For the best experience, open
https://m.suddione.com
on your mobile browser.
Advertisement

ಹಂಪಿ ಉತ್ಸವದಂತೆ ದುರ್ಗೋತ್ಸವ ಆಚರಿಸುವಂತೆ ಕರುನಾಡ ವಿಜಯಸೇನೆ ಒತ್ತಾಯ

07:40 PM Sep 27, 2024 IST | suddionenews
ಹಂಪಿ ಉತ್ಸವದಂತೆ ದುರ್ಗೋತ್ಸವ ಆಚರಿಸುವಂತೆ ಕರುನಾಡ ವಿಜಯಸೇನೆ ಒತ್ತಾಯ
Advertisement

Advertisement
Advertisement

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 27 : ಐತಿಹಾಸಿಕ ಏಳು ಸುತ್ತಿನ ಕೋಟೆಯಿರುವ ಚಿತ್ರದುರ್ಗದಲ್ಲಿ ದುರ್ಗೋತ್ಸವ ಆಚರಿಸುವಂತೆ ಕರುನಾಡ ವಿಜಯಸೇನೆ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಶುಕ್ರವಾರ ಪ್ರತಿಭಟನೆ ನಡೆಸಿ ಅಪರ ಜಿಲ್ಲಾಧಿಕಾರಿ ಮೂಲಕ ರಾಜ್ಯದ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು.

Advertisement

ರಾಜಾವೀರ ಮದಕರಿನಾಯಕ, ವೀರವನಿತೆ ಒನಕೆ ಓಬವ್ವಳ ನಾಡು ಚಿತ್ರದುರ್ಗದಲ್ಲಿ ದುರ್ಗೋತ್ಸವ ಆಚರಿಸಿ ವರ್ಷಗಳೆ ಉರುಳಿದೆ. ಮೈಸೂರು ದಸರಾ, ಹಂಪಿ ಉತ್ಸವ, ಕೊಡಗು ಉತ್ಸವ, ಕಿತ್ತೂರು ಉತ್ಸವ ಆಚರಣೆಗೆ ಕೋಟಿಗಟ್ಟಲೆ ಹಣ ವ್ಯಯಿಸುತ್ತಿರುವ ಸರ್ಕಾರ ಚಿತ್ರದುರ್ಗ ಉತ್ಸವ ಏಕೆ ಆಚರಿಸುತ್ತಿಲ್ಲ. ಅನೇಕ ಬಾರಿ ಪ್ರತಿಭಟನೆ ನಡೆಸಿ ಒತ್ತಾಯಿಸಿದ್ದೇವೆ. ರಾಜಕಾರಣಿಗಳಿಗೆ ಆಸಕ್ತಿ ಇಲ್ಲದಿರುವುದೇ ದುರ್ಗೋತ್ಸವ ನಡೆಯದಿರಲು ಕಾರಣ ಎಂದು ಪ್ರತಿಭಟನಾನಿರತರು ಆಪಾದಿಸಿದರು.

Advertisement

ವಿಶ್ವಹಿಂದೂ ಪರಿಷತ್, ಭಜರಂಗದಳದವರು ಕಳೆದ ಹದಿನೆಂಟು ವರ್ಷಗಳಿಂದಲೂ ನಿರಂತರವಾಗಿ ಹಿಂದೂ ಮಹಾ ಗಣಪತಿ ಉತ್ಸವವನ್ನು ಆಚರಿಸಿಕೊಂಡು ಬರುತ್ತಿದ್ದಾರೆ. ದುರ್ಗೋತ್ಸವ ಆಚರಣೆಗೆ ಏಕೆ ಕರ್ನಾಟಕ ಸರ್ಕಾರ ಮನಸ್ಸು ಮಾಡುತ್ತಿಲ್ಲ. ಡಿಸೆಂಬರ್ ಒಳಗೆ ದುರ್ಗೋತ್ಸವ ಆಚರಿಸುವಂತೆ ಪ್ರತಿಭಟನೆಯ ನೇತೃತ್ವ ವಹಿಸಿದ್ದ ಕರುನಾಡ ವಿಜಯಸೇನೆ ಜಿಲ್ಲಾಧ್ಯಕ್ಷ ಕೆ.ಟಿ.ಶಿವಕುಮಾರ್ ಒತ್ತಾಯಿಸಿದರು.

ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ವೀಣಗೌರಣ್ಣ, ಉಪಾಧ್ಯಕ್ಷೆ ರತ್ನಮ್ಮ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗೋಪಿನಾಥ್ ಎಸ್. ಕಾರ್ಯದರ್ಶಿ ಜಗದೀಶ್ ಸಿ. ಉಪಾಧ್ಯಕ್ಷ ಮುಜಾಹಿದ್, ವಿದ್ಯಾರ್ಥಿ ಘಟಕದ ಅಖಿಲೇಶ್, ನಗರಾಧ್ಯಕ್ಷ ಅವಿನಾಶ್, ಯರ್ರಿಸ್ವಾಮಿ, ನಾಗರಾಜ್ ಮುತ್ತು, ಕಮಲ, ಸುರೇಶ್, ಹರೀಶ್‍ಕುಮಾರ್ ಇವರುಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Tags :
Advertisement