For the best experience, open
https://m.suddione.com
on your mobile browser.
Advertisement

ಸಂಜೆ ವೇಳೆಗೆ ಹಿರಿಯೂರಿನಾದ್ಯಂತ ಗುಡುಗು ಸಹಿತ ಬಾರಿ ಮಳೆ..!

09:16 PM May 07, 2024 IST | suddionenews
ಸಂಜೆ ವೇಳೆಗೆ ಹಿರಿಯೂರಿನಾದ್ಯಂತ ಗುಡುಗು ಸಹಿತ ಬಾರಿ ಮಳೆ
Advertisement

ಹಿರಿಯೂರು: ಮಳೆಯಿಲ್ಲದೆ ಕಂಗಲಾಗಿದ್ದ ಹಿರಿಯೂರಿನ ಮಂದಿಗೆ ವರುಣಾರಾಯ ತಂಪೆರೆದಿದ್ದಾನೆ. ಸಂಜೆ ವೇಳೆ ಜೋರು ಮಳೆ ಬಂದಿದ್ದು, ಜನ ಫುಲ್ ಖುಷಿಯಾಗಿದ್ದಾರೆ.

Advertisement

ಕಳೆದ ಬಾರಿ ಹಿಂಗಾರು-ಮುಂಗಾರು ಮಳೆಯಿಲ್ಲದೆ ಬಿಸಿ ಗಾಳಿಯನ್ನು ಅನುಭವಿಸಿ ಅನುಭವಿಸು ಜನ ಸುಸ್ತಾಗಿ ಹೋಗಿದ್ದರು. ಕಳೆದ ಒಂದು ವಾರದಿಂದ ರಾಜ್ಯದ ಹಲವೆಡೆ ಮಳೆಯಾಗುತ್ತಿದೆ. ಆದರೆ ಚಿತ್ರದುರ್ಗ ಜಿಲ್ಲೆಯಲ್ಲಿ ಮಳೆಯಾಗಿರಲಿಲ್ಲ. ಇಂದು ಸಂಜೆಯಿಂದ ಹಿರಿಯೂರು ತಾಲೂಕಿನಾದ್ಯಂತ ಮಳೆಯಾಗಿದ್ದು, ಜನರಿಗೆ ಕೊಂಚ ಸಮಾಧಾನ ತಂದಿದೆ. ಸುಮಾರು ಅರ್ಧ ಗಂಟೆಗಳ ಕಾಲ ಮಳೆ‌ಸುರಿದಿದೆ.

Advertisement

ತಾಲ್ಲೂಕಿನಲ್ಲಿ ಮಳೆ ಬಾರದ ಹಿನ್ನೆಲೆಯಲ್ಲಿ ಅಡಿಕೆ, ತೆಂಗು, ಬಾಳೆ ಸೇರಿದಂತೆ ಇನ್ನೀತರ ತೋಟಗಾರಿಕೆ ಬೆಳೆಗಳು ಒಣಗಿ ಹೋಗಿವೆ. ಅಡಿಕೆ ತೋಟ ಉಳಿಸಿಕೊಳ್ಳಲು ರೈತರು ಟ್ಯಾಂಕರ್ ಮೊರೆ ಹೋಗಿದ್ದರು. ಅಡಿಕೆ ಗಿಡಗಳಿಗೆ ಟ್ಯಾಂಕರ್ ನೀರು ಬಿಡಿಸುವ ಮೂಲಕ ತೋಟ ಉಳಿಸಿಕೊಳ್ಳಲು ರೈತರು ಹರಸಾಹಸ ಪಡುತ್ತಿದ್ದಾರೆ. ಇದಲ್ಲದೆ ಜನ ಜಾನುವಾರುಗಳಿಗೆ ಕುಡಿಯುವ ನೀರಿಲ್ಲದೆ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಸದ್ಯ ಮಳೆ ಬಂದಿದ್ದು ರೈತರ ಮುಖದಲ್ಲಿ ಸಂತಸವನ್ನು ತಂದಿದೆ.

Tags :
Advertisement