Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಪ್ರತಿಯೊಬ್ಬರಲ್ಲಿಯೂ ಕನ್ನಡ ಭಾಷೆ ಬಗ್ಗೆ ಅಭಿಮಾನ ಮೂಡಿಸುವ ಕೆಲಸವಾಗಬೇಕು : ಡಾ.ಕೆ.ಎಂ.ವೀರೇಶ್

05:48 PM Nov 24, 2024 IST | suddionenews
Advertisement

 

Advertisement

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ನವೆಂಬರ್. 24 : ಕೇವಲ ನವೆಂಬರ್ ತಿಂಗಳಿನಲ್ಲಿ ಕನ್ನಡ ರಾಜ್ಯೋತ್ಸವ ಆಚರಿಸುವ ಬದಲು ಪ್ರತಿಯೊಬ್ಬರಲ್ಲಿಯೂ ಕನ್ನಡ ನಾಡು, ನುಡಿ, ನೆಲ, ಜಲ, ಸಂಸ್ಕøತಿ, ಭಾಷೆ ಬಗ್ಗೆ ಅಭಿಮಾನ ಮೂಡಿಸುವ ಕೆಲಸವಾಗಬೇಕೆಂದು ಜಿಲ್ಲಾ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ.ಕೆ.ಎಂ.ವೀರೇಶ್ ತಿಳಿಸಿದರು.

Advertisement

ಕರ್ನಾಟಕ ರತ್ನ ಡಾ.ರಾಜ್‍ಕುಮಾರ್ ಸಾಂಸ್ಕøತಿಕ ಕಲಾ ಪರಿಷತ್, ಸಮತಾ ಸಾಹಿತ್ಯ ವೇದಿಕೆ ಇವುಗಳ ಸಹಯೋಗದೊಂದಿಗೆ ಕನ್ನಡ ರಾಜ್ಯೋತ್ಸವದ ಅಂಗವಾಗಿ ‌ಪತ್ರಕರ್ತರ ಭವನದಲ್ಲಿ ಭಾನುವಾರ ಏರ್ಪಡಿಸಲಾಗಿದ್ದ ರಾಜ್ಯ ಮಟ್ಟದ ಕವಿಗೋಷ್ಟಿ, ಸಾಂಸ್ಕøತಿಕ ಕಾರ್ಯಕ್ರಮ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದವರಿಗೆ ಪ್ರಶಸ್ತಿ ಪ್ರದಾನ ಹಾಗೂ ಸನ್ಮಾನ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

ಜಾನಪದ, ತತ್ವಪದ, ಸೋಬಾನೆ ಪದ, ಗೀಗಿ ಪದ ಇವುಗಳಿಗೆ ಇಂತಹ ಕಾರ್ಯಕ್ರಮಗಳ ಮೂಲಕ ಮತ್ತೆ ಜೀವ ತುಂಬಬೇಕಿದೆ. ಕನ್ನಡದ ಬಗ್ಗೆ ಯಾರಲ್ಲಿಯೂ ಉತ್ಸಾಹ ಕಡಿಮೆಯಾಗಬಾರದು. ಇತ್ತೀಚಿನ ದಿನಗಳಲ್ಲಿ ಯುವ ಜನಾಂಗದಲ್ಲಿ ಸಂಸ್ಕøತಿ, ಸಂಸ್ಕಾರ ಕಡಿಮೆಯಾಗುತ್ತಿರುವುದು ಬೇಸರದ ಸಂಗತಿ. ವಯಸ್ಸಾದ ವೃದ್ದರನ್ನು ಮಕ್ಕಳು ಜೋಪಾನ ಮಾಡದೆ ಅನಾಥಾಶ್ರಮಕ್ಕೆ ಕಳಿಸುತ್ತಿರುವುದು ನಿಜಕ್ಕೂ ಹೆತ್ತವರಿಗೆ ಮಾಡಿದ ದ್ರೋಹವಿದ್ದಂತೆ. ಯಾವುದೇ ಯೂನಿವರ್ಸಿಟಿಯಲ್ಲಿ ಪದವಿ ಪಡೆಯದ ಜಾನಪದ ಹಾಡುಗಾರ್ತಿ ಸಿರಿಯಜ್ಜಿ ಸಾವಿರಾರು ಜಾನಪದಗಳನ್ನು ಹಾಡಿದ್ದಾರೆ. ಬಾಯಿಂದ ಬಾಯಿಗೆ ಪಸರಿಸುವ ಜಾನಪದ, ಸೋಬಾನೆ, ತತ್ವಪದ, ಗೀಗಿಪದಗಳನ್ನು ಸಂರಕ್ಷಿಸಿ ಮುಂದಿನ ಪೀಳಿಗೆಗೆ ಉಳಿಸಬೇಕಿದೆ ಎಂದು ಹೇಳಿದರು.

ಕನ್ನಡ ಸಾಹಿತ್ಯ ಪರಿಷತ್ ನಿಕಟಪೂರ್ವ ಜಿಲ್ಲಾಧ್ಯಕ್ಷ ಡಾ.ದೊಡ್ಡಮಲ್ಲಯ್ಯ ಮಾತನಾಡಿ ವಿಶ್ವದ ಮೂರನೆ ಅತ್ಯಂತ ಪ್ರಾಚೀನ ಭಾಷೆ ಕನ್ನಡ ಅರ್ಥಪೂರ್ಣವಾದ ವೈಭವೋಪೇತ ಸಂಸ್ಕøತಿ ನಿರ್ಮಾಣಕ್ಕೆ ಕಾರಣವಾಗಿದ್ದು, ವಚನ ಸಾಹಿತ್ಯ ಮತ್ತು ಸಂಸ್ಕøತಿಯನ್ನು ದೇಶಕ್ಕೆ ಕೊಡುಗೆಯಾಗಿ ನೀಡಿದೆ ಎಂದರು.

ಹನ್ನೆರಡನೆ ಶತಮಾನದ ಬಸವಣ್ಣ, ಪದ್ಮಭೂಷಣ, ಕರ್ನಾಟಕ ರತ್ನ ಡಾ.ರಾಜ್‍ಕುಮಾರ್ ಸೇರಿದಂತೆ ಅನೇಕ ಸರ್ವಶ್ರೇಷ್ಟ ಮಹನೀಯರನ್ನು ಕನ್ನಡಿಗರು ನೆನಪಿಸಿಕೊಳ್ಳಬೇಕು. ಕರ್ನಾಟಕ ರತ್ನ ಡಾ.ರಾಜ್‍ಕುಮಾರ್ ಸಾಂಸ್ಕøತಿಕ ಕಲಾ ಪರಿಷತ್‍ನ ರಾಜ್ಯಾಧ್ಯಕ್ಷ ಪರಶುರಾಮ್ ಗೊರಪ್ಪರ್ ಕನ್ನಡ ರಾಜ್ಯೋತ್ಸವ, ರಾಜ್ಯ ಮಟ್ಟದ ಕವಿಗೋಷ್ಟಿ, ಸಾಂಸ್ಕøತಿಕ ಕಾರ್ಯಕ್ರಮ ಹಾಗೂ ವಿವಿಧ ಕ್ಷೇತ್ರಗಳಲ್ಲಿನ ಸಾಧಕರನ್ನು ಗುರುತಿಸಿ ಪ್ರಶಸ್ತಿಗಳನ್ನು ನೀಡಿ ಸನ್ಮಾನಿಸುವ ಮೂಲಕ ಎಲ್ಲರಲ್ಲಿಯೂ ಕನ್ನಡದ ಬಗ್ಗೆ ಜಾಗೃತಿ ಮೂಡಿಸುತ್ತಿದ್ದಾರೆಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಸಾಮಾಜಿಕ ಚಿಂತಕ ಆರ್.ಶೇಷಣ್ಣಕುಮಾರ್ ಮಾತನಾಡಿ ಒಳ್ಳೆಯ ಮನಸ್ಸನ್ನು ಗೆಲ್ಲಲು ಒಳ್ಳೆಯ ಮನಸ್ಸಿರುವವರಿಂದ ಮಾತ್ರ ಸಾಧ್ಯ. ಕಲಾವಿದರಲ್ಲಿ ಒಳ್ಳೆಯ ಮನಸ್ಸಿರುತ್ತದೆ. ಎಷ್ಟೆ ಸಂಘಟನೆ ಮಾಡಿ ಹೋರಾಟ ನಡೆಸಿದರು ಕಲಾವಿದರುಗಳಿಗೆ ನ್ಯಾಯಯುತವಾದ ಬೇಡಿಕೆಗಳನ್ನು ಈಡೇರಿಸಲು ಆಗುತ್ತಿಲ್ಲ. ಈಗಲೂ ಕಲಾವಿದರು ಸಂಕಷ್ಟದಲ್ಲಿರುವುದರಿಂದ ರಾಜ್ಯ ಸರ್ಕಾರದ ಮೇಲೆ ಒತ್ತಡ ಹೇರಿ ಹಕ್ಕನ್ನು ಪಡೆದುಕೊಳ್ಳಬೇಕೆಂದು ಸಲಹೆ ನೀಡಿದರು.

ಅಮೋಘವಾದ ಅಭಿನಯದ ಮೂಲಕ ಡಾ.ರಾಜ್‍ಕುಮಾರ್ ಅಭಿಮಾನಿಗಳ ಮನದಲ್ಲಿ ಇಂದಿಗೂ ಉಳಿದಿದ್ದಾರೆ. ಅವರ ಚಿತ್ರಗಳಲ್ಲಿ ಸಮಾಜಕ್ಕೆ ಉತ್ತಮ ಸಂದೇಶಗಳಿವೆ. ಪ್ರತ್ಯಕ್ಕ ಹಾಗೂ ಪರೋಕ್ಷವಾಗಿ ನನ್ನ ಮೇಲೆ ಪ್ರಭಾವ ಬೀರಿದೆ. ಯುವ ಪೀಳಿಗೆಗೆ ಸದ್ಗುಣಗಳ ಪಾಠ ಹೇಳಿಕೊಡುವಲ್ಲಿ ವಿಶ್ವವಿದ್ಯಾನಿಲಯಗಳು ಸೋತಿವೆ ಎಂದು ವಿಷಾಧಿಸಿದರು.

ಕರ್ನಾಟಕ ರತ್ನ ಡಾ.ರಾಜ್‍ಕುಮಾರ್ ಸಾಂಸ್ಕøತಿಕ ಕಲಾ ಪರಿಷತ್ ರಾಜ್ಯಾಧ್ಯಕ್ಷ ಪರಶುರಾಮ್ ಗೊರಪ್ಪರ್ ಅಧ್ಯಕ್ಷತೆ ವಹಿಸಿದ್ದರು.
ಗೌರವ ಕಾರ್ಯದರ್ಶಿ ಆರ್.ತಿಪ್ಪೇಸ್ವಾಮಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಗೌರವಾಧ್ಯಕ್ಷ ಕೆ.ಬಿ.ಕೃಷ್ಣಪ್ಪ, ಸಮತಾ ಸಾಹಿತ್ಯ ವೇದಿಕೆ ಅಧ್ಯಕ್ಷ ಓ.ವೆಂಕಟೇಶ್‍ನಾಯ್ಕ, ಕಿರುತೆರೆ ನಟಿ ಇಂದ್ರಸುಧಾ, ಹೆಚ್.ಸಿ.ದಿವುಶಂಕರ್, ಸಿಲ್ವರ್ ರಾಕ್ ವೆಲ್ಟರ್ ಫೌಂಡೇಶನ್‍ನ ಜೆ.ಆಶಾ, ಜಿ.ಸರಸ್ವತಮ್ಮ, ವೈ.ಉಷಾದೇವಿ, ಜಿ.ಟಿ.ಗಂಗಮ್ಮ, ಸೌಭಾಗ್ಯ ಮುಷ್ಟಿಗೇರಿ ಇನ್ನು ಅನೇಕರು ವೇದಿಕೆಯಲ್ಲಿದ್ದರು.

 

Advertisement
Tags :
bengaluruchitradurgaDr.K.M.Veereshkannada languagesuddionesuddione newsಕನ್ನಡ ಭಾಷೆಚಿತ್ರದುರ್ಗಡಾ.ಕೆ.ಎಂ.ವೀರೇಶ್ಬೆಂಗಳೂರುಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article