For the best experience, open
https://m.suddione.com
on your mobile browser.
Advertisement

ಇಂಡಿಯನ್ ಇಂಟರ್ ನ್ಯಾಷನಲ್ ಶಾಲೆಯಲ್ಲಿ ಕ್ರೀಡೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ : ವಿದ್ಯಾರ್ಥಿಗಳು ಪಠ್ಯೇತರ ಚಟುವಟಿಕೆಗಳಲ್ಲೂ ಭಾಗವಹಿಸಿ : ಶಾಸಕ ಡಾ.ಎಂ.ಚಂದ್ರಪ್ಪ

07:43 PM Jun 29, 2024 IST | suddionenews
ಇಂಡಿಯನ್ ಇಂಟರ್ ನ್ಯಾಷನಲ್ ಶಾಲೆಯಲ್ಲಿ ಕ್ರೀಡೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ   ವಿದ್ಯಾರ್ಥಿಗಳು ಪಠ್ಯೇತರ ಚಟುವಟಿಕೆಗಳಲ್ಲೂ ಭಾಗವಹಿಸಿ   ಶಾಸಕ ಡಾ ಎಂ ಚಂದ್ರಪ್ಪ
Advertisement

Advertisement

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಜೂನ್.29 : ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ಭಾಗವಹಿಸಬೇಕು ಎಂದು ಇಂಡಿಯನ್ ಇಂಟರ್ ನ್ಯಾಷನಲ್ ಶಾಲೆಯ ಸಂಸ್ಥಾಪಕರು ಹಾಗೂ ಹೊಳಲ್ಕೆರೆ ಶಾಸಕ ಡಾ.ಎಂ.ಚಂದ್ರಪ್ಪ ಹೇಳಿದರು.

Advertisement

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್‍ನಲ್ಲಿ ಶನಿವಾರ ನಡೆದ ಕ್ರೀಡೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಉದ್ಗಾಟಿಸಿ ಮಾತನಾಡಿದರು.

ವಿದ್ಯಾರ್ಥಿಗಳಲ್ಲಿ ಪ್ರತಿಭೆಯನ್ನು ಗುರುತಿಸಿ ಹೊರತೆಗೆಯುವಲ್ಲಿ ನಮ್ಮ ಶಾಲೆ ಉತ್ತಮ ವೇದಿಕೆಯನ್ನು ಒದಗಿಸಿಕೊಟ್ಟಿದೆ. ಈ ಶಾಲೆಯಲ್ಲಿ ವಿದ್ಯಾಭ್ಯಾಸ ಪಡೆಯುವ ಮಕ್ಕಳು ಮುಂದೊಂದು ದಿನ ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡೆಯಲ್ಲಿ ಭಾಗವಹಿಸಬೇಕೆಂಬುದು ನಮ್ಮ ಆಸೆ. ವಿಶಾಲವಾದ ಕ್ರೀಡಾಂಗಣದ ವ್ಯವಸ್ಥೆ ಕಲಿಸುವುದರ ಜೊತೆ ತರಬೇತುದಾರರನ್ನು ನೇಮಕ ಮಾಡಿ ಕ್ರೀಡೆಗೆ ಅತ್ಯವಶ್ಯಕವಾಗಿ ಬೇಕಾಗಿರುವ ಎಲ್ಲಾ ಬಗೆಯ ಮೂಲ ಸೌಕರ್ಯಗಳನ್ನು ಒದಗಿಸಲಾಗಿದೆ. ವಿದ್ಯಾರ್ಥಿಗಳು ಸದುಪಯೋಗಪಡಿಸಿಕೊಂಡು ಶಿಕ್ಷಣದ ಜೊತೆ ಕ್ರೀಡೆಯಲ್ಲಿ ಕೀರ್ತಿ ತರುವಂತಾಗಲಿ ಎಂದು ಶಾಸಕ ಡಾ.ಎಂ.ಚಂದ್ರಪ್ಪ ಹಾರೈಸಿದರು.

ಹೆಚ್ಚುವರಿ ರಕ್ಷಣಾಧಿಕಾರಿ ಕುಮಾರಸ್ವಾಮಿ ಮಾತನಾಡಿ ಕ್ರೀಡೆಯಿಂದ ಪ್ರತಿಯೊಬ್ಬರು ಮಾನಸಿಕ ಹಾಗೂ ದೈಹಿಕವಾಗಿ ಆರೋಗ್ಯವಂತರಾಗಿರಬಹುದು. ನಾನು ಚಿಕ್ಕವನಿದ್ದಾಗಿನಿಂದಲೂ ಕ್ರೀಡೆಯಲ್ಲಿ ಹೆಚ್ಚಿನ ಆಸಕ್ತಿ ಹೊಂದಿದ್ದೆ. ಈ ಸಂಸ್ಥೆಯಲ್ಲಿ ಕ್ರೀಡೆ ಮತ್ತು ಸಾಂಸ್ಕøತಿಕ ಚಟುವಟಿಕೆಗಳಿಗೆ ಹೆಚ್ಚಿನ ಮಹತ್ವ ಕೊಡುತ್ತಿರುವುದು ಅತ್ಯಂತ ಸಂತೋಷದ ಸಂಗತಿ ಎಂದು ಶ್ಲಾಘಿಸಿದರು.

ಇಂಡಿಯನ್ ಇಂಟರ್‍ನ್ಯಾಷನಲ್ ಶಾಲೆಯಲ್ಲಿರುವ ಉತ್ತಮ ವಾತಾವರಣವನ್ನು ಬೇರೆ ಯಾವ ಶಾಲೆಯಲ್ಲಿಯೂ ನೋಡಿಲ್ಲ. ಹಾಗಾಗಿ ಇಲ್ಲಿ ಶಿಕ್ಷಣ ಪಡೆಯುವ ವಿದ್ಯಾರ್ಥಿಗಳು ಭಾಗ್ಯಶಾಲಿಗಳು ಎಂದು ಹೇಳಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ನಾಗಭೂಷಣ್ ಮಾತನಾಡಿ ವಿದ್ಯಾರ್ಥಿಗಳು ಆದಷ್ಟು ಮೊಬೈಲ್‍ನಿಂದ ದೂರವಿದ್ದು, ಶಿಕ್ಷಣ ಮತ್ತು ಕ್ರೀಡೆಗಳತ್ತ ಹೆಚ್ಚಿನ ಆಸಕ್ತಿ ಬೆಳೆಸಿಕೊಂಡು ಜೀವನದಲ್ಲಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಿ ಎಂದು ಹೇಳಿದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ನೇರ್ಲಗುಂಟೆ ರಾಮಪ್ಪ ಮಾತನಾಡಿ ಈ ಶಾಲೆಯಲ್ಲಿ ಮಕ್ಕಳಿಗೆ ಶಿಕ್ಷಣದ ಜೊತೆ ಕ್ರೀಡೆಗೆ ಎಲ್ಲಾ ರೀತಿಯ ಸೌಕರ್ಯಗಳನ್ನು ಒದಗಿಸಿ ತರಬೇತುದಾರರನ್ನು ನೇಮಕ ಮಾಡಿರುವುದು ನನಗೆ ಅತ್ಯಂತ ಖುಷಿ ಕೊಟ್ಟಿದೆ. ಇಂತಹ ಅವಕಾಶ ಕಲ್ಪಿಸಿಕೊಟ್ಟ ಸಂಸ್ಥೆಯವರಿಗೆ ಮಕ್ಕಳ ಭವಿಷ್ಯದ ಬಗ್ಗೆ ಇರುವ ಕಾಳಜಿಯನ್ನು ತೋರಿಸುತ್ತದೆ ಎಂದು ಗುಣಗಾನ ಮಾಡಿದರು.

ಅಂತರಾಷ್ಟ್ರೀಯ ಕರಾಟೆ ಪಟು ಜಿಲ್ಲೆಯ ರಂಗನಾಥ್, ರಾಷ್ಟ್ರೀಯ ಅಥ್ಲೆಟಿಕ್ ಪಟು ಸತೀಶ್‍ಕುಮಾರ್ ಇವರುಗಳನ್ನು ಸನ್ಮಾನಿಸಲಾಯಿತು.
ಇಂಡಿಯನ್ ಇಂಟರ್‍ನ್ಯಾಷನಲ್ ಶಾಲೆಯ ಪ್ರಾಂಶುಪಾಲರಾದ ಆಂಟೋನಿ ಮ್ಯಾಥ್ಯು ಪ್ರಾಸ್ತಾವಿಕವಾಗಿ ಮಾತನಾಡಿದರು.
ಫುಟ್‍ಬಾಲ್, ವಾಲಿಬಾಲ್, ಥ್ರೋಬಾಲ್, ಬ್ಯಾಸ್ಕೆಟ್‍ಬಾಲ್, ಸ್ಕೇಟಿಂಗ್, ಚೆಸ್, ಕೇರಂ, ಡ್ರಾಯಿಂಗ್, ಡ್ಯಾನ್ಸ್, ಟೇಕ್ವಾಂಡೋ, ಸಾಂಸ್ಕøತಿಕ ಹಾಗೂ ಲೆದರ್‍ಬಾಲ್ ಕ್ರಿಕೆಟ್ ಕ್ಲಬ್‍ಗಳಿಗೆ ಚಾಲನೆ ನೀಡಲಾಯಿತು.

Tags :
Advertisement