For the best experience, open
https://m.suddione.com
on your mobile browser.
Advertisement

ಲೋಕಸಭಾ ಚುನಾವಣೆಯಲ್ಲಿಯೂ ಪಕ್ಷದ ಕಾರ್ಯಕರ್ತರು ನಿಷ್ಠೆಯಿಂದ ಕೆಲಸ ಮಾಡಿದರೆ ಕಾಂಗ್ರೆಸ್ ಗೆ ಹೆಚ್ಚು ಸ್ಥಾನ :  ಮಯೂರ ಜಯಕುಮಾರ್

06:14 PM Jan 17, 2024 IST | suddionenews
ಲೋಕಸಭಾ ಚುನಾವಣೆಯಲ್ಲಿಯೂ ಪಕ್ಷದ ಕಾರ್ಯಕರ್ತರು ನಿಷ್ಠೆಯಿಂದ ಕೆಲಸ ಮಾಡಿದರೆ ಕಾಂಗ್ರೆಸ್ ಗೆ ಹೆಚ್ಚು ಸ್ಥಾನ    ಮಯೂರ ಜಯಕುಮಾರ್
Advertisement

Advertisement

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ ಜ. 17 :  ಪಕ್ಷದ ಕಾರ್ಯಕರ್ತರ ಶ್ರಮದಿಂದ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರವನ್ನು ಹಿಡಿಯುವಂತಾಯಿತು. ಈ ಹಿನ್ನಲೆಯಲ್ಲಿ ಕಾಂಗ್ರೆಸ್ ಪಕ್ಷದ ಗೆಲುವಿಗೆ ಕಾರಣರಾದ ಕಾರ್ಯಕರ್ತರಿಗೆ ಮನ್ನಣೆಯನ್ನು ನೀಡುವುದು ಪಕ್ಷದ ಕರ್ತವ್ಯವಾಗಿದೆ ಈ ಹಿನ್ನಲೆಯಲ್ಲಿ ಮುಂದಿನ ಕೆಲವೇ ದಿನಗಳಲ್ಲಿ ವಿವಿಧ ಮಂಡಳಿ ಹಾಗೂ ನಿಗಮಗಳಲ್ಲಿನ ವಿವಿಧ ಹುದ್ದೆಗಳನ್ನು ಪಕ್ಷದ ಕಾರ್ಯಕರ್ತರನ್ನು ನೇಮಕ ಮಾಡಲಾಗುವುದೆಂದು ಚಿತ್ರದುರ್ಗ ಜಿಲ್ಲೆಯ ಎಐಸಿಸಿ ಉಸ್ತುವಾರಿಗಳಾದ ಮಯೂರ ಜಯಕುಮಾರ್ ಭರವಸೆಯನ್ನು ನೀಡಿದ್ದಾರೆ.

Advertisement

ಚಿತ್ರದುರ್ಗ ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಬುಧವಾರ ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಗಳ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ನಡೆದಾಗ ಪಕ್ಷದ ಕಾರ್ಯಕರ್ತರು ಪಕ್ಷದ ಅಭ್ಯರ್ಥಿಗಳ ಗೆಲುವಿಗಾಗಿ ಶ್ರಮವನ್ನು ಹಾಕಿದ್ದಾರೆ. ಇದರ ಫಲವಾಗಿ ರಾಜ್ಯದಲ್ಲಿ ನಮ್ಮ ಪಕ್ಷ ಅಧಿಕಾರವನ್ನು ಹಿಡಿಯಿತು. ಇದನ್ನು ಪಕ್ಷ ಮನಗಂಡಿದೆ. ಈಗಾಗಲೇ ಶಾಸಕರು ಆಯ್ಕೆಯಾಗಿದ್ದಾರೆ. ಇದೇ ರೀತಿ ಸಚಿವರು ಸಹಾ ನೇಮಕವಾಗಿದೆ. ಅದೇ ರೀತಿ ಪಕ್ಷದ ಕಾರ್ಯಕರ್ತರಿಗೂ ಸಹಾ ಸ್ಥಾನವನ್ನು ನೀಡಬೇಕಿದೆ. ಇದನ್ನು ಪಕ್ಷದ ಮುಖಂಡರು ಗಮನಿಸಿದ್ದಾರೆ. ಇದರಂತೆ ನಡೆಯಲಾಗುವುದು ಎಂದರು.

ರಾಜ್ಯ ಸರ್ಕಾರದಲ್ಲಿ ವಿವಿಧ ರೀತಿಯ ನಿಗಮಗಳು ಇವೆ, ಇದರಲ್ಲಿ ವಿವಿಧ ರೀತಿಯ ಹುದ್ದೆಗಳು ಇವುಗಳಿಗೆ ಪಕ್ಷದ ನಿಷ್ಠಾವಂತ ಕಾರ್ಯಕರ್ತರ ಪಟ್ಟಿಯನ್ನು ತಯಾರು ಮಾಡಿ ಅದನ್ನು ಕೆಪಿಸಿಸಿಗೆ ಕಳುಹಿಸುವುದರ ಮೂಲಕ ಅವರನ್ನು ನೇಮಕ ಮಾಡಲಾಗುವುದು. ಜಿಲ್ಲಾ ಸಮಿತಿಯವರಿಗೆ ಇದರ ಜವಾಬ್ದಾರಿಯನ್ನು ನೀಡಲಾಗಿದೆ. ಅವರು  ಹತ್ತು ದಿನದಲ್ಲಿ ಪಟ್ಟಿಯನ್ನು ತಯಾರು ಮಾಡಿ ನಮಗೆ ಕಳುಹಿಸಬೇಕಿದೆ. ಏಕೆಂದರೆ ಮುಂದಿನ ದಿನದ ಯಾವುದೇ ಸಮಯದಲ್ಲಿ ಯಾದರೂ ಸಹಾ ಲೋಕಸಭಾ ಚುನಾವಣೆಯ ದಿನಾಂಕ ಪ್ರಕಟವಾಗಬಹುದು ಆಗ ನಿಗಮ ಮಂಡಳಿಗಳಿಗೆ ಯಾವುದೇ ನೇಮಕ ಮಾಡಲು ಬರುವುದಿಲ್ಲ. ಈ ಹಿನ್ನಲೆಯಲ್ಲಿ ಅತಿ ಶೀಘ್ರದಲ್ಲಿಯೇ ಪಟ್ಟಿಯನ್ನು ನೀಡಿ ಎಂದು ಮಯೂರ ಜಯಕುಮಾರ್ ಜಿಲ್ಲಾಧ್ಯಕ್ಷರಿಗೆ ಸೂಚನೆ ನೀಡಿದರು.

ರಾಜ್ಯದಲ್ಲಿ ವಿಧಾನಸಭೆಯಲ್ಲಿ ಬಿಜೆಪಿ ಮತದಾರರಿಗೆ ಮಾಡಿದ ದ್ರೋಹದಿಂದ ಕಾಂಗ್ರೆಸ್ ಪಕ್ಷಕ್ಕೆ ಜಯಗಳಿಸಿ ಅಧಿಕಾರವನ್ನು ನೀಡಿದಂತೆ ಮುಂಬರುವ ಲೋಕಸಬಾ ಚುನಾವಣೆಯಲ್ಲಿಯೂ ಸಹಾ ಪಕ್ಷದ ಕಾರ್ಯಕರ್ತರು ನಿಷ್ಠೆಯಿಂದ ಕೆಲಸವನ್ನು ಮಾಡುವುದರ ಮೂಲಕ ಕರ್ನಾಟಕ ರಾಜ್ಯದಿಂದ ಅತಿ ಹೆಚ್ಚು ಕಾಂಗ್ರೆಸ್ ಸಂಸದರು ಆಯ್ಕೆಯಾಗಬೇಕಿದೆ, ಇದರ ಹೊಣೆಗಾರಿಕೆಯನ್ನು ಪಕ್ಷದ ಮುಖಂಡರು, ಕಾರ್ಯಕರ್ತರ ಮೇಲಿದೆ. ಇದನ್ನು ಸರಿಯಾದ ರೀತಿಯಲ್ಲಿ ನಿಭಾಯಿಸಿ ಎಂದು ಪಕ್ಷದ ಕಾರ್ಯಕರ್ತರಿಗೆ ಕರೆ ನೀಡಿ ರಾಜ್ಯದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಸರ್ಕಾರ ಚುನಾವಣೆಯ ಸಮಯದಲ್ಲಿ ಮತದಾರರಿಗೆ 5 ಗ್ಯಾರೆಂಟಿಗಳನ್ನು ನೀಡಿತ್ತು ಅದರಂತೆ ಅವುಗಳನ್ನು ಪೊರೈಸಿದೆ ಇದನ್ನು ಮತದಾರರಿಗೆ ತಿಳಿಸುವ ಕಾರ್ಯವನ್ನು ಕಾರ್ಯಕರ್ತರು ಮಾಡಬೇಕಿದೆ. ಎಂದರು.

ಕಾರ್ಯಕ್ರಮದಲ್ಲಿ ಡಿಸಿಸಿ ಅಧ್ಯಕ್ಷ ತಾಜ್‍ಪೀರ್, ಕಾರ್ಯಾಧ್ಯಕ್ಷ ಹಾಲಸ್ವಾಮಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ನೇರ್ಲಗುಂಟೆ ರಾಮಪ್ಪ, ರಾಜ್ಯ ವಕ್ತಾರ ಡಿ.ಬಸವರಾಜು, ಕುಮಾರಗೌಡ, ಪ್ರಧಾನ ಕಾರ್ಯದರ್ಶಿಗಳಾದ ಸಂಪತ್ ಕುಮಾರ್ ಮೈಲಾರಪ್ಪ, ಮಹಿಳಾ ಘಟಕದ ಅಧ್ಯಕ್ಷರಾದ ಶ್ರೀಮತಿ ಗೀತಾ ನಂದಿನಿ ಗೌಡ, ಪ್ರಸನ್ನಕುಮಾರ್, ಮುದಸಿರ್, ಕಾರೇಹಳ್ಳಿ ಉಲ್ಲಾಸ್, ವೆಂಕಟೇಶ್, ಲಕ್ಷ್ಮೀಕಾಂತ, ಚೋಟು, ಶ್ರೀಮತಿ ಮೋಕ್ಷ ರುದ್ರಸ್ವಾಮಿ, ಸ್ವಾಮಿ ಮೂಡಲಗಿರಿಯಪ್ಪ, ಆಶ್ವಕ್ ಆಲಿ ಸೇರಿದಂತೆ ಇತರರು ಭಾಗವಹಿಸಿದ್ದರು.

Tags :
Advertisement