Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ನವ ಕ್ರಾಂತಿ ರಕ್ಷಣಾ ವೇದಿಕೆ ಕಚೇರಿಯಲ್ಲಿ ಕನ್ನಡ ರಾಜ್ಯೋತ್ಸವ

05:43 PM Dec 09, 2024 IST | suddionenews
Advertisement

 

Advertisement

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್. 09 : ಕನ್ನಡ ರಾಜ್ಯೋತ್ಸವ ಕೇವಲ ನವೆಂಬರ್ ತಿಂಗಳಿಗಷ್ಟೆ ಸೀಮಿತವಾಗಿರಬಾರದು, ಪ್ರತಿಯೊಬ್ಬರ ದಿನನಿತ್ಯದ ಬದುಕಿನಲ್ಲಿ ಕನ್ನಡ ಬಳಕೆಯಾದಾಗ ಮಾತ್ರ ಕನ್ನಡ ರಾಜ್ಯೋತ್ಸವಕ್ಕೆ ನಿಜವಾದ ಗೌರವ ನೀಡಿದಂತಾಗುತ್ತದೆ ಎಂದು ನವ ಕ್ರಾಂತಿ ರಕ್ಷಣಾ ವೇದಿಕೆ ಸಂಸ್ಥಾಪಕ ರಾಜ್ಯಾಧ್ಯಕ್ಷ ಪ್ರದೀಪ್‍ಕುಮಾರ್ ತಿಳಿಸಿದರು.

Advertisement

ನವ ಕ್ರಾಂತಿ ರಕ್ಷಣಾ ವೇದಿಕೆ ಕಚೇರಿಯಲ್ಲಿ ಕನ್ನಡಾಂಭೆ ಹಾಗೂ ಸಂವಿದಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡುತ್ತ

ಕನ್ನಡ ನಾಡು, ನುಡಿ, ನೆಲ, ಜಲದ ಬಗ್ಗೆ ಎಲ್ಲರೂ ಅಭಿಮಾನ ಮೂಡಿಸಿಕೊಳ್ಳಬೇಕು. ಅದೇ ರೀತಿ ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್‍ರವರ ಆಶಯದಂತೆ ಪ್ರತಿಯೊಬ್ಬರು ಶಿಕ್ಷಣವಂತರಾಗಬೇಕೆಂದು ಹೇಳಿದರು.ನವ ಕ್ರಾಂತಿ ರಕ್ಷಣಾ ವೇದಿಕೆ ಗೌರವಾಧ್ಯಕ್ಷ ಮಹಾಂತೇಶ್, ಜಿಲ್ಲಾಧ್ಯಕ್ಷ ಮೋಹನ್, ಪ್ರಧಾನ ಕಾರ್ಯದರ್ಶಿ ವಿರೂಪಾಕ್ಷ, ಹನುಮಂತರಾಯ, ಬಾಗೋಡಿ ಸ್ವಾಮಿ
ನಗರಾಧ್ಯಕ್ಷ ಮಂಜುನಾಥ್ ಟಿ.ಎನ್. ಸತೀಶ್, ಶ್ರೀಧರ್, ಕಿರಣ್‍ಕುಮಾರ್, ವಿನಯ್‍ಕುಮಾರ್, ತಿಪ್ಪೇಶ್ ಹಾಗೂ ವೇದಿಕೆಯ ಪದಾಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Advertisement
Tags :
bengaluruchitradurgakannadaKannada rajyotsavaKannadaNewssuddionesuddionenewsಕಚೇರಿಕನ್ನಡಕನ್ನಡ ರಾಜ್ಯೋತ್ಸವಕನ್ನಡವಾರ್ತೆಕನ್ನಡಸುದ್ದಿಚಿತ್ರದುರ್ಗನವ ಕ್ರಾಂತಿ ರಕ್ಷಣಾ ವೇದಿಕೆಬೆಂಗಳೂರುಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article