For the best experience, open
https://m.suddione.com
on your mobile browser.
Advertisement

ಚಿತ್ರದುರ್ಗದಲ್ಲಿ ಕನಕ ಜಯಂತಿ : ಅದ್ದೂರಿಯಾಗಿ ಸಾಗಿದ ಮೆರವಣಿಗೆ

05:13 PM Nov 18, 2024 IST | suddionenews
ಚಿತ್ರದುರ್ಗದಲ್ಲಿ ಕನಕ ಜಯಂತಿ   ಅದ್ದೂರಿಯಾಗಿ ಸಾಗಿದ ಮೆರವಣಿಗೆ
Advertisement

Advertisement

ಚಿತ್ರದುರ್ಗ. ನ.18: ಸಂತಶ್ರೇಷ್ಟ ಭಕ್ತ ಕನಕದಾಸರ ಜಯಂತಿ ಅಂಗವಾಗಿ ಜಿಲ್ಲಾಡಳಿತದ ವತಿಯಿಂದ ನಗರದಲ್ಲಿ ಸೋಮವಾರ ವಿವಿಧ ಜಾನಪದ ಕಲಾತಂಡಗಳೊಂದಿಗೆ ಕನಕದಾಸರ ಭಾವಚಿತ್ರ ಮೆರವಣಿಗೆ ಅದ್ದೂರಿಯಾಗಿ ನಡೆಯಿತು.

Advertisement

ನಗರದ ಹೊಳಲ್ಕೆರೆ ರಸ್ತೆಯಲ್ಲಿನ ಕನಕ ಪುತ್ಥಳಿಗೆ ಹಾಗೂ ಕನಕದಾಸರ ಭಾವಚಿತ್ರಕ್ಕೆ  ಪುಷ್ಪಾರ್ಚನೆ ಹಾಕುವ ಮೂಲಕ ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್, ವಿಧಾನ ಪರಿಷತ್ ಸದಸ್ಯ ಕೆ.ಎಸ್.ನವೀನ್, ನಗರಸಭೆ ಅಧ್ಯಕ್ಷೆ ಬಿ.ಎನ್.ಸುಮಿತಾ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಂ.ಕೆ.ತಾಜ್‍ಪೀರ್, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೇರಿದಂತೆ ಮತ್ತಿತರ ಗಣ್ಯರು ಚಾಲನೆ ನೀಡಿದರು.

ಮೆರವಣಿಗೆಯಲ್ಲಿ ಗೊರವರ ಕುಣಿತ,  ಕಹಳೆ ನಾದ, ಡೊಳ್ಳು ಕುಣಿತ, ಕರಡಿ ಚಮ್ಮಳ, ತಮಟೆ ವಾದ್ಯ, ಬ್ರಾಸ್ ಬ್ಯಾಂಡ್ ಸೇರಿದಂತೆ ವಿವಿಧ ಜಾನಪದ ಕಲಾತಂಡಗಳು ಮೆರಗು ನೀಡಿದವು. ನಗರದ ಹೊಳಲ್ಕೆರೆ ರಸ್ತೆಯ ಕನಕ ವೃತ್ತದಿಂದ ಪ್ರಾರಂಭವಾದ ಮೆರವಣಿಗೆಯು ಸಂಗೋಳ್ಳಿ ರಾಯಣ್ಣ ವೃತ್ತ, ಗಾಯತ್ರಿ ಸರ್ಕಲ್, ಗಾಂಧಿವೃತ್ತ, ಎಸ್‍ಬಿಎಂ ವೃತ್ತ, ಪ್ರವಾಸಿ ಮಂದಿರ ಮಾರ್ಗವಾಗಿ ಅಂಬೇಡ್ಕರ್ ವೃತ್ತ, ಮದಕರಿ ವೃತ್ತದ ಮೂಲಕ ತರಾಸು ರಂಗಮಂದಿರ ತಲುಪಿತು.

ಈ ಸಂದರ್ಭದಲ್ಲಿ ಉಪವಿಭಾಗಾಧಿಕಾರಿ ಎಂ.ಕಾರ್ತಿಕ್, ತಹಶೀಲ್ದಾರ್ ಡಾ.ನಾಗವೇಣಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕುಮಾರಸ್ವಾಮಿ, ಜಿಲ್ಲಾ ಕುರುಬರ ಸಂಘದ ಅಧ್ಯಕ್ಷ ಎಸ್.ಶ್ರೀರಾಮ್, ಕಾರ್ಯದರ್ಶಿ ಬಿ.ಟಿ.ಜಗದೀಶ್, ತಾಲ್ಲೂಕು ಕುರುಬರ ಸಂಘದ ಅಧ್ಯಕ್ಷ ಕೆ.ಓಂಕಾರಪ್ಪ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಎಸ್.ಕೆ.ಮಲ್ಲಿಕಾರ್ಜುನ್, ನಗರಸಭೆ ಪೌರಾಯುಕ್ತೆ ಎಂ.ರೇಣುಕಾ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಹಾಗೂ ಸಮಾಜದ ಮುಖಂಡರು ಇದ್ದರು.

Advertisement
Tags :
Advertisement