Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಡಿಸೆಂಬರ್ 22ರಂದು ನಾಯಕ ನೌಕರರ ಸಮಾವೇಶ : 135 ಸಾಧಕ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಸಮಾಜದ ಸಾಧಕರಿಗೆ ಸನ್ಮಾನ

01:53 PM Dec 19, 2024 IST | suddionenews
Advertisement

 

Advertisement

 

ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್. 19 : ವಾಲ್ಮೀಕಿ ನಾಯಕ ನೌಕರರ ಕ್ಷೇಮಾಭಿವೃದ್ಧಿ ಮತ್ತು ಸಾಂಸ್ಕೃತಿಕ ಸಂಘದ ವತಿಯಿಂದ ಇದೇ ಡಿ.22ರಂದು ಬೆಳಿಗ್ಗೆ 10.30ಕ್ಕೆ ನಗರದ ತರಾಸು ರಂಗಮಂದಿರದಲ್ಲಿ ವಾಲ್ಮೀಕಿ ನಾಯಕ ನೌಕರರ ಸಮಾವೇಶ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಅಧ್ಯಕ್ಷ ಡಾ.ಹೆಚ್.ಗುಡ್ಡದೇಶ್ವರಪ್ಪ ತಿಳಿಸಿದರು.

Advertisement

 

ನಗರದ ಪತ್ರಕರ್ತರ ಭವನದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಾಲ್ಮೀಕಿ ನಾಯಕ ನೌಕರರ ಕ್ಷೇಮಾಭಿವೃದ್ಧಿ ಮತ್ತು  ಸಾಂಸ್ಕೃತಿಕ   ಸಂಘದ ವತಿಯಿಂದ ಕಳೆದ 15 ವರ್ಷಗಳಿಂದಲೂ ಸಮಾಜದ ಸಾಧಕರನ್ನು ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ, ಪ್ರೋತ್ಸಾಹಿಸುವ ಕೆಲಸವನ್ನು ನಿರಂತರವಾಗಿ ಮಾಡಿಕೊಂಡು ಬರಲಾಗುತ್ತಿದೆ ಎಂದು ಮಾಹಿತಿ ನೀಡಿದರು.

 

2023-24ನೇ ಸಾಲಿನಲ್ಲಿ ಎಸ್‍ಎಸ್‍ಎಲ್‍ಸಿ ಮತ್ತು ಪಿಯುಸಿ, ಬಿಎ, ಬಿಕಾಂ, ಬಿಎಸ್ಸಿ, ಬಿಸಿಎ, ಬಿಎಸ್‍ಡಬ್ಲ್ಯೂ, ಎಂಜಿನಿಯರಿಂಗ್, ಎಂಬಿಬಿಎಸ್, ಇತರೆ ಪದವಿ ಪರೀಕ್ಷೆಯಲ್ಲಿ ಹೆಚ್ಚು ಅಂಕಗಳಿಸಿದ, ಪಿಹೆಚ್‍ಡಿ ಪದವಿ ಪಡೆದ ನಾಯಕ ಸಮಾಜದ 135 ಸಾಧಕ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಗುವುದು ಎಂದು ತಿಳಿಸಿದರು.

 

ಖ್ಯಾತ ನ್ಯಾಯವಾದಿಗಳಾದ ಹೆಚ್.ಎಂ.ಎಸ್.ನಾಯಕ ಅವರಿಗೆ ಜೀವಮಾನ ಸಾಧನ ಪ್ರಶಸ್ತಿ ಪ್ರಧಾನ ಮಾಡಲಾಗುವುದು. ಇದರ ಜೊತೆಗೆ ಸಮಾಜದ ಸಾಧಕರಾದ ಶ್ರೀ ಮಹರ್ಷಿ ವಾಲ್ಮೀಕಿ ರಾಜ್ಯ ಪ್ರಶಸ್ತಿ ಪುರಸ್ಕೃತರಾದ ಕಿಲಾರಿ ಜೋಗಯ್ಯ, ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರು ಹಾಗೂ ಪತ್ರಕರ್ತ ಸಿ.ರಾಜಶೇಖರ್, ಉದ್ಯಮಿ ಮಂಜುಳಾ ಮತ್ತು ಡಿಎಆರ್ ಡಿವೈಎಸ್ ಪಿ ಹಾಗೂ ಮುಖ್ಯಮಂತ್ರಿ ಪದಕ ಪುರಸ್ಕೃತ ಎಸ್.ಎಸ್.ಗಣೇಶ್ ಅವರನ್ನು ಸನ್ಮಾನಿಸಲಾಗುವುದು ಎಂದರು.

 

ವಿಶೇಷ ಸನ್ಮಾನಿತರಾಗಿ ಸಮಾಜದ ಓ.ಬಿ.ಬಸವರಾಜಪ್ಪ, ಹೆಚ್.ತಿಪ್ಪಯ್ಯ, ಸರ್ಕಾರಿ ನೌಕರರ ಸಂಘದ ನಿರ್ದೇಶಕರಾದ ಪಿ.ವಿ.ಸವಿತ, ಎ.ನಾಗರಾಜ, ಬಿ.ವಿಮಾಲಾಕ್ಷಿ, ಎಂ.ಎಂ.ತಿಪ್ಪೇಸ್ವಾಮಿ, ರಾಜ್ಯ ಪರಿಷತ್ ಸದಸ್ಯ ಎಸ್.ರಾಜಪ್ಪ, ವಾಲ್ಮೀಕಿ ನಾಯಕ ನೌಕರರ ಕ್ಷೇಮಾಭಿವೃದ್ಧಿ ಮತ್ತು ಸಾಂಸ್ಕೃತಿಕ ಸಂಘದ ಉಪಾಧ್ಯಕ್ಷ ಜೆ.ಎಸ್.ರವಿಕುಮಾರ್, ವಾರ್ತಾ ಇಲಾಖೆ ಎಂ.ಜೆ.ಬೋರೇಶ ಅವರನ್ನು ಗೌರವಿಸಲಾಗುವುದು ಎಂದು ಹೇಳಿದರು.

 

ಕಾರ್ಯಕ್ರಮದಲ್ಲಿ ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಉದ್ಘಾಟನೆ ನೆರವೇರಿಸುವರು. ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ವಾಲ್ಮೀಕಿ ಭಾವಚಿತ್ರ ಅನಾವರಣ ಮಾಡುವರು. ಮೊಳಕಾಲ್ಮುರು ಶಾಸಕ ಎನ್.ವೈ.ಗೋಪಾಲಕೃಷ್ಣ ಜೀವಮಾನ ಸಾಧನ ಪ್ರಶಸ್ತಿ ಪ್ರಧಾನ ಮಾಡುವರು. ಚಳ್ಳಕೆರೆ ಶಾಸಕರು ಹಾಗೂ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಟಿ.ರಘುಮೂರ್ತಿ ಸಮಾಜದ ಸಾಧಕರಿಗೆ ಸನ್ಮಾನ ಮಾಡುವರು. ಸಂಸದ ಗೋವಿಂದ ಎಂ.ಕಾರಜೋಳ, ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ, ಜಿಲ್ಲಾ ಮದಕರಿ ನಾಯಕ ವಿದ್ಯಾಸಂಸ್ಥೆ ಅಧ್ಯಕ್ಷ ಎಸ್.ಸಂದೀಪ್ ಅವರು ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸುವರು.
ಮುಖ್ಯ ಅತಿಥಿಗಳಾಗಿ ವಿಜಯನಗರ ಜಿಲ್ಲಾ ಪಂಚಾಯತ್ ಮುಖ್ಯ ಲೆಕ್ಕಾಧಿಕಾರಿ ಸಿ.ಜಿ.ಶ್ರೀನಿವಾಸ್, ಕಿವಿ, ಮೂಗು, ಗಂಟಲು ತಜ್ಞ ಹಾಗೂ ಸಂಶೋಧಕ ಡಾ.ಎನ್.ಬಿ.ಪ್ರಹ್ಲಾದ್, ಆಹಾರ ಇಲಾಖೆ ಜಂಟಿನಿರ್ದೇಶಕ ಕೆ.ಪಿ.ಮಧುಸೂಧನ್, ಭದ್ರಾ ಮೇಲ್ದಂಡೆ ಯೋಜನೆಯ ಅಧೀಕ್ಷಕ ಅಭಿಯಂತರ ಪಿ.ಮಧುಕುಮಾರ್, ಬಳ್ಳಾರಿ ವೃತ್ತ ಅರಣ್ಯ ಸಂರಕ್ಷಣಾಧಿಕಾರಿ ಚಂದ್ರಶೇಖರ್ ನಾಯಕ, ಜಿಲ್ಲಾ ಅಂಕಿತ ಅಧಿಕಾರಿ ಡಾ.ಸಿ.ಎಲ್.ಪಾಲಾಕ್ಷ, ಜಿಲ್ಲಾ ಖಜನಾಧಿಕಾರಿ ಎ.ರಮೇಶ್, ವೇದಾಂತ ಆಸ್ಪತ್ರೆ ತಜ್ಞ ವೈದ್ಯ ಡಾ.ಹೆಚ್.ಟಿ.ತೇಜಸ್ವಿ, ಜಿಲ್ಲಾಸ್ಪತ್ರೆ ಜನರಲ್  ಸರ್ಜನ ಡಾ.ಸಾಲಿ ಮಂಜಪ್ಪ, ಕೂಡ್ಲಿಗಿ ವಲಯ ಅರಣ್ಯಾಧಿಕಾರಿ ಜಿ.ಎಸ್.ಸಂದೀಪ ನಾಯಕ, ಡಿಆರ್‍ಡಿಒ ವಿಜ್ಞಾನಿ ಸುದೀಂದ್ರ ನಾಯಕ, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜೆ.ವೈಶಾಲಿ, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಎಸ್.ನಾಗಭೂಷಣ್, ಸುರೇಶ್, ಕೆ.ವಿ.ನಿರ್ಮಲ, ಸಹಾಯಕ ಅಭಿಯಂತರ ಬಸವರಾಜ ಟಿ.ಗೊರವರ್, ಸಹಾಯಕ ತೋಟಗಾರಿಕೆ ನಿರ್ದೇಶಕ ಎ.ಎಂ.ಕೃಷ್ಣಮೂರ್ತಿ, ಜಿಲ್ಲಾ ವಾಲ್ಮೀಕಿ ನಾಯಕ ನೌಕರರ ಸಂಘದ ಅಧ್ಯಕ್ಷ ಪಿ.ಕೆ.ಸದಾನಂದ, ಸಣ್ಣ ನೀರಾವರಿ ಇಲಾಖೆ ಸಹಾಯಕ ಅಭಿಯಂತರರಾದ ಪಿ.ಅವಿನಾಶ್, ಎಂ.ಎನ್.ನವೀನ್, ಭದ್ರಾ ಮೇಲ್ದಂಡೆ ಯೋಜನೆ ಸಹಾಯಕ ಅಭಿಯಂತರ ಆರ್.ಗಿರೀಶ್, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ವೈ.ತಿಪ್ಪೇಸ್ವಾಮಿ, ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಜಿ.ಬಿ.ಮಹಂತೇಶ್, ಮಾಜಿ ಉಪಾಧ್ಯಕ್ಷ ಎಸ್.ವೀರಣ್ಣ, ಕೆಎಸ್‍ಆರ್‍ಟಿಸಿ ಎಸ್‍ಸಿ, ಎಸ್‍ಟಿ ನೌಕರರ ಸಂಘದ ಅಧ್ಯಕ್ಷ ಎನ್.ಪಿ.ರವಿ, ಎಲ್‍ಐಸಿ ಎಸ್‍ಸಿ, ಎಸ್‍ಟಿ ಕ್ಷೇಮಾಭಿವೃದ್ಧಿ ಸಂಘದ ಪ್ರಧಾನ ಕಾರ್ಯದರ್ಶಿ ಹೆಚ್.ಮಹೇಶ್, ರಾಜ್ಯ ರಸ್ತೆ ಸಾರಿಗೆ ನಿಗಮದ ನೌಕರರ ಕ್ರೆಡಿಟ್ ಸಹಕಾರ ಸಂಘದ ಅಧ್ಯಕ್ಷ ಎಸ್.ಓಂಕಾರಪ್ಪ  ಸೇರಿದಂತೆ ಗಣ್ಯರು, ಅಧಿಕಾರಿಗಳು, ಜನಪ್ರತಿನಿಧಿಗಳು ಭಾಗವಹಿಸುವರು ಎಂದರು.

 

ಪತ್ರಿಕಾಗೋಷ್ಠಿಯಲ್ಲಿ ವಾಲ್ಮೀಕಿ ನಾಯಕ ನೌಕರರ ಕ್ಷೇಮಾಭಿವೃದ್ಧಿ ಮತ್ತು ಸಾಂಸ್ಕೃತಿಕ ಸಂಘದ ಪ್ರಧಾನ ಕಾರ್ಯದರ್ಶಿ ಆರ್.ನಾಗೇಂದ್ರ ಬಾಬು, ಖಜಾಂಚಿ ಎಸ್.ಬಿ.ರವಿಶಂಕರ್, ಉಪಾಧ್ಯಕ್ಷರಾದ ಕೆ.ಹರೀಶ್, ಓ.ಬಿ.ಬಸವರಾಜಪ್ಪ, ಜೆ.ಎಸ್.ರವಿಕುಮಾರ್, ಕೆ.ನಾಗರಾಜಪ್ಪ, ಬಿ.ವಿಮಾಲಾಕ್ಷಿ, ನಿರ್ದೇಶಕರಾದ ಎನ್.ಹೆಚ್.ಚಂದ್ರಪ್ಪ, ಹೆಚ್.ತಿಪ್ಪಯ್ಯ, ಹೆಚ್.ಡಿ.ಸುಮಂತ್, ಕೆ.ಕುಮಾರ್  ಸೇರಿದಂತೆ ಮತ್ತಿತರರು ಇದ್ದರು.

Advertisement
Tags :
chitradurgaEmployees Conferencemeritorious society meritoriousPratibha Puraskarastudentssuddionenewsಚಿತ್ರದುರ್ಗನಾಯಕ ನೌಕರರ ಸಮಾವೇಶಪ್ರತಿಭಾ ಪುರಸ್ಕಾರವಿದ್ಯಾರ್ಥಿಗಳುಸಮಾಜಸಾಧಕರಿಗೆ ಸನ್ಮಾನಸಾಧಕರುಸುದ್ದಿಒನ್ ನ್ಯೂಸ್
Advertisement
Next Article