Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಈ ಚುನಾವಣೆಯಲ್ಲಿ ಲಂಬಾಣಿ ಸಮುದಾಯ ರಾಜ್ಯಾದ್ಯಂತ ಬಿಜೆಪಿಗೆ ಬೆಂಬಲಿಸಿ : ಚಿತ್ರದುರ್ಗದಲ್ಲಿ ನಡೆದ ಸಮಾವೇಶದಲ್ಲಿ ನಿರ್ಣಯ

05:55 PM Apr 22, 2024 IST | suddionenews
Advertisement

 

Advertisement

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್, ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 22 : ಲಂಬಾಣಿ ಜನಾಂಗಕ್ಕೆ ರಾಜಕೀಯ ಪ್ರಾತಿನಿಧ್ಯ ನೀಡದೆ ವಂಚಿಸಿಕೊಂಡು ಬರುತ್ತಿರುವ ಕಾಂಗ್ರೆಸ್‍ಗೆ ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಠಕ್ಕರ್ ಕೊಟ್ಟು ಬಿಜೆಪಿಯನ್ನು ಬೆಂಬಲಿಸಲು ವಿನಾಯಕ ಕಲ್ಯಾಣ ಮಂಟಪದಲ್ಲಿ ಸೋಮವಾರ ನಡೆದ ಶಕ್ತಿ ಪ್ರದರ್ಶನ ಸಮಾವೇಶದಲ್ಲಿ ನಿರ್ಧರಿಸಲಾಯಿತು.

Advertisement

ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ ಶಕ್ತಿ ಪ್ರದರ್ಶನ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡುತ್ತ ಬಿ.ಎಸ್.ಯಡಿಯೂರಪ್ಪನವರು ರಾಜ್ಯದ ಮುಖ್ಯಮಂತ್ರಿಯಾದಾಗ ತಾಂಡ ನಿಗಮಗಳನ್ನು ರಚಿಸಿ ಬಂಜಾರರಿಗೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿದರು. ಕಾಂಗ್ರೆಸ್ ಸರ್ಕಾರ ನಮ್ಮ ಜನಾಂಗದವರನ್ನು ಕೆ.ಪಿ.ಎಸ್ಸಿ. ಸದಸ್ಯರನ್ನಾಗಿಯೂ ಮಾಡಲಿಲ್ಲ. ಲೋಕಸಭೆಯಲ್ಲಿ ಸ್ಪರ್ಧಿಸಲು ಟಿಕೆಟ್ ಕೂಡ ನೀಡದೆ ಮೂಲೆಗುಂಪು ಮಾಡಿದೆ. ಅದೆ ಬಿಜೆಪಿ. ಸರ್ಕಾರ ಅಧಿಕಾರಕ್ಕೆ ಬಂದಾಗ ಎಂ.ಪಿ.ಚುನಾವಣೆಗೆ ಟಿಕೇಟ್ ನೀಡಿ ಸಂಸತ್‍ಗೂ ಕಳಿಸಿಕೊಟ್ಟಿತು.

ಹಾಗಾಗಿ ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ರಾಜ್ಯಾದ್ಯಂತ ಬಿಜೆಪಿ.ಗೆ ಬೆಂಬಲಿಸಿ ಚಿತ್ರದುರ್ಗ ಕ್ಷೇತ್ರದಿಂದ ಸ್ಪರ್ಧಿಸಿರುವ ಗೋವಿಂದ ಕಾರಜೋಳರನ್ನು ಬಹುಮತಗಳಿಂದ ಗೆಲ್ಲಿಸಿಕೊಳ್ಳಲಾಗುವುದು ಎಂದು ಹೇಳಿದರು.


ಜಿಲ್ಲಾ ಬಂಜಾರ ಸಮಾಜದ ಅಧ್ಯಕ್ಷ ಎಂ.ಸತೀಶ್‍ಕುಮಾರ್ ಮಾತನಾಡುತ್ತ ದೊಡ್ಡ ಜನಾಂಗ ಬಂಜಾರರನ್ನು ಕಾಂಗ್ರೆಸ್ ಸರ್ಕಾರ ಹಿಂದಿನಿಂದಲೂ ನಿರ್ಲಕ್ಷಿಸಿಕೊಂಡು ಬರುತ್ತಿದೆ. ಏಕೈಕ ಶಾಸಕ ರುದ್ರಪ್ಪ ಲಮಾಣಿಗೆ ಸಚಿವ ಸ್ಥಾನ ಕೊಟ್ಟಿಲ್ಲ. ಲೋಕಸಭೆ ಚುನಾವಣೆಯಲ್ಲಿಯೂ ಬಂಜಾರ ಜನಾಂಗಕ್ಕೆ ಟಿಕೇಟ್ ನೀಡದೆ ವಂಚಿಸಿದೆ. ಹಾಗಾಗಿ ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಚಿತ್ರದುರ್ಗ ಕ್ಷೇತ್ರದಿಂದ ಸ್ಪರ್ಧಿಸಿರುವ ಬಿಜೆಪಿ.ಯ ಗೋವಿಂದ ಕಾರಜೋಳರನ್ನು ಬಹುಮತಗಳಿಂದ ಗೆಲ್ಲಿಸಿಕೊಳ್ಳುವುದಾಗಿ ತಿಳಿಸಿದರು.

2023 ರಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಹೊಳಲ್ಕೆರೆ ಕ್ಷೇತ್ರದಿಂದ ಸ್ಪರ್ಧಿಸಿ ಪರಾಭವಗೊಂಡ ಡಾ.ಜಯಸಿಂಹ ಲೋಕನಾಥ್ ಮಾತನಾಡಿ ದೇಶ ಸುಭದ್ರವಾಗಿರಬೇಕಾದರೆ ನರೇಂದ್ರಮೋದಿ ಮೂರನೆ ಬಾರಿಗೆ ಪ್ರಧಾನಿಯಾಗಬೇಕೆಂಬುದು ಎಲ್ಲರ ಆಸೆ. ಅದಕ್ಕಾಗಿ ಈ ಬಾರಿಯ ಚುನಾವಣೆಯಲ್ಲಿ ರಾಜ್ಯಾದ್ಯಂತ ಬಂಜಾರ ಸಮಾಜ ಬಿಜೆಪಿ.ಗೆ ಬೆಂಬಲಿಸುವ ತೀರ್ಮಾನ ತೆಗೆದುಕೊಂಡಿದ್ದು, ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಗೋವಿಂದ ಕಾರಜೋಳರವರನ್ನು ಬೆಂಬಲಿಸಿ ನರೇಂದ್ರಮೋದಿರವರ ಕೈಬಲಪಡಿಸಲಾಗುವುದು ಎಂದರು.

ಕೋವಿಂಡ್‍ನಂತ ಸಂಕಷ್ಟ ಪರಿಸ್ಥಿತಿಯಲ್ಲಿ ದೇಶದ ಪ್ರಧಾನಿ ಮೋದಿರವರು ಪ್ರತಿಯೊಬ್ಬರಿಗೂ ಉಚಿತವಾಗಿ ಲಸಿಕೆ ಕೊಡಿಸಿ ಪ್ರಾಣ ಕಾಪಾಡಿದ್ದಾರೆ. ಇಡಿ ವಿಶ್ವವೇ ಭಾರತದತ್ತ ತಿರುಗಿ ನೋಡುತ್ತಿದೆಯೆಂದರೆ ನರೇಂದ್ರಮೋದಿರವರ ಪಾರದರ್ಶಕ ಆಡಳಿತ ಕಾರಣ. ಹಾಗಾಗಿ ಪಾರ್ಲಿಮೆಂಟ್ ಚುನಾವಣೆಯಲ್ಲಿ ನಮ್ಮ ಮತ ಬಿಜೆಪಿ.ಗೆ ಎಂದು ನುಡಿದರು.

ಹಗರಿಬೊಮ್ಮನಹಳ್ಳಿ ಜೆಡಿಎಸ್.ಶಾಸಕ ನೇಮಿರಾಜ್‍ನಾಯ್ಕ, ಹೂವಿನಹಡಗಲಿ ಶಾಸಕ ಕೃಷ್ಣನಾಯ್ಕ, ಶಿರಹಟ್ಟಿ ಶಾಸಕ ಡಾ.ಚಂದ್ರುಲಮಾಣಿ, ಮಾಜಿ ಶಾಸಕ ಬಸವರಾಜ್‍ನಾಯ್ಕ, ಬಿಜೆಪಿ. ಎಸ್ಸಿ.ಮೋರ್ಚಾ ರಾಜ್ಯ ಕಾರ್ಯದರ್ಶಿ ಎಸ್.ಸಿ.ಲಿಂಬ್ಯನಾಯ್ಕ, ಗಿರೀಶ್‍ನಾಯ್ಕ, ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಸುರೇಶ್‍ನಾಯ್ಕ, ಸತೀಶ್‍ನಾಯ್ಕ, ಜಯಸಿಂಹ ಕಾಟ್ರೋತ್, ವೀಣಬಾಯಿ, ಸುಶೀಲಾಬಾಯಿ, ಗೋವಿಂದನಾಯ್ಕ, ಚನ್ನಯ್ಯನಹಟ್ಟಿ ಮುಕುಂದನಾಯ್ಕ, ಪಾವಗಡದ ನಾಗಭೂಷಣನಾಯ್ಕ ವೇದಿಕೆಯಲ್ಲಿದ್ದರು.
ಚಿತ್ರದುರ್ಗ ಲೋಕಸಭೆ ಕ್ಷೇತ್ರದ ಎಂಟು ವಿಧಾನಸಭಾ ಕ್ಷೇತ್ರಗಳಿಂದ ಬಂಜಾರ ಜನಾಂಗದವರು ಶಕ್ತಿ ಪ್ರದರ್ಶನ ಸಮಾವೇಶದಲ್ಲಿ ಪಾಲ್ಗೊಂಡಿದ್ದರು.

Advertisement
Tags :
across the statebengaluruchitradurgaLambani communitysuddionesuddione newssupport BJPಚಿತ್ರದುರ್ಗಚುನಾವಣೆಬಿಜೆಪಿಗೆ ಬೆಂಬಲಿಸಿಬೆಂಗಳೂರುರಾಜ್ಯಾದ್ಯಂತಲಂಬಾಣಿ ಸಮುದಾಯಸಮಾವೇಶದಲ್ಲಿ ನಿರ್ಣಯಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article