Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ವಚನಗಳನ್ನು ಕಾಪಾಡಿಕೊಂಡು ಬಂದ ಕೀರ್ತಿ ಮಡಿವಾಳ ಮಾಚಿದೇವರಿಗೆ ಸಲ್ಲಬೇಕು : ಶಾಸಕ ಕೆ.ಸಿ.ವೀರೇಂದ್ರಪಪ್ಪಿ

02:28 PM Feb 01, 2024 IST | suddionenews
Advertisement

 

Advertisement

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.01 : ವಚನಗಳನ್ನು ಸಂರಕ್ಷಿಸಿದ ಮಡಿವಾಳ ಮಾಚಿದೇವರ ದಾರಿಯಲ್ಲಿ ಎಲ್ಲರೂ ಸಾಗಬೇಕಿದೆ ಎಂದು ಶಾಸಕ ಕೆ.ಸಿ.ವೀರೇಂದ್ರಪಪ್ಪಿ ಹೇಳಿದರು.

Advertisement

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ನಗರಸಭೆ ಸಂಯುಕ್ತಾಶ್ರಯದಲ್ಲಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಮಡಿವಾಳ ಮಾಚಿದೇವರ ಜಯಂತಿಯಲ್ಲಿ ಮಾಚಿದೇವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದರು.

ಕಾಯಕ ಮಾಡುವುದು ಮಡಿವಾಳ ಮಾಚಿದೇವರ ವೃತ್ತಿಯಾಗಿತ್ತು. ಹನ್ನೆರಡನೆ ಶತಮಾನದ ಬಸವಣ್ಣನವರು ಅನುಭವ ಮಂಟಪದಲ್ಲಿ ಮಡಿವಾಳ ಮಾಚಿದೇವರಿಗೆ ವಿಶೇಷ ಸ್ಥಾನಮಾನ ಕೊಟ್ಟಿದ್ದರು. ವಚನಗಳನ್ನು ಕಾಪಾಡಿಕೊಂಡು ಬಂದ ಕೀರ್ತಿ ಮಡಿವಾಳ ಮಾಚಿದೇವರಿಗೆ ಸಲ್ಲಬೇಕು. ಹಿಂದಿನಿಂದಲೂ ನಮ್ಮ ಮನೆಯಲ್ಲಿ ಏನೆ ಕಾರ್ಯಕ್ರಮ ಜರುಗಿದರೂ ಮಡಿವಾಳರೂ ಬಂದೆ ಬರುತ್ತಾರೆ. ಆ ಪದ್ದತಿ ಮೊದಲಿನಿಂದಲೂ ನಡೆದುಕೊಂಡು ಬರುತ್ತಿದೆ ಎಂದು ಮಡಿವಾಳ ಜನಾಂಗಕ್ಕೂ ತಮಗೂ ಇರುವ ಅವಿನಾಭಾವ ಸಂಬಂಧವನ್ನು ನೆನಪಿಸಿಕೊಂಡರು.

ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಮಾತನಾಡಿ ಸಮಾಜದಲ್ಲಿ ಸಂಸ್ಕøತಿ, ಸಂಸ್ಕಾರ ವಿನಾಶದತ್ತ ಹೋಗುತ್ತಿರುವ ಇಂದಿನ ಕಾಲದಲ್ಲಿ ಮಡಿವಾಳ ಮಾಚಿದೇವ ಸೇರಿದಂತೆ ವಚನಕಾರರನ್ನು ನೆನಸಬೇಕಿದೆ. ಕ್ರಾಂತಿಕಾರಿ ಬಸವಣ್ಣನವರ ಆಶಯಗಳ ಮೇಲೆ ಸಂವಿಧಾನ ರಚನೆಯಾಗಿದೆ. ಸರ್ಕಾರ ಬಸವಣ್ಣನವರನ್ನು ಸಾಂಸ್ಕøತಿಕ ನಾಯಕ ಎಂದು ಘೋಷಿಸಿದೆ. ಸಮಾಜದ ಕೊಳೆಯನ್ನು ಶುಚಿ ಮಾಡಿ ಬದುಕುತ್ತಿರುವ ಮಡಿವಾಳ ಸಮಾಜ ಶಿಕ್ಷಣವಂತರಾಗಬೇಕು. ಸ್ಪರ್ಧಾತ್ಮಕ ಜಗತ್ತಿಗೆ ಮಕ್ಕಳನ್ನು ಅಣಿಗೊಳಿಸಬೇಕಾಗಿರುವುದರಿಂದ ಈ ಜನಾಂಗ ಕಡ್ಡಾಯವಾಗಿ ಮಕ್ಕಳಿಗೆ ಶಿಕ್ಷಣ ಕೊಡಿಸಿ ಸಂಸ್ಕಾರವಂತರನ್ನಾಗಿ ಮಾಡಬೇಕು ಎಂದು ಕರೆ ನೀಡಿದರು.

ಇತಿಹಾಸ ಸಂಶೋಧಕ ಡಾ.ಎಸ್.ಎನ್.ಮಹಾಂತೇಶ್ ಉಪನ್ಯಾಸ ನೀಡಿ ವಚನ ಸಾಹಿತ್ಯ ಉಳಿಸಿ ನಾಡಿಗೆ ಕೊಟ್ಟಂತ ಕೀರ್ತಿ ಮಡಿವಾಳ ಮಾಚಿದೇವಸ್ವಾಮಿಗೆ ಸಲ್ಲುತ್ತದೆ. ಯಾರಿಗೂ ಬಗ್ಗದ ಮಡಿವಾಳ ಮಾಚಿದೇವರು ತಮಗೆ ಕೊಟ್ಟ ಕೆಲಸವನ್ನು ನಿಷ್ಠೆಯಿಂದ ನಿಭಾಯಿಸುತ್ತಿದ್ದರು. ಬಸವಣ್ಣ, ಅಕ್ಕಮಹಾದೇವಿ ವಚನಗಳಲ್ಲಿ ಮಡಿವಾಳ ಮಾಚಯ್ಯನವರ ವ್ಯಕ್ತಿತ್ವ ಏನು ಎನ್ನುವುದು ಗೊತ್ತಾಗುತ್ತದೆ. ಸ್ವಾಭಿಮಾನದ ಸಂಕೇತವಾಗಿರುವ ಈ ಸಮಾಜ ಯಾರನ್ನು ಬೇಡಲಿಲ್ಲ. ಮಡಿವಾಳ ಜನಾಂಗಕ್ಕೆ ಬುದ್ದಿ ಬರಬೇಕಿದೆ. ಹಾಗಾಗಿ ತಿದ್ದಿ ತೀಡುವ ಕೆಲಸ ಮಾಡಬೇಕಾಗಿದೆ ಎಂದು ಹೇಳಿದರು.

ಮಡಿವಾಳ ಮಾಚಿದೇವರನ್ನು ಜನಾಂಗಕ್ಕಷ್ಟೆ ಸೀಮಿತಗೊಳಿಸಿಕೊಳ್ಳುವುದು ಸರಿಯಲ್ಲ. ಹೊಟ್ಟೆಕಿಚ್ಚು ಬಿಟ್ಟು ಮೊದಲು ಸಂಘಟಿತರಾಗಿ. ಬಸವಣ್ಣ, ಅಲ್ಲಮಪ್ರಭು, ಚನ್ನಬಸವಣ್ಣ, ಅಕ್ಕಮಹಾದೇವಿಯವರಲ್ಲಿ ಮಡಿವಾಳ ಮಾಚಿದೇವರು ಒಬ್ಬ ವಚನ ಸಂರಕ್ಷಕರು. ಬಸವಣ್ಣನವರ ವಿಚಾರಗಳಲ್ಲಿ ಮಾಚಯ್ಯನವರ ಪ್ರಸ್ತಾಪವಾಗಿದೆ. ವಚನ ಸಾಹಿತ್ಯ ಉಳಿಸುವ ಎದೆಗಾರಿಕೆ, ತಾಕತ್ತು ಇದ್ದುದರಿಂದಲೇ ಬಸವಣ್ಣನವರು ಮಾಚಯ್ಯನನ್ನು ಕಲ್ಯಾಣಕ್ಕೆ ಕರೆಸಿಕೊಂಡು ಅನುಭವ ಮಂಟಪ ರಕ್ಷಿಸುವ ಕೆಲಸ ನೀಡುತ್ತಾರೆ. ಆಂಧ್ರ, ಮಹಾರಾಷ್ಟ್ರ, ತಮಿಳುನಾಡು, ಕೇಳದಲ್ಲೂ ಮಡಿವಾಳ ಮಾಚಿದೇವರ ವಿಚಾರಗಳಿವೆ ಎಂದು ನುಡಿದರು.

ಮಡಿವಾಳ ಸಮಾಜದ ಜಿಲ್ಲಾಧ್ಯಕ್ಷ ಬಿ.ರಾಮಜ್ಜ ಮಾತನಾಡಿ ಮಡಿವಾಳ ಮಾಚಿದೇವರು ಸಂರಕ್ಷಿಸಿರುವ ವಚನಗಳು ಸಮಾಜಕ್ಕೆ ಇಂದಿಗೂ ಪ್ರಸ್ತುತವಾಗಿದೆ. ಶುಚಿಗೊಳಿಸುವ ಕಾಯಕದಿಂದ ಹೆಸರುವಾಸಿಯಾಗಿರುವ ಮಡಿವಾಳ ಜನಾಂಗ ಮಡಿವಾಳ ಮಾಚಿದೇವರು ಹಾಕಿಕೊಟ್ಟ ಮಾರ್ಗದದಲ್ಲಿ ನಡೆಯಬೇಕು ಎಂದು ತಿಳಿಸಿದರು.

ಮಡಿವಾಳ ಸಮಾಜದ ಕಾರ್ಯದರ್ಶಿ ಕೆ.ಆರ್.ಮಂಜುನಾಥ್, ಉಪವಿಭಾಗಾಧಿಕಾರಿ ಕಾರ್ತಿಕ್, ನಗರಸಭೆ ಪೌರಾಯುಕ್ತರಾದ ರೇಣುಕ, ಮಡಿವಾಳ ಸಮಾಜದ ಪ್ರಕಾಶ್, ರುದ್ರಮುನಿ, ರಂಗಪ್ಪ, ರಮೇಶ್, ಶಿವಲಿಂಗಪ್ಪ, ಮಂಜುನಾಥ್, ರಂಗಮ್ಮ, ವೀಣ, ಲಕ್ಷ್ಮಣ, ವಿನೋದಮ್ಮ, ಗೋಪಾಲಪ್ಪ, ಲಕ್ಷ್ಮಣ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಮಲ್ಲಿಕಾರ್ಜುನ್ ಇನ್ನು ಮುಂತಾದವರು ಮಡಿವಾಳ ಮಾಚಿದೇವ ಜಯಂತಿಯಲ್ಲಿ ಭಾಗವಹಿಸಿದ್ದರು.

Advertisement
Tags :
chitradurgaMadiwala MachidevaMLA KC Veerendra pappisuddionesuddione newsvowsಕೀರ್ತಿಚಿತ್ರದುರ್ಗಮಡಿವಾಳ ಮಾಚಿದೇವರುವಚನಗಳುಶಾಸಕ ಕೆ.ಸಿ.ವೀರೇಂದ್ರಪಪ್ಪಿಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article