For the best experience, open
https://m.suddione.com
on your mobile browser.
Advertisement

ಶಿಕ್ಷಕರ ಕ್ಷೇತ್ರದ ಚುನಾವಣಾ ಕಚೇರಿ ಉದ್ಗಾಟನೆ | ವೈ.ಎ.ನಾರಾಯಣಸ್ವಾಮಿಯವರಿಗೆ ಪ್ರಥಮ ಪಾಶಸ್ತ್ಯದ ಮತ ನೀಡುವಂತೆ ಮಾಜಿ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಮನವಿ

06:46 PM Jan 30, 2024 IST | suddionenews
ಶಿಕ್ಷಕರ ಕ್ಷೇತ್ರದ ಚುನಾವಣಾ ಕಚೇರಿ ಉದ್ಗಾಟನೆ   ವೈ ಎ ನಾರಾಯಣಸ್ವಾಮಿಯವರಿಗೆ ಪ್ರಥಮ ಪಾಶಸ್ತ್ಯದ ಮತ ನೀಡುವಂತೆ ಮಾಜಿ ಶಾಸಕ ಜಿ ಹೆಚ್ ತಿಪ್ಪಾರೆಡ್ಡಿ ಮನವಿ
Advertisement

Advertisement
Advertisement

ವರದಿ ಮತ್ತು ಫೋಟೋ : ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

Advertisement

ಸುದ್ದಿಒನ್, ಚಿತ್ರದುರ್ಗ, ಜನವರಿ. 30 : ವಿಧಾನಪರಿಷತ್‍ನಲ್ಲಿ ಶಿಕ್ಷಕರ ಸಮಸ್ಯೆಗಳ ಬಗ್ಗೆ ಧ್ವನಿ ಎತ್ತುವ ವಿಧಾನಪರಿಷತ್ ಸದಸ್ಯ ವೈ.ಎ.ನಾರಾಯಣಸ್ವಾಮಿರವರಿಗೆ ಪ್ರಥಮ ಪಾಶಸ್ತ್ಯದ ಮತ ನೀಡಿ ಗೆಲ್ಲಿಸುವಂತೆ ಮಾಜಿ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಶಿಕ್ಷಕರುಗಳಲ್ಲಿ ಮನವಿ ಮಾಡಿದರು.

Advertisement
Advertisement

ಜೆ.ಸಿ.ಆರ್.ಬಡಾವಣೆ ನಾಲ್ಕನೆ ಕ್ರಾಸ್‍ನಲ್ಲಿ ಸೋಮವಾರ ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣಾ ಕಚೇರಿ ಉದ್ಘಾಟಿಸಿ ಮಾತನಾಡಿದರು.
ಇಡಿ ದೇಶದಲ್ಲಿ ಬಿಜೆಪಿ. ವಾತಾವರಣವಿದೆ. ಪ್ರಧಾನಿ ನರೇಂದ್ರಮೋದಿ ನಾಯಕತ್ವದಲ್ಲಿ ಭಾರತ ಆರ್ಥಿಕ ಸ್ವಾವಲಂಬನೆಯಲ್ಲಿ ಐದನೆ ಸ್ಥಾನದಲ್ಲಿದ್ದು, ಮುಂದಿನ ದಿನಗಳಲ್ಲಿ ಮೂರನೆ ಸ್ಥಾನಕ್ಕೆ ಬರುವುದರಲ್ಲಿ ಸಂಶಯವಿಲ್ಲ. ಜಮ್ಮು ಮತ್ತು ಕಾಶ್ಮೀರದಲ್ಲಿ ಆರ್ಟಿಕಲ್ 371 ರದ್ದುಪಡಿಸಿ ದಿಟ್ಟ ತೀರ್ಮಾನ ತೆಗೆದುಕೊಂಡಿರುವ ಪ್ರಧಾನಿ ಮೋದಿ ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಗಾಟಿಸಿ ಐದು ನೂರು ವರ್ಷಗಳ ಭಾರತೀಯರ ಕನಸನ್ನು ಸಾಕಾರಗೊಳಿಸಿದ್ದಾರೆ. ಆರ್ಥಿಕವಾಗಿ ಭಾರತ ಬಲವಾಗಿರುವುದಕ್ಕೆ ವಿಶ್ವನಾಯಕ ಮೋದಿ ಕಾರಣ ಎಂದು ಹೇಳಿದರು.

ಆಗ್ನೇಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ವೈ.ಎ.ನಾರಾಯಣಸ್ವಾಮಿ ಮಾತನಾಡಿ ನಾಲ್ಕನೆ ಬಾರಿಗೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದೇನೆ. ಪ್ರಥಮ ಪ್ರಾಶಸ್ತ್ಯದ ಮತ ನೀಡಿ ಗೆಲ್ಲಿಸಿ ಮತ್ತೊಮ್ಮೆ ತಮ್ಮಗಳ ಸೇವೆ ಮಾಡುವ ಅವಕಾಶ ಕಲ್ಪಿಸಿ. ಶಿಕ್ಷಕರ ಕ್ಷೇತ್ರ ಬುದ್ದಿವಂತ ಮತದಾರರ ಚುನಾವಣೆಯಾಗಿದ್ದು, ನಿಮ್ಮ ಸಮಸ್ಯೆಗಳಿಗೆ ಸ್ಪಂದಿಸಿ ಪರಿಹಾರ ಕಂಡುಕೊಳ್ಳುವುದಕ್ಕಾಗಿ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆಂದು ಭರವಸೆ ನೀಡಿದರು.

ರಾಜ್ಯದಲ್ಲಿ ಬಿಜೆಪಿ. ಮತ್ತೊಮ್ಮೆ ಅಧಿಕಾರಕ್ಕೆ ಬರಬೇಕಾಗಿರುವುದರಿಂದ ನಿಮ್ಮೆಲ್ಲರ ಸಹಕಾರ ಮುಖ್ಯ ಎಂದು ವೈ.ಎ.ನಾರಾಯಣಸ್ವಾಮಿ ಶಿಕ್ಷಕರುಗಳಲ್ಲಿ ಕೋರಿದರು.

ಡಿ.ಸಿ.ಸಿ.ಬ್ಯಾಂಕ್ ಮಾಜಿ ಅಧ್ಯಕ್ಷ ಲಕ್ಷ್ಮಿಕಾಂತ್, ಬಿಜೆಪಿ.ಜಿಲ್ಲಾಧ್ಯಕ್ಷ ಎ.ಮುರಳಿ, ಸೂರನಹಳ್ಳಿ ವಿಜಯಣ್ಣ, ಬಿಜೆಪಿ.ನಗರಾಧ್ಯಕ್ಷ ನವೀನ್ ಚಾಲುಕ್ಯ, ನಾಗರಾಜ್ ಬೇದ್ರೆ, ತಿಪ್ಪೇಸ್ವಾಮಿ, ನಿವೃತ್ತ ಶಿಕ್ಷಕರುಗಳಾದ ಜಯಣ್ಣ, ಚಿಕ್ಕನಾಗಪ್ಪ, ನೀಲಕಂಠಾಚಾರ್, ಶಿವಣ್ಣ, ನಾಗೇಂದ್ರಪ್ಪ, ಜ್ಞಾನಮೂರ್ತಿ, ನಾಗಲಿಂಗರೆಡ್ಡಿ ಇನ್ನು ಮೊದಲಾದವರು ಈ ಸಂದರ್ಭದಲ್ಲಿ ಹಾಜರಿದ್ದರು.

Advertisement
Tags :
Advertisement