For the best experience, open
https://m.suddione.com
on your mobile browser.
Advertisement

ಕರ್ನಾಟಕ ಸಂಭ್ರಮ 50 | ಜುಲೈ 09 ರಿಂದ ಜಿಲ್ಲೆಯಾದ್ಯಂತ ಕರ್ನಾಟಕ ಜ್ಯೋತಿ ರಥಯಾತ್ರೆ ಸಂಚಾರ

04:01 PM Jun 25, 2024 IST | suddionenews
ಕರ್ನಾಟಕ ಸಂಭ್ರಮ 50   ಜುಲೈ 09 ರಿಂದ ಜಿಲ್ಲೆಯಾದ್ಯಂತ ಕರ್ನಾಟಕ ಜ್ಯೋತಿ ರಥಯಾತ್ರೆ ಸಂಚಾರ
Advertisement

ಚಿತ್ರದುರ್ಗ. ಜೂನ್.25: ಕರ್ನಾಟಕ ಸಂಭ್ರಮ-50ರ ಅಂಗವಾಗಿ ಕರ್ನಾಟಕ ಜ್ಯೋತಿ ರಥಯಾತ್ರೆಯು ರಾಜ್ಯಾದ್ಯಂತ ಸಂಚರಿಸುತ್ತಿದ್ದು, ಜುಲೈ 09ರಂದು ಚಿತ್ರದುರ್ಗ ಜಿಲ್ಲೆಗೆ ಆಗಮಿಸಲಿದೆ.  ಜುಲೈ 9 ರಿಂದ 14 ರವರೆಗೆ ಜಿಲ್ಲೆಯಾದ್ಯಂತ “ಕರ್ನಾಟಕ ಜ್ಯೋತಿ ರಥಯಾತ್ರೆ” ನಡೆಯಲಿದೆ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದರು.

Advertisement

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಕರ್ನಾಟಕ ಸಂಭ್ರಮ-50ರ ಅಂಗವಾಗಿ ಜ್ಯೋತಿ ರಥಯಾತ್ರೆಯನ್ನು ಗೌರವದಿಂದ ಬರ ಮಾಡಿಕೊಳ್ಳಲು ಹಮ್ಮಿಕೊಂಡಿದ್ದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯ ಆರು ತಾಲ್ಲೂಕುಗಳನ್ನು ಒಳಗೊಂಡಂತೆ ಕರ್ನಾಟಕ ಜ್ಯೋತಿ ರಥಯಾತ್ರೆಯು ಜಿಲ್ಲೆಯಾದ್ಯಂತ ಜುಲೈ 09 ರಿಂದ 14 ರವರೆಗೆ ಸಂಚಾರ ನಡೆಯಲಿದ್ದು, ಸಂಬಂಧಪಟ್ಟ ಆಯಾ ತಾಲ್ಲೂಕಿನ ತಹಶೀಲ್ದಾರ್‍ಗಳು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರು ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕರ ಸಮನ್ವಯತೆಯೊಂದಿಗೆ ಕರ್ನಾಟಕ ಜ್ಯೋತಿ ರಥಯಾತ್ರೆಗೆ ಸಂಭ್ರಮದ ಸ್ವಾಗತ ಸಂಚಾರಕ್ಕೆ ಅಗತ್ಯ ಕ್ರಮವಹಿಸಬೇಕು ಎಂದು ಸೂಚಿಸಿದರು.

Advertisement

ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ರವಿಚಂದ್ರ ಮಾತನಾಡಿ, ಸುವರ್ಣ ಸಂಭ್ರಮ-50ರ ಅಂಗವಾಗಿ ಕರ್ನಾಟಕ ಜ್ಯೋತಿ ರಥಯಾತ್ರೆಯು ಚಿತ್ರದುರ್ಗ ಜಿಲ್ಲೆಗೆ ಆಗಮಿಸಲಿದ್ದು, ರಥಯಾತ್ರೆಯನ್ನು ಅದ್ದೂರಿಯಾಗಿ ಸ್ವಾಗತಿಸಲು ಅಗತ್ಯ ಸಿದ್ದತೆ ಮಾಡಿಕೊಳ್ಳಬೇಕಿದೆ. ದಾವಣಗೆರೆ ಜಿಲ್ಲೆ ಚನ್ನಗಿರಿ ಮೂಲಕ ಜುಲೈ 9ರಂದು ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲ್ಲೂಕಿಗೆ ಆಗಮಿಸಲಿದ್ದು, ರಥಯಾತ್ರೆಯನ್ನು ಸಂಭ್ರಮದಿಂದ ಬರ ಮಾಡಿಕೊಳ್ಳಲಾಗುವುದು.

ಜುಲೈ 10ರಂದು ಚಿತ್ರದುರ್ಗ, ಜುಲೈ 11ರಂದು ಮೊಳಕಾಲ್ಮುರು ವಿಧಾನಸಭಾ ಕ್ಷೇತ್ರದ ನಾಯಕನಹಟ್ಟಿ, ಜುಲೈ 12ರಂದು ಚಳ್ಳಕೆರೆ, ಜುಲೈ 13ರಂದು ಹಿರಿಯೂರು, ಜುಲೈ 14ರಂದು ಹೊಸದುರ್ಗ ತಾಲ್ಲೂಕಿನಲ್ಲಿ ರಥಯಾತ್ರೆ ಸಂಚರಿಸಿ ನಂತರ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಗೆ ತೆರಳಲಿದೆ ಎಂದು ಮಾಹಿತಿ ನೀಡಿದರು.

ಕರ್ನಾಟಕ ಜ್ಯೋತಿ ಯಾತ್ರೆ ಸಂದರ್ಭದಲ್ಲಿ ಎರಡು ಕಲಾ ತಂಡಗಳು ಮತ್ತು ಯಾತ್ರೆಗೆ ಸಂಬಂಧಿಸಿದಂತೆ ನಗರದಲ್ಲಿ, ತಾಲ್ಲೂಕುವಾರು ರೂಟ್ ಮ್ಯಾಪ್ ಸಿದ್ಧಪಡಿಸಿ ವಿವಿಧ ಸ್ಥಳಗಳ ಮೂಲಕ ಜ್ಯೋತಿಯಾತ್ರೆ ಹೋಗುವ ಪಟ್ಟಿಯನ್ನು ಸಿದ್ದಪಡಿಸಿ ಮಾಹಿತಿ ನೀಡಲಾಗುವುದು ಎಂದು ತಿಳಿಸಿದ ಅವರು, ಜಿಲ್ಲೆಯ ಪ್ರತಿ ತಾಲ್ಲೂಕಿನಲ್ಲಿಯೂ ಬೆಳಿಗ್ಗೆ 9 ಗಂಟೆಗೆ ಜ್ಯೋತಿ ರಥಯಾತ್ರೆಯು ಪ್ರಾರಂಭವಾಗಲಿದ್ದು, ಒಂದು ದಿನ ಸಂಪೂರ್ಣ ಆಯಾ ತಾಲ್ಲೂಕಿನಲ್ಲಿಯೇ ಸಂಚರಿಸಲಿದೆ.

ರಥಯಾತ್ರೆಯು ವಿವಿಧ ಸಾಂಸ್ಕøತಿಕ ಕಲಾತಂಡಗಳನ್ನು ಒಳಗೊಂಡು, ವೈಭವಯುತವಾಗಿರಲಿದೆ. ಸಂಚಾರದ ಸಂದರ್ಭದಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿಗಳು, ಕನ್ನಡಪರ ಸಂಘಟನೆಗಳು, ಸಾರ್ವಜನಿಕರು, ಸಾಹಿತಿಗಳು, ಜನಪ್ರತಿನಿಧಿಗಳು ಯಾತ್ರೆಗೆ ಅದ್ಧೂರಿ ಸ್ವಾಗತ ಕೋರುವಂತಾಗಬೇಕು.  ಇದೇ ವೇಳೆ ಕನ್ನಡ ಧ್ವಜ ವಿತರಣೆಗೆ ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕೆ.ಎಂ.ಶಿವಸ್ವಾಮಿ, ಶಿಕ್ಷಣ ಇಲಾಖೆಯ ಚಿದಾನಂದಸ್ವಾಮಿ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.

Tags :
Advertisement