Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಹಿರಿಯೂರು | ಹೊತ್ತಿ ಉರಿದ ಎರಡು ಲಾರಿಗಳು...!

04:57 PM May 19, 2024 IST | suddionenews
Advertisement

ಸುದ್ದಿಒನ್, ಹಿರಿಯೂರು, ಮೇ. 19 : ಪ್ರತ್ಯೇಕ ಘಟನೆಯಲ್ಲಿ ನಿಲ್ಲಿಸಿದ್ದ ಎರಡು ಲಾರಿಗಳಲ್ಲಿ ಆಕಸ್ಮಿಕ ಬೆಂಕಿ ಸಂಭವಿಸಿದ್ದು, ಎರಡು ಲಾರಿಯ ಮುಂಭಾಗದಲ್ಲಿ ಸಂಪೂರ್ಣ ಸುಟ್ಟು ಹೋದ ಘಟನೆ ನಡೆದಿದೆ.

Advertisement

ನಗರದ ರಾಷ್ಟ್ರೀಯ ಹೆದ್ದಾರಿ ನಾಲ್ಕರ ಬೆಂಗಳೂರು ರಸ್ತೆಯ ಸ್ವಾಮಿಯಪ್ಪ ಹೋಟೆಲ್ ಬಳಿ ರಸ್ತೆಯ ಪಕ್ಕದಲ್ಲಿ ತಮಿಳುನಾಡು ನಂಬರಿನ ಲಾರಿಯ ಮುಂಭಾಗದಲ್ಲಿ ಬೆಂಕಿ ಕಾಣಿಸಿಕೊಂಡು, ಹೊತ್ತಿ ಉರಿದಿದೆ. ಇದಲ್ಲದೆ ತಾಲೂಕಿನ ಕೆಆರ್ ಹಳ್ಳಿ ಗೇಟ್ ಬಳಿಯ ಡಾಬಾ ಹೋಟೆಲ್ ಬಳಿ ನಿಲ್ಲಿಸಿದ್ದ ಲಾರಿ ಟ್ರಕ್ ನಲ್ಲಿ ಬೆಂಕಿ ಕಾಣಿಸಿಕೊಂಡು ಮುಂಭಾಗದಲ್ಲಿ ಸುಟ್ಟು ಕರಕಲಾಗಿದೆ. ವಿಷಯ ತಿಳಿದ ತಕ್ಷಣ ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಭೇಟಿ ನೀಡಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಘಟನೆ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ.

Advertisement
Advertisement
Tags :
bengalurucaughtchitradurgafireincidentisolatedlorriessuddionesuddione newstwoಘಟನೆಚಿತ್ರದುರ್ಗಪ್ರತ್ಯೇಕಬೆಂಗಳೂರುಲಾರಿಗಳುಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article