Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಕಾಂತರಾಜ್ ವರದಿ ಸಂಪುಟದಲ್ಲಿ ಚರ್ಚಿಸಿ ಜಾರಿಗೆ ತರಲಿ : ಬಿ.ಟಿ ಜಗದೀಶ್

07:17 PM Dec 13, 2024 IST | suddionenews
Advertisement

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

Advertisement

ಸುದ್ದಿಒನ್, ಚಿತ್ರದುರ್ಗ, ಡಿ. 13 : ಚಿತ್ರದುರ್ಗದಲ್ಲಿ ನಡೆದ ಶೋಷಿತರ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಇನ್ನೂ ಆರು ತಿಂಗಳಲ್ಲಿ ಕಾಂತರಾಜ್ ವರದಿಯ ಅಂಗೀಕಾರ ಮಾಡುತ್ತೇನೆ ಎಂದು ಹೇಳಿದ್ದರು. ಆದರೆ ಇಲ್ಲಿವರೆಗೂ ಯಾವುದೇ ಅಂಗೀಕಾರ ಆಗಿಲ್ಲ. ಕೆಲವರು ಈ ವರದಿಯನ್ನು ಅವೈಜ್ಞಾನಿಕ ಅಂತ ಗುರುತರವಾದ ಆಪಾದನೆ ಮಾಡುತ್ತಿದ್ದಾರೆ. ಈ ವರದಿಯನ್ನ ಸಂಪುಟದಲ್ಲಿ ಮಂಡಿಸಿ ಚರ್ಚಿಸಿ ಸಾರ್ವಜನಿಕ ಆಹವಾಲಗಳನ್ನು ಸ್ವೀಕರಿಸಿ ಜಾರಿಗೆ ತರಬೇಕೆಂದು ಅಖಿಲ ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟದ ರಾಜ್ಯ ಸಂಚಾಲಕರಾದ ಬಿ.ಟಿ ಜಗದೀಶ್ ಸರ್ಕಾರವನ್ನು ಒತಾಯಿಸಿದ್ದಾರೆ.

ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಈ ವರದಿಯನ್ನು 167 ಕೋಟಿ ರೂ ವೆಚ್ಚದಲ್ಲಿ 63 ಸಾವಿರ ಸಿಬ್ಬಂದಿಗಳು ನಿರಂತರ ಮನೆ ಮನೆಗೆ ಹೋಗಿ ಸಾಮಾಜಿಕ ಆರ್ಥಿಕ ಸಮೀಕ್ಷೆ ನಡೆಸಿದ್ದಾರೆ. ಮುಖ್ಯಮಂತ್ರಿಗಳು ಮೈಸೂರಿನಲ್ಲಿ ಕೊಟ್ಟ ಮಾತಿನಂತೆ ಜಾರಿ ಮಾಡಬೇಕಿತ್ತು ಆದರೆ ಉಪಚುನಾವಣೆ ಬಂದ ಕಾರಣ ಅದು ಆಗಲಿಲ್ಲ. ಈಗಲಾದರೂ ಕಾಂತರಾಜ್ ವರದಿ ಜಾರಿಯಾಗಬೇಕು. ಸಾಮಾಜಿಕ ನ್ಯಾಯ ಸಿಗಬೇಕಾದರೆ ಸಿದ್ದರಾಮಯ್ಯನಂತಹ ಅವರಿಂದ ಮಾತ್ರ ಸಾಧ್ಯ.. ಈ ವರದಿಯಿಂದ 197 ಹಿಂದುಳಿದ ಜಾತಿಗಳಿಗೆ ನ್ಯಾಯ ಸಿಗುತ್ತದೆ ಎಂದಿದ್ದಾರೆ. 2016ರಲ್ಲಿ ರಾಜ್ಯ ಸರ್ಕಾರವು ಸುಮಾರು 165 ಕೋಟಿ ರೂಗಳನ್ನು ಖರ್ಚು ಮಾಡಿ ರಾಜ್ಯದ ಎಲ್ಲಾ ಜಾತಿಗಳ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳನ್ನು ಅಧ್ಯಯನ ನಡೆಸಿ ತಯಾರಿಸಲಾಗಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ವರದಿಯನ್ನು ಈಗಾಗಲೇ ಆಯೋಗವು ರಾಜ್ಯ ಸರ್ಕಾರಕ್ಕೆ ಸಲ್ಲಿಸಿದ್ದು, ದಮನಿತ ಸಮುದಾಯಗಳ ಬಗ್ಗೆ ಅಪಾರವಾದ ಕಾಳಜಿ ಮತ್ತು ಸಾಮಾಜಿಕ ನ್ಯಾಯದ ಪರ ಇರುವ ಮುಖ್ಯಮಂತ್ರಿಗಳು ವರದಿಯನ್ನು ಒಪ್ಪಿ ಬಿಡುಗಡೆ ಮಾಡಬೇಕು. ಕಾಂಗ್ರೆಸ್ ಪಕ್ಷ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಜಾತಿ ಜನಗಣತಿ ನಡೆಸಿ ರಾಜ್ಯದಲ್ಲಿ ಜಾರಿಗೊಳಿಸುತ್ತೇವೆಂದು ವಾಗ್ದಾನ ನೀಡಿತ್ತು ಎನ್ನುವುದನ್ನು ಮರೆಯಬಾರದು ಎಂದರು.

Advertisement

 

ರಾಜ್ಯದಲ್ಲಿ ಪ್ರಬಲ ಜಾತಿಗಳಿಂದ 2ಎ ಗೆ ಸೇರಿಸಬೇಕೆಂದು ಹೋರಾಟ ಮಾಡುತ್ತಿವೆ.. ಇದು ರಕ್ತ ಕ್ರಾಂತಿಗೆ, ಜಾತಿ-ಜಾತಿಗಳ ಮಧ್ಯೆ ಹೋರಾಟಕ್ಕೆ ಕಾರಣವಾಗಬಹುದು.2ಎ ಮೀಸಲಾತಿಯ ಹೋರಾಟಗಾರರಾದ ಶ್ರೀ ಜಯ ಮೃತ್ಯುಂಜಯ ಸ್ವಾಮೀಜಿಯವರು ಈ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಬಸವಣ್ಣರವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಣೆ ಮಾಡಿದಾಗ ಸನ್ಮಾನಿಸಿದ್ದರು.ಆದರೆ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡದೇ ಇರುವುದಕ್ಕೆ ಸಿದ್ದರಾಮಯ್ಯರವರು ಲಿಂಗಾಯಿತ ವಿರೋಧಿ ಎಂದು ಆಪಾದನೆ ಮಾಡುತ್ತಿದ್ದಾರೆ. ಆದರೆ ಪಂಚಮಸಾಲಿ ಲಿಂಗಾಯತ ಸಮುದಾಯಕ್ಕೆ 2ಎ ಅಡಿಯಲ್ಲಿ ಬರಲಿಕ್ಕೆ ನಾವು ಬಿಡುವುದಿಲ್ಲ... ಈ ಬಗ್ಗೆ ಒಕ್ಕೂಟ ಉಗ್ರವಾದ ಹೋರಾಟ ಮಾಡುತ್ತದೆ ಎಂದು ಎಚ್ಚರಿಸಿದ್ದಾರೆ.

ಈ ಚಳಿಗಾಲದ ಅಧಿವೇಶನವು ಮುಗಿಯುವದರೊಳಗೆ ಸಂಪುಟ ಸಭೆಯನ್ನು ನಡೆಸಿ ಸಮೀಕ್ಷಾ ವರದಿಯನ್ನು ಬಿಡುಗಡೆಗೋಳಿಸಲು ತಿರ್ಮಾನಿಸಬೇಕು. ರಾಜ್ಯದಲ್ಲಿ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಮತ್ತು ರಾಜಕೀಯವಾಗಿ ಪ್ರಬಲವಾಗಿರುವ ಸಮುದಾಯಗಳು ಇತ್ತಿಚಿನ ದಿನಗಳಲ್ಲಿ ಹಿಂದುಳಿದ ವರ್ಗಗಳ ಪ್ರವರ್ಗ-2ಎ ಮೀಸಲಾತಿ ಪಟ್ಟಿಗೆ ಸೇರಲು ರಾಜ್ಯ ಸಕಾರಕ್ಕೆ ಮನವಿಯನ್ನು ಸಲ್ಲಿಸುತ್ತಿದ್ದು, ಯಾವುದೇ ಕಾರಣಕ್ಕೂ ಮುಂದುವರೆದ ಜಾತಿಗಳನ್ನು ಹಿಂದುಳಿದ ವರ್ಗಗಳ ಪ್ರವರ್ಗ-2ಎ ಮೀಸಲಾತಿ ಪಟ್ಟಿಗೆ ಸೇರಿಸಬಾರದು. ಒಂದು ವೇಳೆ ಮುಂದುವರೆದ ಜಾತಿಗಳು ಹಿಂದುಳಿದ ವರ್ಗಗಳ ಪ್ರವರ್ಗ-2ಎ ಮೀಸಲಾತಿ ಪಟ್ಟಿಗೆ ಸೇರಿದ್ದೇ ಆದಲ್ಲಿ ಈಗಾಗಲೇ ಹಿಂದುಳಿದ ವರ್ಗಗಳ ಪ್ರವರ್ಗ-2ಎ ಮೀಸಲಾತಿ ಪಟ್ಟಿಯಲ್ಲಿರುವ ಸುಮಾರು 102 ಹಿಂದುಳಿದ, ಅತಿ ಹಿಂದುಳಿದ, ಅಲೆಮಾರಿ, ಅರೆ ಅಲೆಮಾರಿ ಸಮುದಾಯಗಳಿಗೆ ಸಂವಿಧಾನಬದ್ದ ಹಕ್ಕನ್ನು ಕಸಿದುಕೊಂಡಂತ್ತಾಗುತ್ತದೆ ಎಂದಿದ್ದಾರೆ.

ಶೋಷಿತ ಸಮುದಾಯಗಳ ಬಗ್ಗೆ ರಾಜ್ಯ ಸರ್ಕಾರವು ಯಾವ ನಿಲುವನ್ನು ಹೊಂದಿದೆ ಎಂಬುದರ ಬಗ್ಗೆ ಶೀಘ್ರವೇ ರಾಜ್ಯ ಸರ್ಕಾರವು ಸ್ಪಷ್ಟವಾಗಿ ತಿಳಿಸಬೇಕು ಇಲ್ಲವಾದಲ್ಲಿ ದಿನಾಂಕ:18.12.2024 ರಂದು ಬೆಳಗಾವಿ ಚಲೋ ಮತ್ತು ವಿಧಾನಸೌಧ ಮುಂಭಾಗದಲ್ಲಿ ಕರ್ನಾಟಕ ಹಿಂದುಳಿದ ಜಾತಿಗಳ ಒಕ್ಕೂಟ ಮತ್ತು ಶೋಷಿತ ಸಮುದಾಯಗಳ ಮಹಾ ಒಕ್ಕೂಟದ ವತಿಯಿಂದ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗುವುದು ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಗೋಷ್ಟಿಯಲ್ಲಿ ಅಖಿಲ ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟದ ರಾಜ್ಯ ಪ್ರಧಾನ ಕಾರ್ಯದರ್ಶಿ ಎಣ್ಣೆಗೆರೆ ಆರ್.ವೆಂಕಟರಾಮಯ್ಯ, ಅಧ್ಯಕ್ಷರಾದ ಸಿ.ಟಿ.ಕೃಷ್ಣಮೂರ್ತಿ, ಪ್ರಧಾನ ಕಾರ್ಯದರ್ಶಿ ಹೆಚ್.ಮಂಜಪ್ಪ, ಸಂಚಾಲಕರಾದ ಡಿ.ದುರುಗೇಶ್, ಸಾಧಿಕ್‌ವುಲ್ಲಾ ಭಾಗವಹಿಸಿದ್ದರು.

Advertisement
Tags :
bengaluruBT JagdishcabinetchitradurgaKantaraj reportsuddionesuddione newsಕಾಂತರಾಜ್ ವರದಿಚಿತ್ರದುರ್ಗಬಿ.ಟಿ.ಜಗದೀಶ್ಬೆಂಗಳೂರುಸಂಪುಟಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article