Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಚಳ್ಳಕೆರೆಯಲ್ಲಿ ಡಿಸೆಂಬರ್ 22 ಕ್ಕೆ ನಡೆಯಬೇಕಿದ್ದ ಜಿಲ್ಲಾ ಮಟ್ಟದ ಜನತಾ ದರ್ಶನ ಡಿಸೆಂಬರ್ 27 ಕ್ಕೆ ಮುಂದೂಡಿಕೆ

04:26 PM Dec 20, 2023 IST | suddionenews
Advertisement

 

Advertisement

 

ಚಿತ್ರದುರ್ಗ. ಡಿ.20:  ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್ ನೇತೃತ್ವದಲ್ಲಿ ಡಿಸೆಂಬರ್ 22 ರಂದು ಚಳ್ಳಕೆರೆಯಲ್ಲಿ ಏರ್ಪಡಿಸಲು ಉದ್ದೇಶಿಸಲಾಗಿದ್ದ ಜಿಲ್ಲಾ ಮಟ್ಟದ ಜನತಾದರ್ಶನವನ್ನು ಡಿ. 27 ಕ್ಕೆ ಮುಂದೂಡಲಾಗಿದ್ದು, ಅಂದು ಬೆಳಿಗ್ಗೆ 10.30 ಗಂಟೆಗೆ ಚಳ್ಳಕೆರೆಯ ಶ್ರೀ ಗುರು ರಾಘವೇಂದ್ರ ಕಲ್ಯಾಣ ಮಂಟಪದಲ್ಲಿ ಜಿಲ್ಲಾಮಟ್ಟದ ಜನತಾ ದರ್ಶನ ಕಾರ್ಯಕ್ರಮ ಏರ್ಪಡಿಸಲಾಗಿದೆ.

Advertisement

ಸಾರ್ವಜನಿಕರ ಕುಂದು ಕೊರತೆಗಳನ್ನು ಸ್ಥಳೀಯ ಮಟ್ಟದಲ್ಲಿ ನಿವಾರಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳ ಸೂಚನೆಯಂತೆ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಪ್ರತಿ ತಿಂಗಳು ಜಿಲ್ಲಾಮಟ್ಟದ ಜನತಾ ದರ್ಶನ ಏರ್ಪಡಿಸಲಾಗುತ್ತಿದ್ದು, ಈ ಬಾರಿಯ ಜಿಲ್ಲಾ ಮಟ್ಟದ ಜನತಾ ದರ್ಶನ ಇದೇ ಡಿಸೆಂಬರ್ 27 ರಂದು ಬೆಳಿಗ್ಗೆ 10.30 ಕ್ಕೆ ಚಳ್ಳಕೆರೆ ಪಟ್ಟಣದ ಶ್ರೀ ಗುರು ರಾಘವೇಂದ್ರ  ಕಲ್ಯಾಣ ಮಂಟಪದಲ್ಲಿ ಏರ್ಪಡಿಸಲಾಗಿದೆ.

ಜಿಲ್ಲಾಮಟ್ಟದ ಎಲ್ಲ ಅಧಿಕಾರಿಗಳು, ಜನಪ್ರತಿನಿಧಿಗಳು ಜನತಾ ದರ್ಶನದಲ್ಲಿ ಉಪಸ್ಥಿತರಿರುವರು. ಸಾರ್ವಜನಿಕರಿಂದ ಅರ್ಜಿಗಳನ್ನು ಪಡೆದು ಸ್ವೀಕೃತಿ ನೀಡುವ ಸಲುವಾಗಿ ಸಮರ್ಪಕ ರೀತಿಯಲ್ಲಿ ಕೌಂಟರ್‍ಗಳ ವ್ಯವಸ್ಥೆ ಮಾಡಲಾಗುವುದು. ಸಾರ್ವಜನಿಕರು ತಮ್ಮ ಕುಂದುಕೊರತೆ ಕುರಿತ ಅಹವಾಲು, ಅರ್ಜಿಗಳನ್ನು ಸಲ್ಲಿಸಬಹುದಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ತಿಳಿಸಿದ್ದಾರೆ.

Advertisement
Tags :
adjournmentchallakerechitradurgadecemberdistrict level Janata Darshansuddioneಚಳ್ಳಕೆರೆಚಿತ್ರದುರ್ಗಜಿಲ್ಲಾ ಮಟ್ಟದ ಜನತಾ ದರ್ಶನಡಿಸೆಂಬರ್ಸುದ್ದಿಒನ್
Advertisement
Next Article