Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ವಿರುದ್ದ ಕರ್ನಾಟಕ ರಾಜ್ಯ ರೈತ ಸಂಘ ಪ್ರತಿಭಟನೆ

05:35 PM Jan 29, 2024 IST | suddionenews
Advertisement

 

Advertisement

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಜನವರಿ.29 : ಬೆಳೆ ಪರಿಹಾರ ಮತ್ತು ಬೆಳೆ ವಿಮೆ ಪಾವತಿಯಾಗದಿರುವುದನ್ನು ಖಂಡಿಸಿ ಕರ್ನಾಟಕ ರಾಜ್ಯ ರೈತ ಸಂಘ ನಗರದಲ್ಲಿ ಸೋಮವಾರ ಭಿಕ್ಷಾಟನೆ ನಡೆಸಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟಿಸಿ ನಡೆಸಿ ಮನವಿ ಸಲ್ಲಿಸಿತು.

Advertisement

ಕಳೆದ ವರ್ಷ ಮುಂಗಾರು-ಹಿಂಗಾರು ಮಳೆ ಬಾರದ ಕಾರಣ ರೈತರು ಬಿತ್ತಿದ ಬೆಳೆಗಳು ಸಂಪೂರ್ಣವಾಗಿ ಒಣಗಿರುವುದರಿಂದ ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಸರ್ಕಾರ ಘೋಷಿಸಿದ್ದರೂ ಇದುವರೆವಿಗೂ ರೈತರಿಗೆ ಎಂ.ಡಿ.ಆರ್.ಎಫ್ ಹಾಗೂ ಬೆಳೆ ವಿಮೆ ಹಣ ಖಾತೆಗಳಿಗೆ ಜಮೆ ಆಗಿರುವುದಿಲ್ಲ. ಮಧ್ಯಂತರ ಬೆಳೆ ವಿಮೆ ಕೂಡ ರೈತರ ಕೈಸೇರಿಲ್ಲ ಎಂದು ಪ್ರತಿಭಟನಾ ನಿರತ ರೈತರು ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ವಿರುದ್ದ ಧಿಕ್ಕಾರಗಳನ್ನು ಕೂಗಿದರು.

ಸಣ್ಣ ರೈತರ ಖಾತೆಗಳಿಗೆ ಪ್ರತಿ ತಿಂಗಳು ಎರಡು ಸಾವಿರ ರೂ.ಗಳನ್ನು ಜಮ ಮಾಡಿ ಅವಮಾನ ಮಾಡುವ ಬದಲು ಹೆಕ್ಟೇರ್‍ಗೆ 25 ಸಾವಿರ ರೂ.ಗಳನ್ನು ನೀಡಬೇಕು. ಇದಲ್ಲದೆ ಕೂಡಲೆ ಬೆಳೆ ವಿಮೆ ಪಾವತಿಸಿ ಸಂಕಷ್ಟದಲ್ಲಿರುವ ರೈತರನ್ನು ಪಾರು ಮಾಡುವಂತೆ ಒತ್ತಾಯಿಸಿದ ಪ್ರತಿಭಟನಾನಿರತ ರೈತರು ದನ-ಕರುಗಳಿಗೆ ಗೋಶಾಲೆಯನ್ನು ತೆರೆದು ಮೇವು ಮತ್ತು ನೀರು ಪೂರೈಸುವಂತೆ ಆಗ್ರಹಿಸಿದರು.

ರೈತರು ಸ್ವಂತ ಖರ್ಚಿನಲ್ಲಿ ಟಿಸಿ ಮತ್ತು ಕಂಬಗಳನ್ನು ಅಳವಡಿಸಿಕೊಳ್ಳುವಂತೆ ಕಳೆದ ಸೆಪ್ಟಂಬರ್‍ನಲ್ಲಿ ಕಾನೂನು ಜಾರಿಗೆ ತಂದಿದ್ದನ್ನು ಸರ್ಕಾರ ಹಿಂದಕ್ಕೆ ಪಡೆದು ಮೊದಲಿನಂತೆ ಅಕ್ರಮ-ಸಕ್ರಮದಡಿ ವಿದ್ಯುತ್ ಸಂಪರ್ಕ ಕಲ್ಪಿಸಿ ಎಲ್ಲಾ ಬ್ಯಾಂಕಿನಲ್ಲಿರುವ ಸಾಲ ಮನ್ನಾ ಮಾಡಿ ರೈತರಿ ನೆರವಿಗೆ ಧಾವಿಸುವಂತೆ ರೈತರು ಆಗ್ರಹಿಸಿದರು.
ಕರ್ನಾಟಕ ರಾಜ್ಯ ರೈತ ಸಂಘದ ತಾಲ್ಲೂಕು ಅಧ್ಯಕ್ಷ ಧನಂಜಯ, ಸಿ.ನಾಗರಾಜ ಮುದ್ದಾಪುರ, ಎಸ್.ಕೆ.ಕುಮಾರಸ್ವಾಮಿ, ಬಿ.ಕೆಂಚಪ್ಪ, ಬಿ.ಪಿ.ತಿಪ್ಪೇಸ್ವಾಮಿ, ಎಂ.ಎಸ್.ಪ್ರಭು, ಚಿಕ್ಕಪ್ಪನಹಳ್ಳಿ ರುದ್ರಸ್ವಾಮಿ, ಸಿದ್ದಪ್ಪ ಜಾನುಕೊಂಡ, ವೈ.ಎನ್.ಅಶೋಕ, ಪಾಪಯ್ಯ, ರಂಗೇಗೌಡ ಇನ್ನು ಅನೇಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Advertisement
Tags :
Central governmentchitradurgaKarnataka State Farmers' Unionprotest againststate governmentಕರ್ನಾಟಕ ರಾಜ್ಯ ರೈತ ಸಂಘಕೇಂದ್ರ ಸರ್ಕಾರಚಿತ್ರದುರ್ಗಪ್ರತಿಭಟನೆರಾಜ್ಯ ಸರ್ಕಾರವಿರುದ್ದ
Advertisement
Next Article