Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಕನ್ನಡ ಭವನ ನಿರ್ಮಾಣಕ್ಕೆ ಸಚಿವ ಡಿ.ಸುಧಾಕರ್ ಭರವಸೆ

03:12 PM Nov 01, 2024 IST | suddionenews
Advertisement

 

Advertisement

ಸುದ್ದಿಒನ್, ಚಿತ್ರದುರ್ಗ, ನವೆಂಬರ್. 01 : ಕನ್ನಡ ಭವನ ನಿರ್ಮಾಣಕ್ಕೆ ಅಗತ್ಯವಾದ ಅನುದಾನ ಒದಗಿಸಲಾಗುವುದು ಎಂದು ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಭರವಸೆ ನೀಡಿದ್ದಾರೆ.

ಅವರು ಶುಕ್ರವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಹಲ್ಮಿಡಿ ಶಾಸನ ಉದ್ಘಾಟನೆ ನೆರವೇರಿಸಿದ ನಂತರ ಕಸಾಪ ಪದಾಧಿಕಾರಿಗಳ ಜೊತೆ ಮಾತನಾಡಿದರು.

Advertisement

ಕಸಾಪ ಜಿಲ್ಲಾಧ್ಯಕ್ಷ ಕೆ.ಎಂ. ಶಿವಸ್ವಾಮಿ ಮಾತನಾಡಿ, ಕನ್ನಡ ಭವನ ಜಿಲ್ಲೆಯ ಸಾಹಿತ್ಯಾಸಕ್ತರ ದಶಕಗಳ ಕನಸಾಗಿದೆ. ಪರಿಷತ್ತಿಗೆ ಪಿಳ್ಳೇಕೇರನಹಳ್ಳಿಯ ಬಾಪೂಜಿ ಕಾಲೇಜಿನ ಬಳಿ ವಿಶಾಲವಾದ ನಿವೇಶನವಿದೆ. ಆದರೆ ಕಟ್ಟಡಕ್ಕೆ ಅನುದಾನವಿಲ್ಲ. ಹೀಗಾಗಿ ಅಂದಾಜು 3 ಕೋಟಿ ಅನುದಾನ ಒದಗಿಸುವಂತೆ ಮನವಿ ಸಲ್ಲಿಸಿದರು.

ಇದಕ್ಕೆ ಪ್ರತಿಕ್ರಿಯೆ ನೀಡಿದ ಸಚಿವರು, ಆದ್ಯತೆಯ ಮೇಲೆ ಕನ್ನಡ ಭವನ ನಿರ್ಮಾಣಕ್ಕೆ ಅನುದಾನ ನೀಡಲಾಗುವುದು. ಕನ್ನಡ ಮತ್ತು ಸಂಸ್ಕøತಿ ಇಲಾಖೆ ಯಿಂದ ಅನುದಾನ ಕೇಳಲಾಗುವುದು. ಜೊತೆಗೆ ಡಿಎಂಎಫ್ ಸೇರಿದಂತೆ ನಾನಾ ಇಲಾಖೆಗಳಿಂದ ಅನುದಾನ ಒದಗಿಸಲು ಪ್ರಯತ್ನ ನಡೆಸಲಾಗುವುದು. ಕನ್ನಡ ಭವನಕ್ಕೆ ಪ್ಲಾನ್ ಮತ್ತು ಎಸ್ಟಿಮೇಟ್ ತಯಾರಿಸಲು ಸೂಚಿಸಿದರು. ಚಿತ್ರದುರ್ಗ ತಾಲ್ಲೂಕು ಕಸಾಪ ಅಧ್ಯಕ್ಷ ವಿ.ಎಲ್.ಪ್ರಶಾಂತ್, ಕಾರ್ಯದರ್ಶಿ ವಿ.ಶ್ರೀನಿವಾಸ ಖಜಾಂಚಿ ಸಿ.ಲೋಕೇಶ ಮತ್ತಿತರರಿದ್ದರು.

Advertisement
Tags :
bengaluruchitradurgaconstructionKannada BhavanMinister D. Sudhakarpromisedsuddionesuddione newsಕನ್ನಡ ಭವನಚಿತ್ರದುರ್ಗನಿರ್ಮಾಣಬೆಂಗಳೂರುಭರವಸೆಸಚಿವ ಡಿ.ಸುಧಾಕರ್ಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article