For the best experience, open
https://m.suddione.com
on your mobile browser.
Advertisement

ಹಿರಿಯ ನಾಗರಿಕರ ಬಗ್ಗೆ ಅಸಡ್ಡೆ ಅಸಹನೆ ಮನೋಭಾವ ಸಲ್ಲದು : ರಂಗಪ್ಪ ರೆಡ್ಡಿ

06:15 PM Sep 13, 2024 IST | suddionenews
ಹಿರಿಯ ನಾಗರಿಕರ ಬಗ್ಗೆ ಅಸಡ್ಡೆ ಅಸಹನೆ ಮನೋಭಾವ ಸಲ್ಲದು   ರಂಗಪ್ಪ ರೆಡ್ಡಿ
Advertisement

Advertisement
Advertisement

ಚಿತ್ರದುರ್ಗ. ಸೆ.13: ಹಿರಿಯ ನಾಗರಿಕರ ಬಗ್ಗೆ ಅಸಡ್ಡೆ, ಅಸಹ್ಯ ಮನೋಭಾವ ಸಲ್ಲದು ಎಂದು ಎಂದು ಹಿರಿಯ ನಾಗರಿಕರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ರಂಗಪ್ಪ ರೆಡ್ಡಿ ಹೇಳಿದರು.

Advertisement

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘ, ರೋಟರಿ ಕ್ಲಬ್ ಹಾಗೂ ಹಿರಿಯ ನಾಗರಿಕರ ಸ್ವಯಂ ಸೇವಾ ಸಂಸ್ಥೆಗಳ ವತಿಯಿಂದ ಶುಕ್ರವಾರ ನಗರದ ಒನಕೆ ಓಬವ್ವ ಕ್ರೀಡಾಂಗಣದಲ್ಲಿ ಆಯೋಜಿಸಲಾದ ಹಿರಿಯ ನಾಗರಿಕರ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

Advertisement

ಅಕ್ಟೋಬರ್ 1 ರಂದು ಇಡೀ ವಿಶ್ವದಾದ್ಯಂತ ವಿಶ್ವ ನಾಗರಿಕರ ದಿನಾಚರಣೆಯನ್ನು ಆಚರಿಸಲಾಗುತ್ತದೆ. ಇದರ ಅಂಗವಾಗಿ ಕ್ರೀಡೆ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಹಿರಿಯ ನಾಗರಿಕರೆಲ್ಲರೂ ಕ್ರೀಡಾಕೂಟದಲ್ಲಿ ಭಾಗವಹಿಸಿ ಪ್ರಶಸ್ತಿಗಳನ್ನು ಪಡೆಯಬೇಕೆಂದೇನು ಇಲ್ಲ. ದೈಹಿಕವಾಗಿ ಚಟುವಟಿಕೆಯಿಂದರಲು ಸಹಕಾರಿಯಾಗಿದೆ. ಸಮಾಜದಲ್ಲಿ ಹಿರಿಯ ನಾಗರಿಕರನ್ನು ಗೌರವದಿಂದ ಕಾಣಬೇಕು ಎಂದರು.

Advertisement

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ ಆರ್ ಬಣಕಾರ್ ಮಾತನಾಡಿ, ಪ್ರಸ್ತುತ ದಿನಗಳಲ್ಲಿ 60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಕ್ರೀಡೆ ಹಾಗೂ ಸಾಂಕೃತಿಕ ಕ್ಷೇತ್ರದಲ್ಲಿ ಅವಕಾಶಗಳು ಸಿಗುವುದು ಕಡಿಮೆ. ಆದ್ದರಿಂದ ಪ್ರತಿ ವರ್ಷದಂತೆ ಈ ಬಾರಿಯೂ ವಿಶ್ವ ನಾಗರೀಕರ ದಿನಾಚರಣೆಯ ಅಂಗವಾಗಿ ಹಿರಿಯ ನಾಗರೀಕರಿಗೆ ಕ್ರೀಡಾಕೂಟ ಹಾಗೂ ಸಾಂಕೃತಿಕ ಕಾರ್ಯಕ್ರಮ ಆಯೋಜಿಸಲಾಗಿದೆ. ಕ್ರೀಡೆ, ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದರಿಂದ ಮನಸ್ಸಿಗೆ ಉಲ್ಲಾಸ, ಉತ್ಸಾಹ ನೆಮ್ಮದಿಯನ್ನು ನೀಡುವುದರ ಜೊತೆಗೆ, ಹಿರಿಯ ನಾಗರಿಕರ ಸಾಮರ್ಥ್ಯಕ್ಕೆ ಈ ವೇದಿಕೆ ಸಾಕ್ಷಿಯಾಗಲಿದೆ ಎಂದರು.

ಹಿರಿಯ ನಾಗರಿಕರಿಗೆ ಮ್ಯೂಜಿಕಲ್ ಚೇರ್, ಬಿರುಸಿನ ನಡಿಗೆ, ಬಕೆಟ್‌ನಲ್ಲಿ ರಿಂಗ್ ಎಸೆಯುವ ಸ್ಪರ್ಧೆ, ಗಾಯನ ಮತ್ತು ಏಕ ಪಾತ್ರಾಭಿನಯ ಸ್ಪರ್ಧೆಗಳನ್ನು ನಡೆಸಲಾಯಿತು.
ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಡಿ.ಸಿ.ಸೋಮಶೇಖರಯ್ಯ ಸ್ವಾಗತಿಸಿದರು. ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರ ನೋಡಲ್ ಅಧಿಕಾರಿ ಜಿ.ಹರಿಪ್ರಸಾದ್ ವಂದಿಸಿದರು. ಬಾಲಭವನ ನಿರ್ವಾಹಕ ಕುಮಾರ್ ಕಾರ್ಯಕ್ರಮ ನಿರೂಪಿಸಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಜಿಲ್ಲಾ ನಿರೂಪಣಾಧಿಕಾರಿ ಎಸ್.ವಿಜಯ್ ಕುಮಾರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿ ಪವಿತ್ರ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಎಂ.ವಿ.ವೀಣಾ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸವಿತಾ, ಪರಿವೀಕ್ಷಣಾಧಿಕಾರಿ ಸುರೇಶ್ ಸೇರುದಂತೆ ಸಿಬ್ಬಂದಿ ಉಪಸ್ಥಿತರಿದ್ದರು.

Tags :
Advertisement