣಿಕವಾಗಿ ಶ್ರಮಿಸಿದ್ದೇನೆ   ಶಾಸಕ ಡಾ ಎಂ ಚಂದ್ರಪ್ಪ
Advertisement

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

Advertisement

ಸುದ್ದಿಒನ್, ಹೊಳಲ್ಕೆರೆ : ರೈತರ ಅಡಿಕೆ ತೋಟಗಳನ್ನು ಉಳಿಸುವುದಕ್ಕಾಗಿ ಕ್ಷೇತ್ರದ 493 ಹಳ್ಳಿಗಳಲ್ಲಿ ಕೆರೆ ಕಟ್ಟೆ ಚೆಕ್‍ಡ್ಯಾಂಗಳನ್ನು ನಿರ್ಮಿಸಿದ್ದೇನೆಂದು ಶಾಸಕ ಡಾ.ಎಂ.ಚಂದ್ರಪ್ಪ ಹೇಳಿದರು.

Advertisement

ತಾಲ್ಲೂಕಿನ ರಂಗಾಪುರ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಕೆರೆ ಕೋಡಿ ಬಿದ್ದಿರುವುದರಿಂದ ಭಾನುವಾರ ಬಾಗಿನ ಅರ್ಪಿಸಿ ಮಾತನಾಡಿದರು.

Advertisement

ಹತ್ತು ಲಕ್ಷ ರೂ.ಗಳನ್ನು ಕೊಟ್ಟಿದ್ದೇನೆ. ಹಂತ ಹಂತವಾಗಿ ಇನ್ನು ಅನುದಾನ ನೀಡುತ್ತೇನೆ. ಕ್ಷೇತ್ರಾದ್ಯಂತ ಮನೆ ಮನೆಗೆ ಬಿಸ್ಲರಿಗಿಂತ ಶುದ್ದವಾದ ಕುಡಿಯುವ ನೀರು ಪೂರೈಸುವುದಕ್ಕಾಗಿ ಹಿರಿಯೂರಿನ ವಾಣಿ ವಿಲಾಸ ಸಾಗರದಿಂದ ನೀರು ತರಲಾಗುವುದು. ಮೂವತ್ತು ವರ್ಷಗಳಿಂದಲೂ ರಾಜಕಾರಣ ಮಾಡುತ್ತಿದ್ದೇನೆ. ಯಾರಿಂದಲೂ ಏನನ್ನು ಹೇಳಿಸಿಕೊಳ್ಳದೆ ಅಭಿವೃದ್ದಿಗೆ ಹಗಲು-ರಾತ್ರಿ ಪ್ರಾಮಾಣಿಕವಾಗಿ ಶ್ರಮಿಸುತ್ತಿದ್ದೇನೆ ಎಂದರು.

Advertisement

ಮಲ್ಲಾಡಿಹಳ್ಳಿ ಸಮೀಪ ಭದ್ರವಾದ ಬ್ರಿಡ್ಜ್ ಕಟ್ಟಿಸಿದ್ದೇನೆ. ಕ್ಷೇತ್ರದ ಜನ ಎಲ್ಲರೂ ಸಂತೋಷವಾಗಿರಬೇಕೆಂಬುದು ನನ್ನ ಉದ್ದೇಶ. ಭದ್ರಾ ಪ್ರಾಜೆಕ್ಟ್ ನೀರನ್ನು ಹಿರಿಯೂರಿನ ವಾಣಿವಿಲಾಸಸಾಗರಕ್ಕೆ ಹರಿಸುತ್ತಿರುವುದರಿಂದ ಎಂದಿಗೂ ಅಲ್ಲಿ ನೀರು ಖಾಲಿಯಾಗುವುದಿಲ್ಲ. ಶಾಂತಿಸಾಗರದ ನೀರು ಕೆಸರಾಗಿರುವುದರಿಂದ ಕುಡಿಯಲು ಯೋಗ್ಯವಿಲ್ಲ ಎನ್ನುವುದನ್ನು ಗಮನಿಸಿ ವಿ.ವಿ.ಸಾಗರದಲ್ಲಿ ಅರವತ್ತು ಕೋಟಿ ರೂ.ವೆಚ್ಚದಲ್ಲಿ ಫಿಲ್ಟರ್ ಅಳವಡಿಸಲಾಗಿದೆ ಎಂದು ತಿಳಿಸಿದರು.

ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಮಹೇಶಣ್ಣ, ಆರ್.ನುಲೇನೂರು ಶೇಖರಪ್ಪ, ಬಸವರಾಜಪ್ಪ, ರಾಜಪ್ಪ, ಗ್ರಾಮದ ಹಿರಿಯರು ಈ ಸಂದರ್ಭದಲ್ಲಿ ಹಾಜರಿದ್ದರು.

Advertisement
Tags :
Advertisement