ಲೋಕಾಯುಕ್ತ ದಾಳಿ : ಎಸಿಎಫ್ ಸುರೇಶ್ ಮನೆಯಲ್ಲಿ ಸಿಕ್ಕ ಚಿನ್ನಾಭರಣ ಮತ್ತು ನಗದು ಎಷ್ಟು ?
ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್. 10 : ಇಂದು ಬೆಳ್ಳಂಬೆಳಗ್ಗೆಯೇ ಲೋಕಾಯುಕ್ತ ಎಸ್ಪಿ ವಾಸುದೇವರಾಮ್, ಡಿವೈಎಸ್ಪಿ ಮೃತ್ಯುಂಜಯ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಅದರಲ್ಲೂ ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನ ಎಸಿಎಫ್ ಸುರೇಶ್ ಅವರ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ಇಂದು ದಾಳಿ ನಡೆಸಿದ್ದರು. ಈ ವೇಳೆ ಸುರೇಶ್ ಮನೆಯಲ್ಲಿ ಚಿನ್ನಾಭರಣ ಹಾಗೂ ನಗದು ಸಿಕ್ಕಿದೆ.
ಸುರೇಶ್ ಅವರು ಚಿತ್ರದುರ್ಗ ಜಿಲ್ಲೆ ಹಿರಿಯೂರು ವಿಭಾಗದ ಎಸಿಎಫ್ ಆಗಿದ್ದಾರೆ. ಚಳ್ಳಕೆರೆ ಪಟ್ಟಣದಲ್ಲಿ ಅವರ ಮನೆ ಇದ್ದು, ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದಾಗ, ಸುರೇಶ್ ಮನೆಯಲ್ಲಿ 1 ಕೆಜಿ ಚಿನ್ನಾಭರಣ, 5 ಲಕ್ಷ ರೂ.ನಗದು ಪತ್ತೆ ಆಗಿದೆ. ಜೊತೆಗೆ 9 ಎಕರೆ ಜಮೀನು, 3 ನಿವೇಶನ ಸೇರಿ ಅಪಾರ ಆಸ್ತಿಪತ್ರ ಪತ್ತೆಯಾಗಿದೆ.
ಸುರೇಶ್ ಮೇಲೆ ಆದಾಯ ಮೀರಿದ ಆಸ್ತಿ ಗಳಿಕೆ ಆರೋಪವಿತ್ತು. ಈ ಹಿನ್ನೆಲೆ ದಾಳಿ ನಡೆಸಿದ್ದು, ದಾಳಿ ವೇಳೆ ಸಿಕ್ಕ ಆಸ್ತಿ ಪತ್ರದ ದಾಖಲೆಗಳನ್ನಿ ಲೋಕಾಯುಕ್ತರು ವಶಕ್ಕೆ ಪಡೆದಿದ್ದಾರೆ. ಲೋಕಾಯುಕ್ತ ಎಸ್ಪಿ ವಾಸುದೇವರಾಮ್, ಡಿವೈಎಸ್ಪಿ ಮೃತ್ಯುಂಜಯ ನೇತೃತ್ವದಲ್ಲಿ ಈ ದಾಳಿ ನಡೆದಿದ್ದು, ಪರಿಶೀಲನೆ ನಡೆಸಿದ್ದಾರೆ. ಸುರೇಶ್ ಅವರಿಗೆ ಸೇರಿವೆ ಎನ್ನಲಾದ ಚಳ್ಳಕೆರೆಯಲ್ಲಿರುವ 2 ಮನೆ ಮತ್ತು ಬೆಂಗಳೂರಿನಲ್ಲಿರುವ 1 ಮನೆ ಮೇಲೆ ದಾಳಿ ನಡೆಸಲಾಗಿದೆ. ಒಂದಷ್ಟು ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ. ಸುರೇಶ್ ಅವರು ಎಲ್ಲಾ ದಾಖಲೆಗೂ ಸರಿಯಾದ ದಾಖಲೆಗಳನ್ನು ನೀಡಿದರೆ ಅಧಿಕಾರಿಗಳು ಜಪ್ತಿ ಮಾಡಿದ ಅಷ್ಟು ವಸ್ತುಗಳನ್ನು ವಾಪಾಸ್ ಮಾಡಲಿದ್ದಾರೆ. ಸದ್ಯ ಸುರೇಶ್ ಅವರಿಗೆ ಸಂಬಂಧಿಸಿದ ಮನೆಗಳಲ್ಲಿ ಕೆಜಿಗಟ್ಟಲೆ ಚಿನ್ನ, ಲಕ್ಷಾಂತರ ರೂಪಾಯಿ ಹಣ ಸಿಕ್ಕಿದೆ.