For the best experience, open
https://m.suddione.com
on your mobile browser.
Advertisement

ಎಸ್.ಎಸ್.ಎಲ್.ಸಿ ಫಲಿತಾಂಶ ಸುಧಾರಿಸಿ ಮೊದಲ ಹತ್ತು ಸ್ಥಾನದೊಳಗೆ ತರಲು ಶಿಕ್ಷಕರಿಗೆ ಸಚಿವ ಡಿ.ಸುಧಾಕರ್ ತಾಕೀತು

04:05 PM Sep 05, 2024 IST | suddionenews
ಎಸ್ ಎಸ್ ಎಲ್ ಸಿ ಫಲಿತಾಂಶ ಸುಧಾರಿಸಿ ಮೊದಲ ಹತ್ತು ಸ್ಥಾನದೊಳಗೆ ತರಲು ಶಿಕ್ಷಕರಿಗೆ ಸಚಿವ ಡಿ ಸುಧಾಕರ್ ತಾಕೀತು
Advertisement

Advertisement
Advertisement

ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 05 : ಎಸ್.ಎಸ್.ಎಲ್.ಸಿ ಫಲಿತಾಂಶದಲ್ಲಿ ಚಿತ್ರದುರ್ಗ ಜಿಲ್ಲೆ 21ನೇ ಸ್ಥಾನಕ್ಕೆ ಕುಸಿದಿದೆ. ಇದು ಗಾಬರಿ ತರುವ ವಿಷಯವಾಗಿದೆ. ಜಿಲ್ಲೆ ಬರಗಾಲ ಪೀಡಿತ ಪ್ರದೇಶವಾಗಿದೆ. ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ, ಅಲ್ಪಸಂಖ್ಯಾತರು ಹಾಗೂ ಹಿಂದುಳಿದ ವರ್ಗದ ಜನರ ಸಂಖ್ಯೆ ಹೆಚ್ಚಿದೆ. ಇವರಿಗೆ ಶಿಕ್ಷಣ ಹೊರತು ಬೇರೆ ಅವಕಾಶವಿಲ್ಲ, ಶಿಕ್ಷಿತರಾದರೆ ಮಾತ್ರ ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಮುಂದೆ ಬರಲು ಅವಕಾಶ ದೊರಕುತ್ತದೆ. ಜಿಲ್ಲೆಯ ಮಕ್ಕಳ ಭವಿಷ್ಯ ಶಿಕ್ಷಕರ ಕೈಯಲ್ಲಿದೆ. ಮಕ್ಕಳನ್ನು ಮುಖ್ಯವಾಹಿನಿಗೆ ತರುವ ಜವಾಬ್ದಾರಿಯನ್ನು ಶಿಕ್ಷಕರು ತೆಗೆದುಕೊಳ್ಳಬೇಕು. 2024-25 ಸಾಲಿನ ಶೈಕ್ಷಣಿಕ ವರ್ಷದಲ್ಲಿ ಎಸ್.ಎಸ್.ಎಲ್.ಸಿ ಫಲಿತಾಂಶವನ್ನು ಸುಧಾರಿಸಿ ಜಿಲ್ಲೆಯನ್ನು ಮೊದಲ ಹತ್ತು ಸ್ಥಾನದೊಳಗೆ ತರಲು ಶಿಕ್ಷಕರು ಪ್ರಯತ್ನಿಸಬೇಕು ಎಂದು ಸಚಿವ ಡಿ.ಸುಧಾಕರ್ ತಾಕೀತು ಮಾಡಿದರು.

ಡಾ.ಸರ್ವೆಪಲ್ಲಿ ರಾಧಾಕೃಷ್ಣನ್ ಜನ್ಮದಿನಾಚರಣೆ ಅಂಗವಾಗಿ ಜಿಲ್ಲಾಡಳಿತ, ಜಿಲ್ಲಾಪಂಚಾತಿ ಹಾಗೂ ಶಾಲಾ ಶಿಕ್ಷಣ ಇಲಾಖೆ ಸಹಯೋಗದಲ್ಲಿ, ಗುರುವಾರ ನಗರದ ತರಾಸು ರಂಗಮಂದಿರದಲ್ಲಿ ಆಯೋಜಿಸಲಾದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

Advertisement

ಸಾಮಾಜಿಕ ಮಾಧ್ಯಮಗಳ ಮೂಲಕ ಶಿಕ್ಷಕರನ್ನು ಅಪರಾಧಿ ಸ್ಥಾನದಲ್ಲಿ ನಿಲ್ಲಿಸಿ, ಕೆಟ್ಟದಾಗಿ ಬಿಂಬಿಸುವಂತಹ ಪ್ರಯತ್ನವಾಗುತ್ತಿರುವುದಕ್ಕೆ ಸಂಸದ ಗೋವಿಂದ ಎಂ ಕಾರಜೋಳ ಬೇಸರ ವ್ಯಕ್ತಪಡಿಸಿದರು.

Advertisement

ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಈ ಹಿಂದೆ ಶಿಕ್ಷಕರು ನಮ್ಮನ್ನು ಒಚಿಟಿ ಕಾಲಿನ ಮೇಲೆ ನಿಲ್ಲಿಸಿ ಪಾಠ ಹೇಳಿಕೊಡುತ್ತಿದ್ದರು. ತಪ್ಪು ಮಾಡಿದರೆ ಶಿಕ್ಷಿಸುತ್ತಿದ್ದರು. ಇದನ್ನು ಪಾಲಕರು ಸಹ ಒಪ್ಪಿದ್ದರು. ಈಗ ಮಕ್ಕಳನ್ನು ದಂಡಿಸಿದರೆ, ಪಾಲಕರು ಶಿಕ್ಷಕರ ಮೇಲೆ ಜಗಳಕ್ಕೆ ಹೋಗುತ್ತಾರೆ. ಇನ್ನು ಹಲವು ಸಾಮಾಜಿಕ ಮಾಧ್ಯಮಗಳಲ್ಲಿ ಶಿಕ್ಷಕರು ಮಕ್ಕಳನ್ನು ಶೌಚಾಲಯ ತೊಳಿಯಲು ಹಚ್ಚಿದ್ದಾರೆ ಎನ್ನುವ ವಿಡಿಯೋ ಹರಿದಾಡಿಸಿ, ಸರ್ಕಾರ ಅವರ ಮೇಲೆ ಕ್ರಮ ಕೈಗೊಂಡ ಪ್ರಸಂಗವೂ ಜರುಗಿವೆ.  ಮುಂದುವರಿದ ಜಪಾನ್ ದೇಶದಲ್ಲಿ ಇಂದಿಗೂ ಶಿಕ್ಷಕರು ಹಾಗೂ ಮಕ್ಕಳೇ ಅಲ್ಲಿನ ಶೌಚಾಲಯಗಳನ್ನು ಸ್ವಚ್ಛಗೊಳಿಸುತ್ತಾರೆ. ನಾನು ಓದುವಾಗ ನಮ್ಮ ಹಾಸ್ಟೆಲ್ ಕಸವನ್ನು ನಾವೇ ಗುಡಿಸಿ ಸ್ವಚ್ಛಗೊಳಿಸಿದ್ದೇವೆ. ಇಂದು ಮಕ್ಕಳ ಕೈಗೆ ಪೊರಕೆ ನೀಡಿದರೆ ಅಪರಾಧ ಎನ್ನುವ ಪರಿಸ್ಥಿತಿ ಎದುರಾಗಿದೆ. ಇಂತಹ ಘಟನೆಗಳಿಂದ ಮಕ್ಕಳಿಗೆ ಸ್ವಚ್ಛತೆ ಮಾಡುವ ಕೆಲಸ ಕೀಳು ಎಂಬ ಭಾವನೆ ಮೂಡುತ್ತಿದೆ. ಇದರ ಬದಲಾಗಿ ಸ್ವಚ್ಛತೆ ಬಗ್ಗೆ ಮಕ್ಕಳಿಗೆ ಕಲಿಸಿಕೊಡುವುದು ಅವಶ್ಯಕವಿದೆ ಎಂದು ಗೋವಿಂದ ಕಾರಜೋಳ ಹೇಳಿದರು.
ಪ್ರಾಚೀನ ಕಾಲದಿಂದಲೂ ಶಿಕ್ಷಕ ವೃತ್ತಿ ಶ್ರೇಷ್ಠವಾದದು ಎಂದು ಭಾವಿಸಲಾಗಿದೆ. ದೇಶದ ಮೊದಲ ಉಪರಾಷ್ಟçಪತಿ ಹಾಗೂ ಎರಡನೇ ರಾಷ್ಟçಪತಿಗಳಾಗಿ ಕಾರ್ಯನಿರ್ವಹಿಸಿದ್ದ ಡಾ.ಸರ್ವೆಪಲ್ಲಿ ರಾಧಾಕೃಷ್ಣನ್ ಅವರು ಸಹ ಶಿಕ್ಷಕರಾಗಿದ್ದರು. ಇವರ ಜನ್ಮದಿನಾಚರಣೆಯನ್ನು ಶಿಕ್ಷಕ ದಿನಾಚರಣೆಯಗಿ ದೇಶದಾದ್ಯಂತ ಆಚರಿಸಲಾಗುತ್ತಿದೆ. ಇಂದಿನ ರಾಷ್ಟçಪತಿಗಳಾದ ದ್ರೌಪದಿ ಮುರ್ಮು ಸಹ ಶಿಕ್ಷಕರಾಗಿದ್ದರು. ಮಾಜಿ ರಾಷ್ಟçಪತಿ ಡಾ.ಎ.ಪಿ.ಜೆ ಅಬ್ದುಲ್ ಕಲಾಂ ಸಹಿತ ಶಿಕ್ಷಕ ವೃತ್ತಿಯನ್ನು ತುಂಬಾ ಪ್ರೀತಿಸುತ್ತಿದ್ದರು. ಎಲ್ಲೇ ಕಾರ್ಯಕ್ರಮಗಳಿಗೆ ಹೋದರೂ ಉಪನ್ಯಾಸವನ್ನು ನೀಡುತ್ತಿದ್ದರು. ಸಮಾಜವನ್ನು ಸರಿ ದಾರಿಗೆ ತಂದು, ಸುಂದರ ನಿರ್ಮಾಣ ಮಾಡುವ ಕೆಲಸ ಶಿಕ್ಷಕರಿಂದ ಮಾತ್ರ ಸಾಧ್ಯ ಎಂದರು.

ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಮಾತನಾಡಿ ಶಿಕ್ಷಕರು ಆತ್ಮಾವಲೋಕನ ಮಾಡಿಕೊಳ್ಳುವ ದಿನ ಶಿಕ್ಷಕರ ದಿನಾಚರಣೆಯಾಗಿದೆ. ವೃತ್ತಿಗೆ ನ್ಯಾಯ ಒದಗಿಸುತ್ತೇವೆ ಎಂದು ಚಿಂತನೆ ನಡೆಸಬೇಕಿದೆ. ಇಂದು ಪದವಿ ಪಡೆದ ಶಿಕ್ಷಕರು ಇದ್ದರೂ ಮಕ್ಕಳಿಗೆ ಶಿಕ್ಷಣ ನೀಡುವಲ್ಲಿ ವಿಫಲರಾಗುತ್ತಿದ್ದೇವೆ.  20 ರಿಂದ 25 ವಯಸ್ಸಿನ ಸುಮಾರು 40 ರಿಂದ 70 ಮಕ್ಕಳು ಜಿಲ್ಲಾ ಕಾರಾಗೃಹದಲ್ಲಿ ಪೋಕ್ಸೋ ಕಾಯ್ದೆಯಡಿ ಬಂಧನವಾಗಿ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿದ್ದಾರೆ. ಜಿಲ್ಲೆಯಲ್ಲಿ ಬಾಲ್ಯವಿವಾಹ ಹಾಗೂ ಬಾಲಗರ್ಭಿಣಿಯರ ಪ್ರಕರಣಗಳ ಸಂಖ್ಯೆ  ಹೆಚ್ಚಾಗುತ್ತಿವೆ. ಶಿಕ್ಷಕರು ಈ ಬಗ್ಗೆ ನಿಗಾ ವಹಿಸಬೇಕು. ಯೋಧರು, ರೈತರಂತೆ, ಶಿಕ್ಷಕರು ಕೂಡ ದೇಶ ನಿರ್ಮಾಣಕ್ಕೆ ಮುಖ್ಯವಾಗಿದ್ದಾರೆ ಎಂದರು.

ಸಭೆಯಲ್ಲಿ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಭಾಜನರದ 24 ಶಿಕ್ಷಕರು ಹಾಗೂ ನಿವೃತ್ತ ಶಿಕ್ಷಕರಿಗೆ ಸನ್ಮಾನಿಸಲಾಯಿತು. ನಗರಸಭೆ ಅಧ್ಯಕ್ಷೆ ಸುಮಿತಾ ರಘು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ತಾಜ್‌ಪೀರ್, ಗ್ಯಾರಂಟಿ ಯೋಜನೆಗಳ ಜಿಲ್ಲಾ ಮಟ್ಟದ ಅನುಷ್ಠಾನ ಸಮಿತಿ ಅಧ್ಯಕ್ಷ ಶಿವಣ್ಣ, ಸಿ.ಟಿ.ಇ ಪ್ರಾಂಶುಪಾಲರು ಹಾಗೂ ಪದನಿಮಿತ್ತ ಸಹ ನಿದೇಶಕಿ ಟಿ.ಜಿ.ಲೀಲಾವತಿ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಕೆ.ಟಿ.ತಿಮ್ಮಾರೆಡ್ಡಿ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಂ.ಆರ್.ಮಂಜುನಾಥ, ಡಯಟ್ ಪ್ರಾಂಶುಪಾಲ ಎಂ.ನಾಸೀರುದ್ದೀನ್, ಕ್ಷೇತ್ರಶಿಕ್ಷಣಾಧಿರಿ ನಾಗಭೂಷಣ್ ಸೇರಿದಂತೆ ವಿವಿಧ ಶಿಕ್ಷಕ ಸಂಘಟನೆಗಳ ಜಿಲ್ಲಾಧ್ಯಕ್ಷರು, ಕಾರ್ಯದರ್ಶಿಗಳು ಉಪಸ್ಥಿತರಿದ್ದರು.
ಫೋಟೋ ವಿವರಣೆ: ಯೋಜನೆ ಸಾಂಖ್ಯಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಹಾಗೂ ಸಂಸದ ಗೋವಿಂದ ಎಂ ಕಾರಜೋಳ ಅವರು ನಗರ ತರಾಸು ರಂಗಮಂದಿರದಲ್ಲಿ ಆಯೋಜಿಸಲಾದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾಜಿ ರಾಷ್ಟ್ರಪತಿ ಡಾ.ಸರ್ವೆಪಲ್ಲಿ ರಾಧಕೃಷ್ಣ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಇದೇ ವೇಳೆ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಭಾಜನಾರದವರಿಗೆ ಸನ್ಮಾನಿಸಲಾಯಿತು.

Tags :
Advertisement