Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ತುರುವನೂರಿನಲ್ಲಿ ಗೋಶಾಲೆ ಉದ್ಘಾಟನೆ | ಸರ್ಕಾರದ ಗ್ಯಾರಂಟಿ ಯೋಜನೆಗಳು ಜನಪರವಾಗಿವೆ : ಶಾಸಕ ಟಿ. ರಘುಮೂರ್ತಿ

07:44 PM Feb 02, 2024 IST | suddionenews
Advertisement

 

Advertisement

ಚಿತ್ರದುರ್ಗ. ಫೆ.02:  ನಮ್ಮ ಸರ್ಕಾರ ಚುನಾವಣೆಗೂ ಮುನ್ನ ನೀಡಿದ ಭರವಸೆಯಂತೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದ್ದು, ಇವೆಲ್ಲವೂ ಜನಪರವಾದ ಯೋಜನೆಗಳಾಗಿವೆ ಎಂದು ಚಳ್ಳಕೆರೆ ಶಾಸಕ ಟಿ. ರಘುಮೂರ್ತಿ ಹೇಳಿದರು.

ತಾಲ್ಲೂಕು ಆಡಳಿತ ಹಾಗೂ ತಾಲ್ಲೂಕು ಪಂಚಾಯತ್, ತಾಲ್ಲೂಕು ಮಟ್ಟದ ಗ್ಯಾರೆಂಟಿ  ಯೋಜನೆಗಳ ಅನುಷ್ಠಾನ ಸಮಿತಿ ಸಹಯೋಗದೊಂದಿಗೆ ಚಿತ್ರದುರ್ಗ ತಾಲ್ಲೂಕಿನ ತುರುವನೂರು ಹೋಬಳಿಯ ತುರುವನೂರು ಗ್ರಾಮದಲ್ಲಿ ನಡೆದ ಹೋಬಳಿ ಮಟ್ಟದ ಗ್ಯಾರೆಂಟಿ ಯೋಜನೆಗಳ ಸಮಾವೇಶದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

Advertisement

ಚುನಾವಣಾ ಪೂರ್ವದಲ್ಲಿ ನೀಡಿದ ಭರವಸೆಯಂತೆ ನಾವು ಶಕ್ತಿ, ಅನ್ನಭಾಗ್ಯ, ಗೃಹಜ್ಯೋತಿ, ಗೃಹಲಕ್ಷ್ಮಿ ಹಾಗೂ ಯುವನಿಧಿ ಹೀಗೆ 05 ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿ, ಜನರಿಗೆ ತಲುಪಿಸಿದ್ದೇವೆ.  ಪ್ರಸ್ತುತ ಬರ ಪರಿಸ್ಥಿತಿ ಇರುವುದರಿಂದ ಜಾನುವಾರುಗಳನ್ನು ರಕ್ಷಿಸಲು ನಮ್ಮ ಸರ್ಕಾರ ಬದ್ಧವಾಗಿದ್ದು, ಈ ನಿಟ್ಟಿನಲ್ಲಿ ಇಂದು ಗೋಶಾಲೆಯನ್ನು ಪ್ರಾರಂಭಿಸಿದ್ದೇವೆ ಎಂದರು.

ಈ ಸಂದರ್ಭದಲ್ಲಿ ಚಿತ್ರದುರ್ಗ ತಹಸಿಲ್ದಾರ್ ಡಾ. ನಾಗವೇಣಿ, ತಾಲ್ಲೂಕು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಧಿಕಾರಿ ಸುಧಾ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ದೀಪಾ ಮಹೇಶ್, ಉಪಾಧ್ಯಕ್ಷ ತಿಪ್ಪೇಸ್ವಾಮಿ, ಸದಸ್ಯರುಗಳು, ಮುಖಂಡರುಗಳಾದ ಸಂತೋಷ, ಕಾಕಿ ಹನುಮಂತರೆಡ್ಡಿ, ವೀವೇಕಪ್ಪ, ನಾಗರಾಜ್, ಪವನ್ ಕುಮಾರ್, ಡಿ.ಆರ್.ಮಂಜುನಾಥ್, ಮುಖಂಡರು, ಸಾರ್ವಜನಿಕರು ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Advertisement
Tags :
chitradurgaGoshalaGovernmentguarantee schemesinaugurationMla t. Raghumurthypro-peoplesuddionesuddione newsTuruvanuruಉದ್ಘಾಟನೆಗೋಶಾಲೆಗ್ಯಾರಂಟಿ ಯೋಜನೆಗಳುಜನಪರತುರುವನೂರುಶಾಸಕ ಟಿ.ರಘುಮೂರ್ತಿಸರ್ಕಾರಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article