For the best experience, open
https://m.suddione.com
on your mobile browser.
Advertisement

ಒಳ ಮೀಸಲಾತಿ : ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು : ಚಿತ್ರದುರ್ಗದಲ್ಲಿ ದಲಿತ ಸಂಘಟನೆಗಳ ಹರ್ಷೋದ್ಗಾರ

08:33 PM Aug 01, 2024 IST | suddionenews
ಒಳ ಮೀಸಲಾತಿ   ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು   ಚಿತ್ರದುರ್ಗದಲ್ಲಿ ದಲಿತ ಸಂಘಟನೆಗಳ ಹರ್ಷೋದ್ಗಾರ
Advertisement

Advertisement
Advertisement

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಆಗಸ್ಟ್. 01 : ಕಳೆದ ಮೂವತ್ತು ನಲವತ್ತು ವರ್ಷಗಳಿಂದಲೂ ಒಳ ಮೀಸಲಾತಿಗಾಗಿ ಕರ್ನಾಟಕ ಸೇರಿದಂತೆ ಆಂಧ್ರ, ತೆಲಂಗಾಣ, ತಮಿಳುನಾಡು ರಾಜ್ಯಗಳಲ್ಲಿ ನಡೆಯುತ್ತಿದ್ದ ಹೋರಾಟಕ್ಕೆ ಸುಪ್ರೀಂ ಕೋರ್ಟ್‌ನ ಏಳು ನ್ಯಾಯಾಧೀಶರ ಪೀಠ ಗುರುವಾರ ಒಪ್ಪಿಗೆ ಸೂಚಿಸಿರುವುನ್ನು ಸ್ವಾಗತಿಸಿದ ಕರ್ನಾಟಕ ದಲಿತ ಸಂಘರ್ಷ ಸಮಿತಿ, ಮಾದಿಗ ದಂಡೋರ ಮೀಸಲಾತಿ ಹೋರಾಟ ಸಮಿತಿಯಿಂದ ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಪಟಾಕಿ ಸಿಡಿಸಿ ಹರ್ಷೋದ್ಗಾರ ವ್ಯಕ್ತಪಡಿಸಲಾಯಿತು.

Advertisement

ಆರ್ಥಿಕ, ಸಾಮಾಜಿಕ, ಶೈಕ್ಷಣಿಕ, ರಾಜಕೀಯವಾಗಿ ಅತ್ಯಂತ ಹಿಂದುಳಿದಿರುವ ಒಲೆಯ, ಮಾದಿಗರಿಗೆ ನ್ಯಾಯ ಸಿಗಬೇಕೆಂದು ಆಂಧ್ರದಲ್ಲಿ ಮಂದಕೃಷ್ಣ ಮಾದಿಗ ಸೇರಿದಂತೆ ಬಿ.ಕೃಷ್ಣಪ್ಪ, ಜಯಣ್ಣ ಇವರುಗಳು ನಡೆಸಿದ ಹೋರಾಟಕ್ಕೆ ಸುಪ್ರೀಂ ಕೋರ್ಟ್ ತೀರ್ಪಿನಿಂದ ಜಯ ಸಿಕ್ಕಂತಾಗಿದೆ. ಶತ ಶತಮಾನಗಳಿಂದಲೂ ತುಳಿತಕ್ಕೊಳಗಾಗಿರುವ ದಲಿತರಿಗೆ ಇದೊಂದು ಐತಿಹಾಸಿಕ ತೀರ್ಪು ಎಂದು ದಲಿತ ಮುಖಂಡ ಬಾಳೆಕಾಯಿ ಶ್ರೀನಿವಾಸ್ ಮೆಚ್ಚುಗೆ ಸೂಚಿಸಿದರು.

Advertisement

ಮಾದಿಗ ದಂಡೋರ ಮೀಸಲಾತಿ ಹೋರಾಟ ಸಮಿತಿ ಜಿಲ್ಲಾಧ್ಯಕ್ಷ ತಿಪ್ಪೇಸ್ವಾಮಿ, ಪ್ರಧಾನ ಕಾರ್ಯದರ್ಶಿ ನಾಗರಾಜ್, ಕಾರ್ಯಾಧ್ಯಕ್ಷ ಕರಿಯಪ್ಪ, ಮೊಳಕಾಲ್ಮುರು ತಾಲ್ಲೂಕು ಅಧ್ಯಕ್ಷ ಹನುಮಂತಪ್ಪ, ಕಾರ್ಯದರ್ಶಿ ಮಹಂತೇಶ್, ಚಳ್ಳಕೆರೆ ತಾಲ್ಲೂಕು ಅಧ್ಯಕ್ಷ ಕಾಂತರಾಜ್, ಕುಂಚಿಗನಹಾಳ್ ಮಹಲಿಂಗಪ್ಪ, ಕೆ.ರಾಜಣ್ಣ, ಬಂಗಾರಪ್ಪ, ದಲಿತ ಮುಖಂಡ ಬಿ.ರಾಜಪ್ಪ, ಅನಂತರಾಜು, ನಾಗರಾಜ್, ಕೆಂಚಪ್ಪ ಇನ್ನು ಅನೇಕರು ಈ ಸಂದರ್ಭದಲ್ಲಿ ಹಾಜರಿದ್ದರು.

Tags :
Advertisement