For the best experience, open
https://m.suddione.com
on your mobile browser.
Advertisement

ಉದ್ಯೋಗ ವಾರ್ತೆ | ಡಿಸೆಂಬರ್ 13ರಂದು ನೇರ ನೇಮಕಾತಿ ಸಂದರ್ಶನ

07:10 PM Dec 09, 2024 IST | suddionenews
ಉದ್ಯೋಗ ವಾರ್ತೆ   ಡಿಸೆಂಬರ್ 13ರಂದು ನೇರ ನೇಮಕಾತಿ ಸಂದರ್ಶನ
Advertisement

Advertisement

Advertisement

ಚಿತ್ರದುರ್ಗ. ಡಿ.09: ಚಿತ್ರದುರ್ಗ ನಗರದ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಇದೇ ಡಿ.13ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 2 ರವರೆಗೆ ನೇರ ನೇಮಕಾತಿ ಸಂದರ್ಶನ ನಡೆಯಲಿದೆ.

ಸಂದರ್ಶನದಲ್ಲಿ ಮೂರಕ್ಕೂ ಹೆಚ್ಚು ಖಾಸಗಿ ಕಂಪನಿಗಳು ತಮ್ಮ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸಲು ಎಸ್.ಎಸ್.ಎಲ್.ಸಿ, ಪಿಯುಸಿ, ಡಿಪ್ಲೋಮಾ, ಐಟಿಐ, ಯಾವುದೇ ಪದವಿ ಹೊಂದಿರುವ 18 ರಿಂದ 30 ವರ್ಷದೊಳಗಿನ ಪುರುಷ ಅಥವಾ ಮಹಿಳೆ ಅಭ್ಯರ್ಥಿಗಳನ್ನು ನೇರವಾಗಿ ಆಯ್ಕೆ ಮಾಡಿಕೊಳ್ಳಲಿದ್ದು, ಅಭ್ಯರ್ಥಿಗಳು 5 ಬಯೋಡಾಟಾ ಪ್ರತಿ, ವಿದ್ಯಾರ್ಹತೆಯ ಪ್ರಮಾಣ ಪತ್ರಗಳು ಹಾಗೂ ಫೋಟೊಗಳೊಂದಿಗೆ ಭಾಗವಹಿಸಬಹುದು.

ಹೆಚ್ಚಿನ ಮಾಹಿತಿಗಾಗಿ ನಗರದ ಸ್ಟೇಡಿಯಂ ತಿರುವು, ಹಳೇ ವೈಶಾಲಿ ಗೇಟ್ ಹತ್ತಿರದ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಕಚೇರಿ ದೂರವಾಣಿ ಸಂಖ್ಯೆ 7022459064, 8105619020, 9945587060, 9964528212, 7019755147 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.

Tags :
Advertisement