For the best experience, open
https://m.suddione.com
on your mobile browser.
Advertisement

ಕೊಲ್ಕತ್ತಾ ವೈದ್ಯಕೀಯ ವಿದ್ಯಾರ್ಥಿನಿ ಪ್ರಕರಣ : ಆರೋಪಿಗಳಿಗೆ ಗಲ್ಲು ಶಿಕ್ಷೆಗೆ ಒತ್ತಾಯಿಸಿ ಕರವೇ ಕನ್ನಡ ಸೇನೆ ಪ್ರತಿಭಟನೆ

06:53 PM Sep 05, 2024 IST | suddionenews
ಕೊಲ್ಕತ್ತಾ ವೈದ್ಯಕೀಯ ವಿದ್ಯಾರ್ಥಿನಿ ಪ್ರಕರಣ   ಆರೋಪಿಗಳಿಗೆ ಗಲ್ಲು ಶಿಕ್ಷೆಗೆ ಒತ್ತಾಯಿಸಿ ಕರವೇ ಕನ್ನಡ ಸೇನೆ ಪ್ರತಿಭಟನೆ
Advertisement

Advertisement
Advertisement

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 05 : ಕೊಲ್ಕತ್ತಾದಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿ ಕೊಲೆಗೈದಿರುವವರನ್ನು ಕೂಡಲೆ ಬಂಧಿಸಿ ಗಲ್ಲು ಶಿಕ್ಷೆಗೆ ಗುರಿಪಡಿಸುವಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಕನ್ನಡ ಸೇನೆ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಗುರುವಾರ ಪ್ರತಿಭಟನೆ ನಡೆಸಿ ಅಪರ ಜಿಲ್ಲಾಧಿಕಾರಿ ಮೂಲಕ ಪ್ರಧಾನಿಗೆ ಮನವಿ ಸಲ್ಲಿಸಲಾಯಿತು.

Advertisement

ನೀಲಕಂಠೇಶ್ವರಸ್ವಾಮಿ ದೇವಸ್ಥಾನದಿಂದ ಮೆರವಣಿಗೆ ಮೂಲಕ ಆಗಮಿಸಿದ ಪ್ರತಿಭಟನಾಕಾರರು ಕೆಲವು ಕಾಲ ಒನಕೆ ಓಬವ್ವ ವೃತ್ತದಲ್ಲಿ ಕುಳಿತು ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ದ ಧಿಕ್ಕಾರಗಳನ್ನು ಕೂಗಿದರು.

Advertisement

ಅಪ್ರಾಪ್ತ ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರ, ಕೊಲೆ, ದೌರ್ಜನ್ಯಗಳು ಜಾಸ್ತಿಯಾಗುತ್ತಿದ್ದು, ಹೆಣ್ಣು ಮಕ್ಕಳಿಗೆ ರಕ್ಷಣೆ ಇಲ್ಲದಂತಾಗಿದೆ. ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಇನ್ನು ಮುಂದೆ ಇಂತಹ ಪ್ರಕರಣಗಳು ನಡೆಯದಂತೆ ಕಟ್ಟೆಚ್ಚರ ವಹಿಸುವಂತೆ ಪ್ರತಿಭಟನಾನಿರತರು ಆಗ್ರಹಿಸಿದರು.

ಕರ್ನಾಟಕ ರಕ್ಷಣಾ ವೇದಿಕೆ ಕನ್ನಡ ಸೇನೆ ರಾಜ್ಯಾಧ್ಯಕ್ಷ ಎನ್.ಅರುಣ್‍ಕುಮಾರ್, ಸಂಘಟನಾ ಕಾರ್ಯದರ್ಶಿ ಅಶೋಕ್ ಕನ್ನಡಿಗ, ರೈತ ಘಟಕದ ರಾಜ್ಯಾಧ್ಯಕ್ಷ ಸ್ವಾಮಿ

ಮಹಿಳಾ ಘಟಕದ ರಾಜ್ಯ ಉಪಾಧ್ಯಕ್ಷೆ ಶ್ರೀಮತಿ ಲಕ್ಷ್ಮಿ, ಜಿಲ್ಲಾಧ್ಯಕ್ಷ ರವಿಕುಮಾರ್‍ನಾಯ್ಕ, ಪ್ರಧಾನ ಕಾರ್ಯದರ್ಶಿ ಓಬಳೇಶ್ ಯಾದವ್, ಶ್ರೀಮತಿ ಸುವರ್ಣ,

ಬಸಣ್ಣ ಡಿಶ್, ಓಬಣ್ಣ, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಶ್ರೀಮತಿ ರೇಣುಕಾ ಇನ್ನು ಅನೇಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Tags :
Advertisement