For the best experience, open
https://m.suddione.com
on your mobile browser.
Advertisement

ಮಕ್ಕಳಲ್ಲಿ ಪುಸ್ತಕ ಓದುವ ಅಭಿರುಚಿ ಮೂಡಿಸುವ ಜವಾಬ್ದಾರಿ ಶಿಕ್ಷಕರದ್ದು : ಡಿಡಿಪಿಐ ಎಂ.ಆರ್. ಮಂಜುನಾಥ

03:01 PM Oct 05, 2024 IST | suddionenews
ಮಕ್ಕಳಲ್ಲಿ ಪುಸ್ತಕ ಓದುವ ಅಭಿರುಚಿ ಮೂಡಿಸುವ ಜವಾಬ್ದಾರಿ ಶಿಕ್ಷಕರದ್ದು   ಡಿಡಿಪಿಐ ಎಂ ಆರ್  ಮಂಜುನಾಥ
Advertisement

Advertisement

ವರದಿ ಮತ್ತು ಫೋಟೋ ಕೃಪೆ,
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 05 : ಮಕ್ಕಳಲ್ಲಿ ಪುಸ್ತಕ ಓದುವ ಅಭಿರುಚಿ ಮೂಡಿಸುವ ಜವಾಬ್ದಾರಿ ಶಿಕ್ಷಕರುಗಳ ಮೇಲಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಂ.ಆರ್.
ಮಂಜುನಾಥ ತಿಳಿಸಿದರು.

Advertisement

ಕಾರ್ಯಕ್ರಮದ ಸಂಪೂರ್ಣ ವಿಡಿಯೋ ನೋಡಿ

ಕರ್ನಾಟಕ ಕನ್ನಡ ಬರಹಗಾರರ ಮತ್ತು ಪ್ರಕಾಶಕರ ಸಂಘ, ರೋಟರಿ ಕ್ಲಬ್ ಚಿನ್ಮೂಲಾದ್ರಿ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಚಿತ್ರದುರ್ಗ ಮತ್ತು ಚಿಕ್ಕಮಗಳೂರು, ಕನ್ನಡ ಮತ್ತು ಸಂಸ್ಕøತಿ ನಿರ್ದೇಶನಾಲಯದ ಸಹಯೋಗದೊಂದಿಗೆ ರೋಟರಿ ಬಾಲಭವನದಲ್ಲಿ ಶುಕ್ರವಾರ ಹಮ್ಮಿಕೊಳ್ಳಲಾಗಿದ್ದ ಜಿಲ್ಲೆಯ ನೂರು ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ ನೂರು ನೂರು ಉಚಿತ ಪುಸ್ತಕ ವಿತರಣಾ ಸಮಾರಂಭ ಉದ್ಗಾಟಿಸಿ ಮಾತನಾಡಿದರು.

ಪಠ್ಯದ ಜೊತೆಗೆ ಮಕ್ಕಳಿಗೆ ಕನ್ನಡ ಭಾಷೆ, ಸಾಹಿತ್ಯ, ಸಂಸ್ಕøತಿಯನ್ನು ಪರಿಚಯಿಸಬೇಕು. ಸಣ್ಣ ಕಥೆ, ನೀತಿ ಪಾಠ, ವಿಜ್ಞಾನ-ತಂತ್ರಜ್ಞಾನಕ್ಕೆ ಸಂಬಂಧಿಸಿದ ಪುಸ್ತಕಗಳಿವೆ. ಮಕ್ಕಳು ಕೈಯಲ್ಲಿ ಮೊಬೈಲ್ ಹಿಡಿಯುವ ಬದಲು ಪುಸ್ತಕಗಳನ್ನು ಓದಿದಾಗ ಜ್ಞಾನ ಬೆಳೆಯುತ್ತದೆ. ಮಹಾತ್ಮಗಾಂಧಿಜಿ ಸತ್ಯಹರಿಶ್ಚಂದ್ರ ನಾಟಕ ನೋಡಿ ಜೀವನದಲ್ಲಿ ಒಮ್ಮೆಯೂ ಸುಳ್ಳು ಹೇಳಲಿಲ್ಲ ಎಂದರು.

ಮೊಬೈಲ್, ಟಿ.ವಿ. ಕಂಪ್ಯೂಟರ್ ಹಾವಳಿ ನಡುವೆ ಸಣ್ಣ ಸಣ್ಣ ಕಥೆಗಳು ಮಕ್ಕಳ ಮನಸ್ಸಿನ ಮೇಲೆ ಪ್ರಭಾವ ಬೀರುತ್ತದೆ. ಪುಸ್ತಕ ಓದುವವರ ಸಂಖ್ಯೆ ಕಡಿಮೆಯಾಗುತ್ತಿರುವುದರಿಂದ ಸಾಹಿತ್ಯ, ಸಂಗೀತ, ಜಾನಪದ, ನೃತ್ಯಕಲೆಯ ಬಗ್ಗೆ ಮಕ್ಕಳಲ್ಲಿ ಆಸಕ್ತಿ ಮೂಡಿಸಬೇಕಿದೆ ಎಂದು ಹೇಳಿದರು.

ಪುಸ್ತಕಗಳನ್ನು ಅನಾವರಣಗೊಳಿಸಿದ ಸಾಹಿತಿ ಶ್ರೀಮತಿ ಸಿ.ಬಿ.ಶೈಲಾ ಜಯಕುಮಾರ್ ಮಾತನಾಡಿ ಪುಸ್ತಕಗಳು ಕೇವಲ ಅಕ್ಷರಗಳಲ್ಲ. ಏಕಾಗ್ರತೆ, ಸ್ಮರಣ ಶಕ್ತಿಯನ್ನು ಹೆಚ್ಚಿಸುತ್ತವೆ.

ಜ್ಞಾನದ ಕಣಜ ಪುಸ್ತಕಗಳನ್ನು ಓದುವುದರಿಂದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅನುಕೂಲವಾಗುವುದಲ್ಲದೆ. ಒತ್ತಡ ನಿವಾರಿಸುತ್ತದೆ. ಪದಸಂಪತ್ತು, ಬರಹ, ಕೌಶಲ್ಯ ಮೂಡುತ್ತದೆ. ಓದಿನಿಂದ ಮನಸ್ಸು ವಿಕಾಸಗೊಂಡು ಶಾಂತಿ ನೆಲೆಸುತ್ತದೆ ಎಂದು ಪುಸ್ತಕಗಳ ಮಹತ್ವ ತಿಳಿಸಿದರು.

ಸ್ವರ್ಗ ಎನ್ನುವುದು ನಮ್ಮ ಕೈಯಲ್ಲಿಲ್ಲ. ನಮ್ಮ ಪುಸ್ತಕದಲ್ಲಿದೆ. ಏ.23 ನ್ನು ಪುಸ್ತಕ ದಿನಾಚರಣೆಯನ್ನಾಗಿ ಆಚರಿಸಲಾಗುತ್ತಿದೆ. ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್‍ರವರ ಬಳಿ ಸಾವಿರಾರು ಪುಸ್ತಕಗಳಿದ್ದವು ಎಂದು ನುಡಿದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕರ್ನಾಟಕ ಕನ್ನಡ ಬರಹಗಾರರ ಮತ್ತು ಪ್ರಕಾಶಕರ ಸಂಘದ ಅಧ್ಯಕ್ಷ ನಿಡಸಾಲೆ ಪುಟ್ಟಸ್ವಾಮಯ್ಯ ಮಾತನಾಡಿ ಆಸಕ್ತ ಕ್ರಿಯಾಶೀಲರೆಲ್ಲಾ ಸೇರಿಕೊಂಡು 2003 ರಿಂದ ಪುಸ್ತಕಗಳನ್ನು ನೀಡುವ ಕೆಲಸ ಆರಂಭಿಸಿದೆವು. ಹನ್ನೆರಡರಿಂದ ಹದಿಮೂರು ಸಾವಿರ ಪುಸ್ತಕಗಳನ್ನು ಸಂಗ್ರಹಿಸಿದ್ದೇವೆ. 900 ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ ಇದುವರೆವಿಗೂ 90 ಸಾವಿರ ಪುಸ್ತಕಗಳನ್ನು ಕೊಟ್ಟಿದ್ದೇವೆ. ಚಿತ್ರದುರ್ಗ ಒಂಬತ್ತನೆ ಜಿಲ್ಲೆ. ಮಕ್ಕಳಲ್ಲಿ ಪುಸ್ತಕಗಳನ್ನು ಓದುವ ಹವ್ಯಾಸ ಮೂಡಿಸುವುದು ನಮ್ಮ ಉದ್ದೇಶ ಎಂದು ಹೇಳಿದರು.

ಮಕ್ಕಳಿಗೆ ಮೊಬೈಲ್ ಬಿಡಿಸಿ ಕೈಗೆ ಪುಸ್ತಕಗಳನ್ನು ಹಿಡಿಸುವ ಕೆಲಸ ಮಾಡುವ ಹೊಣೆಗಾರಿಕೆ ಶಿಕ್ಷಕರುಗಳ ಮೇಲಿದೆ. ಇದುವರೆವಿಗೂ 36 ಮಂದಿಗೆ ಪ್ರಶಸ್ತಿಗಳನ್ನು ನೀಡಿದ್ದೇವೆ. ಜ್ಞಾನ ಹಂಚುವ ಕೆಲಸ ಮಾಡುತ್ತಿದ್ದರೂ ಸರ್ಕಾರಗಳು ನಮ್ಮನ್ನು ನಗಣ್ಯವಾಗಿ ಕಾಣುತ್ತಿವೆ ಎಂದು ಬೇಸರ ವ್ಯಕ್ತಪಡಿಸಿದರು.

ರೋಟರಿ ಕ್ಲಬ್ ಚಿನ್ಮೂಲಾದ್ರಿ ಅಧ್ಯಕ್ಷ ಮಂಜುನಾಥ ಭಾಗವತ್, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕೆ.ಎಂ.ಶಿವಸ್ವಾಮಿ, ಚಿಕ್ಕಮಗಳೂರು ಜಿಲ್ಲೆ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಸೂರಿ ಶ್ರೀನಿವಾಸ್, ನಾಗರಾಜ್ ವೇದಿಕೆಯಲ್ಲಿದ್ದರು.

ಕ.ಸಾ.ಪ. ಕಾರ್ಯದರ್ಶಿ ಶ್ರೀನಿವಾಸ್ ವಿ.ಮಳಲಿ, ಜಿಲ್ಲಾ ಶರಣ ಸಾಹಿತ್ಯ ಪರಿಷತ್ ಕಾರ್ಯದರ್ಶಿ ಹುರಳಿ ಎಂ.ಬಸವರಾಜ್, ಕರ್ನಾಟಕ ಕನ್ನಡ ಬರಹಗಾರರ ಮತ್ತು ಪ್ರಕಾಶಕರ ಸಂಘದ ಕಾರ್ಯದರ್ಶಿ ಹಾಗೂ ಪದಾಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Tags :
Advertisement