Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ನಾಳೆ ಕೆ.ಎಂ.ವೀರೇಶ್‍ ಅವರಿಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಿಂದ ಗೌರವ ಡಾಕ್ಟರೇಟ್ ಪ್ರದಾನ

05:36 PM Mar 02, 2024 IST | suddionenews
Advertisement

 

Advertisement

ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 02  : ನಗರದ ಹೊರವಲಯದ ಬಾಪೂಜಿ ಶಿಕ್ಷಣ ಮಹಾವಿದ್ಯಾಲಯದ ಕಾರ್ಯದರ್ಶಿ  ಕೆ.ಎಂ.ವೀರೇಶ್‍ರವರಿಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಿಂದ ನಾಳೆ ಗೌರವ ಡಾಕ್ಟರೇಟ್ ಪದವಿಯನ್ನು ಪ್ರದಾನ ಮಾಡಲಿದ್ದಾರೆ.

ನಾಳೆ (ಮಾರ್ಚ್.03)  ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ 19ನೇ ವಾರ್ಷಿಕ ಘಟಿಕೋತ್ಸವ
ಮಧ್ಯಾಹ್ನ 12.00 ಗಂಟೆಗೆ ಮೈಸೂರಿನ KSOU ಕ್ಯಾಂಪಸ್‌ನಲ್ಲಿ ನಡೆಯಲಿರುವ ಘಟಿಕೋತ್ಸವ ಸಭಾಂಗಣದಲ್ಲಿ ನಡೆಯಲಿದೆ.

Advertisement

ಚಿತ್ರದುರ್ಗ ಶ್ರೀ ಮುರುಘಾಮಠದ ಎಸ್.ಜೆ.ಎಂ. ವಿದ್ಯಾಪೀಠದ ಆಡಳಿತಾಧಿಕಾರಿಯಾಗಿ,  ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷರಾಗಿ, 75 ನೇ ಅ.ಭಾ.ಕ.ಸಾ.ಸಮ್ಮೇಳನ ಕಾರ್ಯದರ್ಶಿಯಾಗಿ, ಬಾಪೂಜಿ ಸಮೂಹ ಸಂಸ್ಥೆಗಳ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದು,  ಶರಣ ಸಾಹಿತ್ಯ ಪರಿಷತ್ತಿನ ಚಿತ್ರದುರ್ಗ ಜಿಲ್ಲಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದು, ಶಿಕ್ಷಣ ಕ್ಷೇತ್ರ, ಸಮಾಜಸೇವೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಅವರು ಸಲ್ಲಿಸಿದ ಗಣನೀಯ ಸೇವೆಯನ್ನು ಗುರುತಿಸಿ ಈ ಗೌರವವನ್ನು ನೀಡಲಾಗುತ್ತಿದೆ.

ಸಂಶೋಧಕ ಡಾ.ಬಿ.ರಾಜಶೇಖರಪ್ಪನವರು ಕೆ.ಎಂ.ವೀರೇಶ್ ಅವರ ಸೇವೆಯನ್ನು ಗುರುತಿಸಿ ಗೌರವ ಡಾಕ್ಟರೇಟ್ ನೀಡಿರುವುದು ಅರ್ಥಪೂರ್ಣವಾಗಿದೆ ಎಂದು ಶ್ಲಾಘಿಸಿದರು. ಮತ್ತು ಮೈಸೂರು ಪೇಟ, ಶಾಲು, ಮಣಿ ಹಾರ ಹಾಕಿ ಬಾಪೂಜಿ ವಿದ್ಯಾಸಂಸ್ಥೆಯ ಆವರಣದಲ್ಲಿ ಶನಿವಾರ ಅಭಿನಂದಿಸಿ ಶುಭ ಹಾರೈಸಿದರು.

ಶ್ರೀಮತಿ ಯಶೋಧ ಡಾ.ಬಿ.ರಾಜಶೇಖರಪ್ಪ, ಬಾಪೂಜಿ ಪಬ್ಲಿಕ್ ಸ್ಕೂಲ್‍ನ ನಿರ್ದೇಶಕ ಕೆ.ಎಂ.ಚೇತನ್, ರುದ್ರಪ್ಪ ಹಾಗೂ ಶಿಕ್ಷಕ ಬಳಗದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Advertisement
Tags :
bengaluruchitradurgahonorary doctorateKM Veereshsuddionesuddione newsUniversity of Mysoreಕೆ.ಎಂ.ವೀರೇಶ್ಗೌರವ ಡಾಕ್ಟರೇಟ್ಚಿತ್ರದುರ್ಗಬೆಂಗಳೂರುಮೈಸೂರು ವಿಶ್ವವಿದ್ಯಾನಿಲಯಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article