ನೌಕರರು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದು ದುರಂತ, ಸರ್ಕಾರ ನೌಕರರ ಹಿತ ಕಾಪಾಡಲಿ : ಕೆ. ಮಂಜುನಾಥ
ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್.19 : ಕರ್ತವ್ಯ ನಿರ್ವಹಿಸುತ್ತಿರುವ ಸರ್ಕಾರಿ ನೌಕರರು ಇಲಾಖೆಯಲ್ಲಿನ ಖಾಲಿ ಹುದ್ದೆಗಳ ಹೆಚ್ಚುವರಿ ಕಾರ್ಯಭಾರವನ್ನು ಹಾಲಿ ಕರ್ತವ್ಯ ನಿರ್ವಹಿಸುತ್ತಿರುವ ನೌಕರರ ಮೇಲೆ ಏರುತ್ತಿರುವುದರಿಂದ ಮೇಲಾಧಿಕಾರಿಗಳ, ಜನಪ್ರತಿನಿಧಿಗಳ ಒತ್ತಡ ಸಾರ್ವಜನಿಕರಿಗೆ ಸೇವೆಗಳನ್ನು ಒದಗಿಸಲಾಗದೆ ದಿನನಿತ್ಯ ಸಾರ್ವಜನಿಕರ ಆರೋಪ, ನಿಂದನೆಗಳನ್ನು ಸಹಿಸಲಾಗದೆ ನೌಕರರು ನೊಂದು ಆತ್ಮಹತ್ಯೆಯ ದಾರಿ ಹಿಡಿಯುತ್ತಿರುವುದು ದುರಂತವಾಗಿದೆ ಎಂದು ಚಿತ್ರದುರ್ಗ ಸರ್ಕಾರಿ ನೌಕರರ ಸಂಘದ ನಿಕಟ ಪೂರ್ವ ಅಧ್ಯಕ್ಷ ಕೆ. ಮಂಜುನಾಥ ಅವರು ಬೇಸರ ವ್ಯಕ್ತಪಡಿಸಿದ್ದಾರೆ.
ರಾಜ್ಯ ಸರ್ಕಾರಗಳು ಸರ್ಕಾರದ ಅಂಗವಾಗಿ ಕೆಲಸ ನಿರ್ವಹಿಸುತ್ತಿರುವ ಸರ್ಕಾರಿ ನೌಕರರ ಕಾರ್ಯಭಾರವನ್ನು ಕಮ್ಮಿ ಮಾಡಲು ಆದಷ್ಟು ಬೇಗ ಇಲಾಖೆಗಳಲ್ಲಿ ಖಾಲಿ ಉಳಿದಿರುವ 259000 ಹುದ್ದೆಗಳನ್ನು ಆದಷ್ಟು ಬೇಗ ಭರ್ತಿ ಮಾಡಿ ಪ್ರಸ್ತುತ ಕರ್ತವ್ಯ ನಿರ್ವಹಿಸುತ್ತಿರುವ ನೌಕರರ ಹಿತ ಕಾಪಾಡಬೇಕೆಂದು ಸರ್ಕಾರಕ್ಕೆ ಒತ್ತಾಯಿಸಿದರು.
ರಾಜ್ಯ ಸರ್ಕಾರದ ಅಧೀನದಲ್ಲಿ ಬರುವ 72 ಇಲಾಖೆಗಳ ಮಾತೃ ಇಲಾಖೆಯಾದ ಕಂದಾಯ ಇಲಾಖೆಯ ನೌಕರರಾದ ಗುರುಲಿಂಗಪ್ಪ ಅವರ ಕುಟುಂಬದ ವರ್ಗದವರಿಗೆ ದುಃಖವನ್ನು ಬರಿಸುವಂತಹ ಶಕ್ತಿ ಭಗವಂತ ನೀಡಲಿ ಹಾಗೂ ಸರ್ಕಾರ ಈ ಕೂಡಲೇ 50 ಲಕ್ಷಗಳ ಪರಿಹಾರವನ್ನು ಬಿಡುಗಡೆ ಮಾಡುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.