For the best experience, open
https://m.suddione.com
on your mobile browser.
Advertisement

ಹೆಣ್ಣು ಮಕ್ಕಳ ಆತ್ಮರಕ್ಷಣೆಗೆ ಜೂಡೋ ಕಲಿಕೆ ಸಹಾಯಕಾರಿ : ನಗರ ಸಭೆ ಅಧ್ಯಕ್ಷೆ ಸುಮಿತಾ ಬಿ.ಎನ್

07:38 PM Oct 16, 2024 IST | suddionenews
ಹೆಣ್ಣು ಮಕ್ಕಳ ಆತ್ಮರಕ್ಷಣೆಗೆ ಜೂಡೋ ಕಲಿಕೆ ಸಹಾಯಕಾರಿ   ನಗರ ಸಭೆ ಅಧ್ಯಕ್ಷೆ ಸುಮಿತಾ ಬಿ ಎನ್
Advertisement

Advertisement

ಚಿತ್ರದುರ್ಗ. ಅ.16: ಪ್ರಸ್ತುತ ಸಮಾಜದಲ್ಲಿ ಹೆಣ್ಣು ಮಕ್ಕಳ ಆತ್ಮ ರಕ್ಷಣೆಗೆ ಜೂಡೋ ಕಲಿಕೆ ಸಹಾಯಕಾರಿಯಾಗಿದೆ ಎಂದು ನಗರ ಸಭೆ ಅಧ್ಯಕ್ಷೆ ಸುಮಿತಾ ಬಿ.ಎನ್ ಅಭಿಮತ ವ್ಯಕ್ತಪಡಿಸಿದರು.

Advertisement

ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ವಿಭಾಘ ಹಾಗೂ ನಮ್ಮ ಎಕ್ಸ್ಪರ್ಟ್ ಪಿ. ಯು ಕಾಲೇಜು ವತಿಯಿಂದ ಬುಧವಾರ ನಗರದ ಒನಕೆ ಓಬವ್ವ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾದ ರಾಜ್ಯ ಮಟ್ಟದ ಜೂಡೋ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಕ್ರೀಡೆಯು ಜೂಡೋ ಕಲೆ ಮೂಲತಃ ಆತ್ಮರಕ್ಷಣೆ ಕೆಲೆಯಗಿದೆ. ಇದರು ಜಪಾನ್ ದೇಶದಲ್ಲಿ ಮೊದಲು ಆರಂಭವಾಯಿತು. ವಿಶೇಷವಾಗಿ ಮಹಿಳೆಯರ ಸ್ವಯಂ ರಕ್ಷಣೆಗೆ ಜೂಡೋ ತುಂಬಾ ಅನುಕೂಲವಾಗಲಿದೆ. ಪ್ರತಿಯೊಂದು ಶಾಲಾ ಕಾಲೇಜಿನಲ್ಲಿ ಈ ಕ್ರೀಡೆಯನ್ನು ಕಲಿಸಿದಲ್ಲಿ ಮಕ್ಕಳಿಗೆ ಅತ್ಯಂತ ಸಹಾಯಕಾರಿಯಾಗಲಿದೆ ಎಂದರು.

ಕ್ರೀಡೆಯಲ್ಲಿ ಸೋಲು ಗೆಲುವು ಸಹಜ, ಇದನ್ನು ಸಮಾನವಾಗಿ ಸ್ವೀಕರಿಸಿ, ಕ್ರೀಡಾಪಟುಗಳು ಕ್ರೀಡಾ ಸ್ಪೂರ್ತಿ ಮೆರೆಯಬೇಕು. ಚಿತ್ರದುರ್ಗ ಜಿಲ್ಲೆಯಲ್ಲಿ ಆಯೋಜಿಸಿರುವುದು ಸಂತಸದ ಸಂಗತಿಯಾಗಿದೆ. ಕ್ರೀಡಾಪಟುಗಳು ಜಾಗರೂಕತೆಯಿಂದ ಕ್ರೀಡೆಯಲ್ಲಿ ಭಾಗವಹಿಸುವಂತೆ ಸುಮಿತಾ ಬಿ.ಎನ್. ಸಲಹೆ ನೀಡಿದರು.

ಈ ಸಂದರ್ಭದಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಆರ್.ಪುಟ್ಟಸ್ವಾಮಿ, ಜೂಡೋ ಹಿರಿಯ ತರಬೇತುದಾರೆ ಡಾ.ಎಂ.ಎನ್.ತ್ರಿವೇಣಿ, ಪ್ರಾಂಶುಪಾಲರ ಸಂಘದ ಅಧ್ಯಕ್ಷ ಎಸ್.ದೇವೇಂದ್ರಪ್ಪ, ಕಾರ್ಯದರ್ಶಿ ಆರ್.ಮುಸ್ತಾಫ್, ಖಜಾಂಚಿ ಜೆ.ರಂಗಸ್ವಾಮಿ, ಜಿಲ್ಲಾ ಉಪನ್ಯಾಸಕರ ಸಂಘದ ಜಿಲ್ಲಾಧ್ಯಕ್ಷ ಬಿ.ಆರ್.ಮಲ್ಲೇಶ್, ಐಡಿಯಲ್ ಎಜುಕೇಷನ್ ಸೊಸೈಟಿ ಹಾಗೂ ನಮ್ಮ ಎಕ್ಸ್ಪರ್ಟ್ಸ್ ಪಿ.ಯು ಕಾಲೇಜು ಪ್ರಾಂಶುಪಾಲ ಪಿ.ಅರುಣ್ ಕುಮಾರ್ ಸೇರಿದಂತೆ ವಿವಿಧ ಕಾಲೇಜುಗಳ ಪ್ರಾಂಶುಪಾಲರು ಉಪಸ್ಥಿತರಿದ್ದರು.

ಜೂಡೋ ಕ್ರೀಡಾಕೂಟದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಂದ 139 ಪುರುಷ, 101 ಮಹಿಳಾ ಕ್ರೀಡಾಪಟುಗಳು ಭಾಗವಹಿಸಿದ್ದರು. ಪುರುಷರ ವಿಭಾಗದಲ್ಲಿ 10 ಮತ್ತು ಮಹಿಳೆಯರ ವಿಭಾಗದಲ್ಲಿ 9 ವಿಧಗಳಲ್ಲಿ ಕ್ರೀಡೆಯನ್ನು ಆಯೋಜಿನೆ ಮಾಡಲಾಗಿತ್ತು. ಈ ಬಾರಿಯ ರಾಜ್ಯ ಮಟ್ಟದ ಕ್ರೀಡಾ ಕೂಟದಲ್ಲಿ ಚಿನ್ನದ ಪದಕ ಪಡೆದ 19 ಕ್ರೀಡಾಪಟುಗಳನ್ನು ಮುಂದಿನ ಡಿಸೆಂಬರ್ ಕೊನೆಯ ವಾರದಲ್ಲಿ ಪಂಜಾಬ್ ರಾಜ್ಯದಲ್ಲಿ ನಡೆಯಲಿರುವ ರಾಷ್ಟಿçÃಯ ಜೂಡೋ ಕ್ರೀಡಾಕೂಟದಲ್ಲಿ ಭಾಗವಹಿಸಲಿದ್ದಾರೆ.

ಮಹಿಳೆಯರ ಮೊದಲ ನಾಲ್ಕು ಸುತ್ತಿನಲ್ಲಿ ವಿವಿಧ ವಿಭಾಗಗಳಲ್ಲಿ ವಿಜೇತರಾದ ಬಾಗಲಕೋಟೆ ಜಿಲ್ಲೆಯ ಸ್ವಾತಿ, ಚಿಕ್ಕೋಡಿಯ ಅನುರಾಧ ಹಾಗೂ ಬೆಂಗಳೂರು ದಕ್ಷಿಣ ವಿಭಾಗದ ವರಲಕ್ಷಿö್ಮ ಚಿನ್ನದ ಪದಕ ಪಡೆದು ಮಿಂಚಿದರು. ಬಾಲಕರ ವಿಭಾಗದಲ್ಲಿ ಬೆಳಗಾವಿ ಜಿಲ್ಲೆಯ ಮನೋಜ್ ಸತ್ಯಪ್ಪ, ದಾವಣಗೆರೆಯ ವಿಕಾಸ್ ನಾಯ್ಕ್, ಕಲಬುರುಗಿ ಜಿಲ್ಲೆಯ ಕೆ.ಆಶಿಶ್ ಜೂಡೋ ಕ್ರೀಡಾಕೂಟದಲ್ಲಿ ಪ್ರಥಮ ಸ್ಥಾನ ಪಡೆಯುವ ಮೂಲಕ ಚಿನ್ನದ ಪದಕ ಪಡೆದರು.

Tags :
Advertisement