Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ 25 ನೇ ವರ್ಷದ ಬ್ರಹ್ಮೋತ್ಸವ ಕಾರ್ಯಕ್ರಮಕ್ಕೆ ಚಾಲನೆ

07:03 PM Nov 16, 2024 IST | suddionenews
Advertisement

 

Advertisement

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಚಿತ್ರದುರ್ಗ ನ. 16 : ಮೆದೆಹಳ್ಳಿ ರಸ್ತೆಯಲ್ಲಿರುವ  ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ 25ನೇ ವರ್ಷದ ಬ್ರಹ್ಮೋತ್ಸವ ಕಾರ್ಯಕ್ರಮದ ಅಂಗವಾಗಿ ಇಂದಿನಿಂದ 60 ದಿನಗಳ ಕಾಲ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಮಾಲೆ ಧರಿಸಿದ ಸ್ವಾಮಿಗಳಿಗೆ ಪ್ರತಿನಿತ್ಯ ಉಚಿತ ಅನ್ನದಾನ ಕಾರ್ಯಕ್ರಮಕ್ಕೆ ಇಂದು ಚಾಲನೆ ನೀಡಲಾಯಿತು.

Advertisement

 

ಶನಿವಾರ ದಂದು ಬೆಳಿಗ್ಗೆ 11 ಗಂಟೆಗೆ ಶ್ರೀ ಗಣ ಹೋಮ ಶ್ರೀ ಚಂಡಿಕಾ ಹೋಮ ಪೂಜಾ ಕಾರ್ಯಕ್ರಮ ನೆರವೇರಿಸಿ ಮಧ್ಯಾಹ್ನ 12:45 ಗಂಟೆಗೆ ಪೂರ್ಣಾವತಿ  ನಡೆಸಲಾಯಿತು. ಈ ಹೋಮದ ನೇತೃತ್ವವನ್ನು  ಸತೀಶ್ ಶರ್ಮ ಹಾಗೂ  ಸಂಘಟಿಕರಿಂದ ನೆರವೇರಿಸಿಕೊಟ್ಟರು.

ಅನ್ನದಾನದ ಕಾರ್ಯಕ್ರಮದ ಉದ್ಘಾಟನೆಯನ್ನು  ಎಸ್ ಆರ್ ಎಸ್  ವಿದ್ಯಾಸಂಸ್ಥೆಯ ಶ್ರೀಮತಿ ಸುಜಾತಾ ಲಿಂಗಾರೆಡ್ಡಿ ಹಾಗೂ ಗ್ರಾಮ ಪಂಚಾಯತ್ ಸದಸ್ಯರಾದ ವಿನಯ್ ಕುಮಾರ್ ಕುಮಾರ್ ನೆರವೇರಿಸಿದರು. ಅಧ್ಯಕ್ಷತೆಯನ್ನು ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಟ್ರಸ್ಟ್‍ನ ಅಧ್ಯಕ್ಷರು  ಶರಣ್ ಕುಮಾರ್ ವಹಿಸಿದ್ದರು.ಈ ಸಂದರ್ಭದಲ್ಲಿ ಸಾವಿರಾರು ಭಕ್ತರು ಆಗಮಿಸಿ ಪ್ರಸಾದವನ್ನು ಸ್ವೀಕರಿಸಿದರು

 

18-12-2024 ಬುಧುವಾರ ರಂದು ಸಂಜೆ ಏಳು ಗಂಟೆಗೆ  18 ಮೆಟ್ಟಿಲುಗಳ ಪಡಿಪೂಜೆ ಕಾರ್ಯಕ್ರಮ 22-12-2024  ರಂದು ಮಧ್ಯಾಹ್ನ 12 ಗಂಟೆಗೆ ಶ್ರೀ ಅಯ್ಯಪ್ಪಸ್ವಾಮಿ  ದೇವಸ್ಥಾನದ ಆವರಣದಲ್ಲಿ ಮಹಾ ಅನ್ನದಾನ ಕಾರ್ಯಕ್ರಮ, 13-01-2025  ಸೋಮವಾರ ಸಂಜೆ 6ಕ್ಕೆ ನಗರದಲ್ಲಿ ಶ್ರೀ ಅಯ್ಯಪ್ಪ ಸ್ವಾಮಿಯ  ದೇವರ ಆಭರಣ ಮೆರವಣಿಗೆ, 14.01.2025  ಮಂಗಳವಾರ ಮಕರ ಸಂಕ್ರಮಣದ ಅಂಗವಾಗಿ ಶ್ರೀ ಅಯ್ಯಪ್ಪ ಸ್ವಾಮಿ ಸನ್ನಿಧಾನದಲ್ಲಿ ವಿಶೇಷವಾದ ಲಕ್ಷ ದೀಪೋತ್ಸವ ಕಾರ್ಯಕ್ರಮ ನೆರವೇರಿಸಲಾಗುವುದು.  ಈ ಎಲ್ಲಾ ಪೂಜಾ ಕಾರ್ಯಕ್ರಮಕ್ಕೆ ಸಕಲ ಭಕ್ತಾದಿಗಳು  ಭಾಗವಹಿಸಿ ಯಶಸ್ವಿಗೊಳಿಸಬೇಕಾಗಿ ವಿನಂತಿಸಲಾಯಿತು.

ದೇವಸ್ಥಾನದ ಕಾರ್ಯದರ್ಶಿಯಾದ ವೆಂಕಟೇಶ್,ಉಪಾಧ್ಯಕ್ಷರಾದ ಮಲ್ಲಿಕಾರ್ಜುನ ದೇವಸ್ಥಾನದ  ಪದಾಧಿಕಾರಿ ಗಳಾದ ಸೂರಪ್ಪ,ರೇಷ್ಮೆ ಮಂಜುನಾಥ್,ಚಂದ್ರಶೇಖರ್ ಇಂದ್ರನ ಹಾಗೂ ಇನ್ನು ಮುಂತಾದವರು ಉಪಸ್ಥಿತರಿದ್ದರು.

Advertisement
Tags :
25 ನೇ ವರ್ಷದ ಬ್ರಹ್ಮೋತ್ಸವ25th year Brahmotsava programbengaluruchitradurgakannadaKannadaNewsShree Ayyappa Swamy Templesuddionesuddionenewsಕನ್ನಡಕನ್ನಡವಾರ್ತೆಕನ್ನಡಸುದ್ದಿಚಿತ್ರದುರ್ಗಬೆಂಗಳೂರುಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article