Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ಫೆಬ್ರವರಿ 16 ರಂದು ವಿವಿಧ ಸಂಘಟನೆಗಳ ಬೃಹತ್ ಪ್ರತಿಭಟನೆ

06:30 PM Feb 12, 2024 IST | suddionenews
Advertisement

 

Advertisement

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

 

Advertisement

ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.12 : ಅಗತ್ಯ ವಸ್ತುಗಳ ಬೆಲೆ ಏರಿಕೆ ಹಾಗೂ ಕಾರ್ಮಿಕರು, ದುಡಿಯುವ ವರ್ಗದವರಿಗೆ ಶೋಷಣೆಯಾಗುತ್ತಿರುವುದನ್ನು ವಿರೋಧಿಸಿ ಎ.ಐ.ಟಿ.ಯು.ಸಿ. ಸಿ.ಐ.ಟಿ.ಯು.
ಐ.ಎನ್.ಟಿ.ಯು.ಸಿ. ಎ.ಐ.ಸಿ.ಸಿ.ಟಿ.ಯು. ವಿವಿಧ ಸಂಘಟನೆಗಳು ಫೆ.16 ರಂದು ಬೃಹತ್ ಪ್ರತಿಭಟನೆಗೆ ಕರೆ ನೀಡಿರುವುದರಿಂದ ಜಿಲ್ಲೆಯಾದ್ಯಂತ ಅಂದು ಪ್ರತಿಭಟನೆ ನಡೆಸಲಾಗುವುದೆಂದು ಸಿ.ಐ.ಟಿ.ಯು.ಜಿಲ್ಲಾ ಸಹ ಸಂಚಾಲಕ ಸಿ.ಕೆ.ಗೌಸ್‍ಪೀರ್ ತಿಳಿಸಿದರು.

ಪ್ರವಾಸಿ ಮಂದಿರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು  ಕಾರ್ಮಿಕ ವರ್ಗದವರಿಗೆ ತಿಂಗಳಿಗೆ 31 ಸಾವಿರದ ಐದು ನೂರು ರೂ.ವೇತನ ನಿಗಧಿಪಡಿಸಬೇಕು. ನೋಟ್ ಬ್ಯಾನ್ ಒಂದು ಕಡೆಯಾದರೆ ಜಿ.ಎಸ್.ಟಿ. ಹೆಚ್ಚಿಸಿ ಬಡವರ ಮೇಲೆ ಕೇಂದ್ರ ಸರ್ಕಾರ ಬರೆ ಎಳೆಯುತ್ತಿದೆ. ಈ ಬಾರಿಯ ಪಾರ್ಲಿಮೆಂಟ್ ಚುನಾವಣೆಯಲ್ಲಿ 98 ಕೋಟಿ ಮತದಾರರು ತಮ್ಮ ಹಕ್ಕು ಚಲಾಯಿಸಲಿದ್ದಾರೆ. ಆರ್ಥಿಕ ಅಸಮಾನತೆ ತಾಂಡವವಾಡುತ್ತಿದೆ. ಒಟ್ಟಾರೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜನ ವಿರೋಧಿ ನೀತಿ ಅನುಸರಿಸುತ್ತಿರುವುದನ್ನು ಖಂಡಿಸಿ ಜಿಲ್ಲೆಯ ಎಲ್ಲಾ ತಾಲ್ಲೂಕಿನಲ್ಲಿಯೂ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.

ದಿನನಿತ್ಯ ಬಳಸುವ ಅಡುಗೆ ಪದಾರ್ಥಗಳ ಬೆಲೆ ಗಗನಕ್ಕೇರಿದೆ. ಹಾಲು, ಹಣ್ಣು, ಮೊಟ್ಟೆ ಬಡವರ ಕೈಗೆ ಸಿಗದಂತಾಗಿದೆ. ಸಮಾನ ಕೆಲಸಕ್ಕೆ ಸಮಾನ ವೇತನ ಕೊಡಬೇಕು. ರೈಲ್ವೆ ಖಾಸಗಿಯವರಿಗೆ ಮಾರಾಟವಾಗುತ್ತಿದೆ. ಗಿರಿ ಪರ್ವತಗಳನ್ನು ಬಿಟ್ಟಿಲ್ಲ. ಇಂತಹ ಸರ್ಕಾರಕ್ಕೆ ಪಾರ್ಲಿಮೆಂಟ್ ಚುನಾವಣೆಯಲ್ಲಿ ಮತದಾರರು ತಕ್ಕಪಾಠ ಕಲಿಸಬೇಕೆಂದು ಸಿ.ಕೆ.ಗೌಸ್‍ಪೀರ್ ಮನವಿ ಮಾಡಿದರು.

ಸಿಪಿಐ. ಜಿಲ್ಲಾ ಕಾರ್ಯದರ್ಶಿ ಕಾಂ.ಜಿ.ಸಿ.ಸುರೇಶ್‍ಬಾಬು ಮಾತನಾಡಿ ಕಳೆದ ಹತ್ತು ವರ್ಷಗಳಿಂದ ದೇಶದಲ್ಲಿ 25 ಕೋಟಿ ಜನ ಬಡತನದಿಂದ ಹೊರ ಬಂದಿದ್ದಾರೆಂದು ಕೇಂದ್ರ ಹಣಕಾಸು ಮಂತ್ರಿ ನಿರ್ಮಲ ಸೀತಾರಾಮನ್ ಸುಳ್ಳು ಹೇಳಿ ದೇಶದ ಜನರನ್ನು ದಿಕ್ಕುತಪ್ಪಿಸುತ್ತಿದ್ದಾರೆ. ಕೋವಿಡ್ ಬಂದಾಗಿನಿಂದಲೂ 60 ರಿಂದ 70 ಕೋಟಿ ಜನರ ಜೀವನ ನಿರ್ವಹಣೆ ಕಷ್ಟವಾಗಿದೆ. ಬ್ರಿಟೀಷರ ಕಾಲದಲ್ಲಿಯೂ ಇಂತಹ ಶೋಷಣೆಯಿರಲಿಲ್ಲ.

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಿಸಿ ದೇಶದ ಜನರಿಗೆ ಮಂಕು ಬೂದಿ ಎರಚುತ್ತಿರುವ ಪ್ರಧಾನಿ ಮೋದಿಗೆ ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಮತದಾರರು ಸರಿಯಾದ ಪಾಠ ಕಲಿಸಬೇಕು. 44 ಕಾರ್ಮಿಕ ಕಾಯಿದೆ ಕೋಡ್‍ಗಳನ್ನು ರದ್ದುಪಡಿಸಿ ಕೇವಲ ನಾಲ್ಕು ಕೋಡ್‍ಗಳನ್ನು ಮಾತ್ರ ಉಳಿಸಿದ್ದಾರೆ. ರೈತರ ಬೇಡಿಕೆಗಳನ್ನು ಈಡೇರಿಸಿಲ್ಲ. ಹಾಗಾಗಿ ಕಾರ್ಮಿಕರು, ರೈತರು, ವಿದ್ಯಾರ್ಥಿಗಳು, ಸಾರ್ವಜನಿಕರು ಫೆ. 16 ರ ಪ್ರತಿಭಟನೆಗೆ ಬೆಂಬಲಿಸುವಂತೆ ವಿನಂತಿಸಿದರು.

ಎ.ಐ.ಟಿ.ಯು.ಸಿ. ತಾಲ್ಲೂಕು ಉಪಾಧ್ಯಕ್ಷ ರಾಜಣ್ಣ, ಸಿಪಿಐ. ತಾಲ್ಲೂಕು ಸಹ ಕಾರ್ಯದರ್ಶಿ ಕಾಂ.ಸತ್ಯಕೀರ್ತಿ ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.

Advertisement
Tags :
central and state governmentschitradurgaMassive protestsuddionesuddione newsvarious organizationsಚಿತ್ರದುರ್ಗಬೃಹತ್ ಪ್ರತಿಭಟನೆಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article