2028 ಕ್ಕೆ ಅವಕಾಶ ಸಿಕ್ಕರೆ ಮುಖ್ಯಮಂತ್ರಿಯಾಗುತ್ತೇನೆ : ಸಚಿವ ಸತೀಶ್ ಜಾರಕಿಹೊಳಿ
ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್. 07 : ಬಾಣಂತಿಯರ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಯುತ್ತಿದೆ. ತಪ್ಪಿತಸ್ಥರ ಮೇಲೆ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.
ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಶನಿವಾರ ಭೇಟಿ ನೀಡಿ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಮುಖ್ಯಮಂತ್ರಿ ಬದಲಾವಣೆ ಸಂಬಂಧ ನಡೆಯುತ್ತಿರುವ ಚರ್ಚೆಗೂ ನನಗೂ ಸಂಬಂಧವಿಲ್ಲ. ಹೈಕಮಾಂಡ್‍ಗೆ ಬಿಟ್ಟ ವಿಚಾರ. ನಾನು ಸಚಿವನಾಗಿ ಕೆಲಸ ಮಾಡುತ್ತೇನೆ. 2028 ರ ಚುನಾವಣೆಯಲ್ಲಿ ಮುಖ್ಯಮಂತ್ರಿಯಾಗುವ ಅವಕಾಶ ಸಿಕ್ಕರೆ ಸಂತೋಷದಿಂದ ಸ್ವೀಕರಿಸುತ್ತೇನೆ. ಲೋಕೋಪಯೋಗಿ ಇಲಾಖೆಯಿಂದ ಎಲ್ಲಾ ಕಡೆ ರಸ್ತೆಗಳಾಗುತ್ತಿವೆ. ಮುಂದಿನ ದಿನಗಳಲ್ಲಿ ಎಲ್ಲವನ್ನು ಕಾದು ನೋಡಿ ಎಂದರು.
ಕೋವಿಡ್ ಸಂದರ್ಭದಲ್ಲಿ ಕಾಂಗ್ರೆಸ್‍ನವರು ಭ್ರಷ್ಟಾಚಾರ ನಡೆಸಿದ್ದಾರೆಂದು ಬಿಜೆಪಿಯವರು ಆಪಾದಿಸುತಿದ್ದಾರೆಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಸತೀಶ್ ಜಾರಕಿಹೊಳಿ ತಪ್ಪು ಯಾರೆ ಮಾಡಲಿ ಶಿಕ್ಷೆ ಅನುಭವಿಸಬೇಕಾಗುತ್ತದೆ. ಎಲ್ಲದಕ್ಕು ಬಿಜೆಪಿ.ಯವರು ರಾಜೀನಾಮೆ ಕೇಳುವುದರಲ್ಲಿ ಅರ್ಥವಿಲ್ಲ ಎಂದು ವಿರೋಧಿಗಳ ಟೀಕೆಗೆ ತಿರುಗೇಟು ನೀಡಿದರು.