ಮಲೇರಿಯಾ, ಡೆಂಗಿ ನಿಯಂತ್ರಣ ಎಲ್ಲರ ಜವಾಬ್ದಾರಿ : ಡಿಹೆಚ್ಒ ಡಾ. ರೇಣು ಪ್ರಸಾದ್
ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 24 : ಮಲೇರಿಯಾ, ಡೆಂಗಿ ಜ್ವರ ನಿಯಂತ್ರಣಕ್ಕೆ ಸಮುದಾಯದ ಸಹಕಾರ ಪ್ರಮುಖವಾದ್ದು ಡೆಂಗಿ ನಿಯಂತ್ರಣ ನಮ್ಮ ನಿಮ್ಮೆಲ್ಲರ ಜವಾಬ್ದಾರಿ. ಕ್ಷೇತ್ರ ಮಟ್ಟದಲ್ಲಿ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಿ 2025 ಕ್ಕೆ ಮಲೇರಿಯ ಮುಕ್ತ ರಾಜ್ಯ ಮಾಡಲು ಪಣ ತೊಡೋಣ ಎಂದು ಡಿಹೆಚ್ಓ ಡಾ. ರೇಣು ಪ್ರಸಾದ್ ಕೆರೆ ನೀಡಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಷ್ಟ್ರೀಯ ಆರೋಗ್ಯ ಅಭಿಯಾನ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ರೋಗ ವಾಹಕ ಆಶ್ರಿತ ರೋಗಗಳ ನಿಯಂತ್ರಣ ಕಚೇರಿ ವತಿಯಿಂದ ಗುರುವಾರ ಬೆಳಗ್ಗೆ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ಮಲೇರಿಯಾ ತರಬೇತಿ ಕಾರ್ಯಗಾರವನ್ನು ಉದ್ಘಾಟಿಸಿ, ಮಲೇರಿಯಾ ಹಾಗೂ ಇತರೆ ಕೀಟಜನ್ಯ ರೋಗಗಳ ತರಬೇತಿಗೆ ಚಾಲನೆ ನೀಡಿದರು.
ಈ ತರಬೇತಿ ಕಾರ್ಯಾಗಾರದಲ್ಲಿ ಜಿಲ್ಲಾ ರೋಗವಾಗ ಆಶಿತ ರೋಗಗಳ ನಿಯಂತ್ರಣ ಅಧಿಕಾರಿಗಳು ಡಾ. ಕಾಶಿ ಕೀಟಶಾಸ್ತ್ರಜ್ಞರಾದ ಶ್ರೀಮತಿ ನಂದಿನಿ ಕಡಿ, ಹಾಗೂ ಆರೋಗ್ಯ ಮೇಲ್ವಿಚಾರಕರಾದ ಸುರೇಶ್ ಬಾಬು, ಮಲ್ಲಿಕಾರ್ಜುನ್, ಶ್ರೀನಿವಾಸ್, BR. ನಾಗರಾಜ್, HA.ನಾಗರಾಜ್ ಹಾಜರಿದ್ದರು.