For the best experience, open
https://m.suddione.com
on your mobile browser.
Advertisement

ಅಭ್ಯರ್ಥಿ ಗೆಲುವಿಗೆ ಶಕ್ತಿ ಕೇಂದ್ರದ ಪ್ರಮುಖರು ಹಗಲು-ರಾತ್ರಿ ಪ್ರಾಮಾಣಿಕವಾಗಿ ಕೆಲಸ ಮಾಡಿ : ಸಂತೋಷ್‍ ಜಿ

09:23 PM Apr 16, 2024 IST | suddionenews
ಅಭ್ಯರ್ಥಿ ಗೆಲುವಿಗೆ ಶಕ್ತಿ ಕೇಂದ್ರದ ಪ್ರಮುಖರು ಹಗಲು ರಾತ್ರಿ ಪ್ರಾಮಾಣಿಕವಾಗಿ ಕೆಲಸ ಮಾಡಿ   ಸಂತೋಷ್‍ ಜಿ
Advertisement

Advertisement

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ,ಏಪ್ರಿಲ್. 16  : ಕಾಂಗ್ರೆಸ್ ಪಕ್ಷ ಕೇಂದ್ರದಲ್ಲಿ ಅಧಿಕಾರಕ್ಕೆ ಬರುವುದು ಕಾಂಗ್ರೆಸ್‍ನವರಿಗೆ ಬೇಕಿಲ್ಲ. ಅವರವರ ಕುರ್ಚಿ ಉಳಿಕೊಳ್ಳುವುದೇ ಪೀಕಲಾಟವಾಗಿದೆ. ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇವರುಗಳು ಪೈಪೋಟಿಯಲ್ಲಿ ತೊಡಗಿದ್ದಾರೆಂದು ಬಿಜೆಪಿ. ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಸಂತೋಷ್‍ ಜಿ ಟೀಕಿಸಿದರು.

Advertisement

ಉಮಾಪತಿ ಕಲ್ಯಾಣ ಮಂಟಪದಲ್ಲಿ ಮಂಗಳವಾರ ನಡೆದ ಶಕ್ತಿ ಕೇಂದ್ರದ ಪ್ರಮುಖರ ಸಭೆ ಉದ್ಘಾಟಿಸಿ ಮಾತನಾಡಿದರು.
ರಾಹುಲ್‍ಗಾಂಧಿ ದೇಶದ ಪ್ರಧಾನಿಯಾಗುವುದು ಕಾಂಗ್ರೆಸ್‍ನವರಿಗೆ ಬೇಕಿಲ್ಲ. ಮೈಸೂರು ಲೋಕಸಭಾ ಕ್ಷೇತ್ರದಲ್ಲಿ ಅಭ್ಯರ್ಥಿಯನ್ನು ಗೆಲ್ಲಿಸಿಕೊಂಡು ಕುರ್ಚಿ ಉಳಿಸಿಕೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಮುತುವರ್ಜಿ ವಹಿಸಿದ್ದರೆ. ಬೆಂಗಳೂರು ಗ್ರಾಮಾಂತರದಲ್ಲಿ ಸಹೋದರ ಡಿ.ಕೆ.ಸುರೇಶ್‍ನನ್ನು ಗೆಲ್ಲಿಸಿಕೊಂಡು ಮರ್ಯಾದೆ ಉಳಿಸಿಕೊಳ್ಳಬೇಕೆಂಬ ದಿಕ್ಕಿನಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಲೆ ಕೆಡಿಸಿಕೊಂಡಿದ್ದಾರೆ. ಇನ್ನು ಮಲ್ಲಿಕಾರ್ಜುನ ಖರ್ಗೆ ಅಳಿಯನ ಗೆಲುವಿಗೆ ಟೊಂಕ ಕಟ್ಟಿ ನಿಂತಿದ್ದಾರೆ. ಕಾಂಗ್ರೆಸ್‍ನವರಿಗೆ ತಮ್ಮ ಪಕ್ಷ ಅಧಿಕಾರಕ್ಕೆ ಬರುತ್ತದೆಂಬ ವಿಶ್ವಾಸವಿಲ್ಲ ಎಂದು ಲೇವಡಿ ಮಾಡಿದರು.

ದೇಶದೆಲ್ಲೆಡೆ ನರೇಂದ್ರಮೋದಿ ನಾಯಕತ್ವವನ್ನು ಜನ ಬಯಸುತ್ತಿದ್ದಾರೆ. ನಾಲ್ಕು ನೂರು ಸೀಟು ಬಂದರೂ ಸಾಕು. 399 ಸ್ಥಾನ ಗೆದ್ದರೂ ಮೋದಿ ಪ್ರಧಾನಿಯಾಗುವುದು ಖಚಿತ. ಕಳೆದ ಮೂರು ತಿಂಗಳಿನಿಂದಲೂ ಬಿಜೆಪಿ. ಚುನಾವಣೆಗೆ ವ್ಯಾಪಕ ತಯಾರಿ ನಡೆಸುತ್ತಿದೆ. ಶಕ್ತಿ ಕೇಂದ್ರದ ಪ್ರಮುಖರು ಮನೆ ಮನೆಗೆ ಹೋಗಿ ಪಕ್ಷದ ಸಾಧನೆಗಳನ್ನು ತಿಳಿಸಿ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸಿ ಲೋಕಸಭೆ ಕಳಿಸಿಕೊಡಿ ಎಂದು ವಿನಂತಿಸಿದರು.

ರಾಜ್ಯದಲ್ಲಿ 28 ಕ್ಕೆ 28 ಕ್ಷೇತ್ರಗಳನ್ನು ಗೆಲ್ಲಿಸಿಕೊಳ್ಳುವಲ್ಲಿ ಬಿಜೆಪಿ. ಹುಮ್ಮಸ್ಸಿನಿಂದ ಚುನಾವಣೆಗೆ ತಯಾರಾಗಿದೆ. ಈ ಚುನಾವಣೆಗೆ ವಿಶೇಷತೆಯಿದೆ. ಮತದಾನಕ್ಕೆ ಕೇವಲ ಒಂಬತ್ತು ದಿನಗಳ ಬಾಕಿಯಿರುವುದರಿಂದ ಅಭ್ಯರ್ಥಿ ಗೆಲುವಿಗೆ ಶಕ್ತಿ ಕೇಂದ್ರದ ಪ್ರಮುಖರು ಹಗಲು-ರಾತ್ರಿ ಪ್ರಾಮಾಣಿಕವಾಗಿ ಕೆಲಸ ಮಾಡಬೇಕಿದೆ ಎಂದರು.

ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಬಿಜೆಪಿ. ಅಭ್ಯರ್ಥಿ ಗೋವಿಂದ ಕಾರಜೋಳ ಮಾತನಾಡಿ ಹತ್ತು ವರ್ಷಗಳ ಕಾಲ ದೇಶದ ಪ್ರಧಾನಿಯಾಗಿದ್ದ ನರೇಂದ್ರಮೋದಿ ಯಾವುದೇ ಕಳಂಕ, ಆಪಾದನೆ, ಭ್ರಷ್ಟಾಚಾರವಿಲ್ಲದೆ ಆಡಳಿತ ನಡೆಸಿದ್ದಾರೆ. ಇಂತಹ ನಾಯಕನಿಗೆ ಮತ ನೀಡಲು ದೇಶದ 140 ಕೋಟಿ ಜನ ಹಾತೊರೆಯುತ್ತಿದ್ದಾರೆ. ಅರವತ್ತು ವರ್ಷಗಳ ಕಾಲ ಅಧಿಕಾರ ನಡೆಸಿದ ಕಾಂಗ್ರೆಸ್‍ನಲ್ಲಿ ದೇಶದ ಪ್ರಧಾನಿಯಾಗುವ ಯೋಗ್ಯತೆ ಯಾರಿಗೂ ಇಲ್ಲ. ಅನೇಕ ಹಗರಣಗಳಲ್ಲಿ ಸಿಕ್ಕಿಕೊಂಡು ಜೈಲಿಗೆ ಹೋಗಿ ಬಂದವರಿದ್ದಾರೆ. ಅನೇಕರು ಬೇಲ್‍ನಲ್ಲಿದ್ದಾರೆ. ಬಿಜೆಪಿ. ಅಭಿವೃದ್ದಿ ಕೆಲಸಗಳನ್ನು ಮನೆ ಮನೆಗೆ ತಿಳಿಸಿ ನನ್ನನ್ನು ಗೆಲ್ಲಿಸಿ ಎಂದು ಕಾರ್ಯಕರ್ತರಲ್ಲಿ ಕೋರಿದರು.

ಕಾಂಗ್ರೆಸ್‍ನಿಂದ ದೇಶದ ಅಭಿವೃದ್ದಿ ಸಾಧ್ಯವಿಲ್ಲ. ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್. ಬಿಜೆಪಿ. ದೈತ್ಯ ಶಕ್ತಿಗಳು ಒಂದಾಗಿವೆ. ನಮ್ಮನ್ನು ಎದುರಿಸುವ ಶಕ್ತಿ ಸಾಮಥ್ರ್ಯ ಕಾಂಗ್ರೆಸ್‍ಗಿಲ್ಲ. ಅಭಿವೃದ್ದಿಯಲ್ಲಿ ಹಿಂದುಳಿದಿರುವ ಚಿತ್ರದುರ್ಗ ಜಿಲ್ಲೆಯನ್ನು ಮಾದರಿ ಕ್ಷೇತ್ರವನ್ನಾಗಿ ಮಾಡುವುದು ನನ್ನ ಗುರಿ ಎಂದು ಹೇಳಿದರು.

ಮಾಜಿ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಮಾತನಾಡುತ್ತ ಪಕ್ಷ ದೇಶಕ್ಕೆ ನರೇಂದ್ರಮೋದಿ ಬಲವಾಗಿದ್ದಾರೆ. ಅರವತ್ತು ವರ್ಷಗಳಲ್ಲಿ ಕಾಂಗ್ರೆಸ್‍ನಿಂದ ಆಗದ ಅಭಿವೃದ್ದಿಯನ್ನು ಕೇವಲ ಹತ್ತು ವರ್ಷಗಳಲ್ಲಿ ಸಾಧಿಸಿ ತೋರಿಸಿರುವ ನರೇಂದ್ರಮೋದಿ ಮೂರನೆ ಬಾರಿಗೆ ದೇಶದ ಪ್ರಧಾನಿಯಾಗಬೇಕೆಂದು ಜನ ಹಂಬಲಿಸುತ್ತಿದ್ದಾರೆ. ವಿಮಾನ ನಿಲ್ದಾಣ ಆಸ್ಪತ್ರೆ ಇನ್ನು ಹತ್ತು ಹಲವಾರು ಯೋಜನೆಗಳನ್ನು ದೇಶಕ್ಕೆ ನೀಡಿದ್ದಾರೆ. ಅಂತರಾಷ್ಟ್ರೀಯ ಮಟ್ಟದಲ್ಲಿ ಯಾವುದಾದರೂ ದೇಶಗಳ ನಡುವೆ ಯುದ್ದ ನಡೆದರೆ ಸಂಧಾನ ಮಾಡಲು ಬೇರೆ ದೇಶಗಳು ನರೇಂದ್ರಮೋದಿಯ ಸಹಾಯ ಬಯಸುತ್ತಿರುವುದು ಭಾರತದ ಕೀರ್ತಿಯನ್ನು ಹೆಚ್ಚಿಸಿದೆ ಎಂದು ಗುಣಗಾನ ಮಾಡಿದರು.

ಹೊಳಲ್ಕೆರೆ ಶಾಸಕ ಡಾ.ಎಂ.ಚಂದ್ರಪ್ಪ ಮಾತನಾಡಿ ಬಿಜೆಪಿ. ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಂತೋಷ್‍ಜಿ ಅತ್ಯುತ್ತಮ ಸಂಘಟನಾ ಚತುರರು. ಹತ್ತು ವರ್ಷಗಳ ಕಾಲ ದೇಶವನ್ನು ಮನ್ನಡೆಸಿಕೊಂಡು ಹೋದ ನರೇಂದ್ರಮೊದಿ ಮತ್ತೊಮ್ಮೆ ದೇಶದ ಪ್ರಧಾನಿಯಾಗಬೇಕಾಗಿರುವುದರಿಂದ ಈ ಬಾರಿಯ ಲೋಕಸಭೆ ಚುನಾವಣೆಗೆ ಮಹತ್ವವಿದೆ. ಹಾಗಾಗಿ ಬಿಜೆಪಿ. ಅಭ್ಯರ್ಥಿ ಗೋವಿಂದ ಕಾರಜೋಳರನ್ನು ಗೆಲ್ಲಿಸಿಕೊಳ್ಳುವಂತೆ ಹೇಳಿದರು.

ವಿಧಾನಪರಿಷತ್ ಸದಸ್ಯ ಕೆ.ಎಸ್.ನವೀನ್, ಮಾಜಿ ಶಾಸಕ ತಿಪ್ಪೇಸ್ವಾಮಿ, ಎಂ.ಎಲ್.ಸಿ.ಚಿದಾನಂದಗೌಡ, ಎಸ್.ಲಿಂಗಮೂರ್ತಿ, ಬಿಜೆಪಿ.ಜಿಲ್ಲಾಧ್ಯಕ್ಷ ಎ.ಮುರಳಿ, ಸಂಪತ್‍ಕುಮಾರ್, ಸುರೇಶ್‍ಸಿದ್ದಾಪುರ, ನವೀನ್ ಚಾಲುಕ್ಯ, ಬಾಳೆಕಾಯಿ ರಾಂದಾಸ್ ಇನ್ನು ಮೊದಲಾದವರು ವೇದಿಕೆಯಲ್ಲಿದ್ದರು.

Tags :
Advertisement