Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಬಸವಣ್ಣನವರ ಸಮಾನತೆ ತತ್ವ ಸಾಕಾರಗೊಳಿಸಲು ಗ್ಯಾರಂಟಿ ಯೋಜನೆಗಳ ಜಾರಿ : ಸಚಿವ ಡಿ.ಸುಧಾಕರ್ ಪ್ರತಿಪಾದನೆ

06:19 PM Feb 19, 2024 IST | suddionenews
Advertisement

 

Advertisement

ಚಿತ್ರದುರ್ಗ.ಫೆ.19: ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು ಎಂಬ ಬಸವಣ್ಣನವರ ತತ್ವ ಸಾಕಾರಗೊಳಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಪಂಚ ಗ್ಯಾರೆಂಟಿ ಯೋಜನೆಗಳನ್ನು ಜಾರಿಗೊಳಿಸಿದೆ ಎಂದು ಯೋಜನೆ ಮತ್ತು ಸಾಂಖ್ಯಿಕ  ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಪ್ರತಿಪಾದಿಸಿದರು‌. 

ನಗರದ ಜಿಲ್ಲಾಧಿಕಾರಿ ಕಚೇರಿ‌ ಸಭಾಂಗಣದಲ್ಲಿ ಸೋಮವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ನಗರಸಭೆ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ, ವಿಶ್ವಗುರು ಬಸವಣ್ಣ ಸಾಂಸ್ಕೃತಿಕ ನಾಯಕ ಎಂಬ  ಅಡಿ ಬರಹ ಇರುವ ಬಸವಣ್ಣನವರ ನೂತನ ಭಾವಚಿತ್ರವನ್ನು ಅನಾವರಣಗೊಳಿಸಿ ಮಾತನಾಡಿದರು.

Advertisement

ಬಸವಣ್ಣನವರನ್ನು ರಾಜ್ಯದ ಸಾಂಸ್ಕೃತಿಕ ನಾಯಕ ಎಂದು ಘೋಷಿಸುವ ಮೂಲಕ ಸರ್ಕಾರ ಬಸವ ತತ್ವಗಳಿಗೆ ಹೆಚ್ಚಿನ ಮಹತ್ವ ನೀಡಿದೆ. ಬಸವಣ್ಣ ಒಂದು ಜಾತಿಗೆ ಸೀಮಿತರಾದವರಲ್ಲ.  ನಾಡಿನ ಎಲ್ಲಾ ವರ್ಗದ ಜನರಿಂದ ಪೂಜನೀಯವಾಗಿದ್ದಾರೆ. ಈ ಹಿಂದೆ ರಾಜ್ಯ ಸರ್ಕಾರದಿಂದ ಅನುಮೋದಿಸಿದ್ದ ಬಸವಣ್ಣನವರ ಅಧಿಕೃತ ಭಾವಚಿತ್ರದ ಅಡಿಯಲ್ಲಿ  ಇನ್ನು ಮುಂದೆ ವಿಶ್ವಗುರು ಬಸವಣ್ಣ ಸಾಂಸ್ಕೃತಿಕ ನಾಯಕ ಎಂಬ ಅಡಿ ಬರಹ ಇರಲಿದೆ. ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಬಸವಣ್ಣನ ಭಾಚಿತ್ರದ ಕಡ್ಡಾಯ ಅಳವಡಿಕೆಗೆ ಸೂಚನೆ‌ಯನ್ನು ನೀಡಲಾಗಿದೆ ಎಂದು ಸಚಿವ ಡಿ.ಸುಧಾಕರ್ ಹೇಳಿದರು.

ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ,  ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಎಸ್.ಕೆ.ಮಲ್ಲಿಕಾರ್ಜುನ್, ಸಮಾಜ ಮುಖಂಡರಾದ ಮಹಡಿ ಶಿವಮೂರ್ತಿ, ಮಹೇಶ್, ಕೆಇಬಿ ಷಣ್ಮುಖಪ್ಪ, ದಯಾನಂದ,
ರಂಗ ನಿರ್ದೇಶಕ ಕೆ.ಪಿ.ಎಂ.ಗಣೇಶಯ್ಯ, ಸೇರಿದಂತೆ ರಾಷ್ಟ್ರೀಯ ಬಸವ ದಳ, ಪಂಚಮಸಾಲಿ ಲಿಂಗಾಯಿತ ಮುಖಂಡರು ಉಪಸ್ಥಿತರಿದ್ದರು.

Advertisement
Tags :
Basavannachitradurgaguarantee schemesimplementationMinister D. Sudhakar proposedprinciple of equalityrealizesuddionesuddione newsಗ್ಯಾರಂಟಿ ಯೋಜನೆಗಳುಚಿತ್ರದುರ್ಗಜಾರಿಪ್ರತಿಪಾದನೆಬಸವಣ್ಣನವರುಸಚಿವ ಡಿ.ಸುಧಾಕರ್ಸಮಾನತೆ ತತ್ವಸಾಕಾರಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article