ಸಚಿವ ಡಾ.ಎಚ್.ಸಿ.ಮಹದೇವಪ್ಪನವರನ್ನು ಲೋಕಸಭಾ ಚುನಾವಣೆಗೆ ಕಣಕ್ಕಿಳಿಸುವುದು ಬೇಡ : ಎಸ್.ಎನ್.ರವಿಕುಮಾರ್ ಒತ್ತಾಯ
ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.06 : ದಲಿತರು, ಶೋಷಿತರು, ಧ್ವನಿಯಿಲ್ಲದವರಿಗೆ ಸರ್ಕಾರಿ ಸೌಲಭ್ಯಗಳನ್ನು ತಲುಪಿಸುವಲ್ಲಿ ಪ್ರಾಮಾಣಿಕವಾಗಿ ದುಡಿಯುತ್ತಿರುವ ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪನವರನ್ನು ಲೋಕಸಭಾ ಚುನಾವಣೆಗೆ ಕಣಕ್ಕಿಳಿಸುವ ಚಿಂತನೆಯನ್ನು ಬಿಟ್ಟು ರಾಜ್ಯದ ಜನರಿಗೆ ಅವರ ಸೇವೆ ಸಿಗುವಂತೆ ಕಾಂಗ್ರೆಸ್ ವರಿಷ್ಠರು ಗಮನ ಕೊಡಬೇಕಾಗಿದೆ ಎಂದು ಛಲವಾದಿ ಸಮಾಜದ ಮುಖಂಡ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಎಸ್.ಎನ್.ರವಿಕುಮಾರ್ ಮನವಿ ಮಾಡಿದ್ದಾರೆ.
ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್‍ರವರ ಆಚಾರ, ವಿಚಾರ, ತತ್ವ ಸಿದ್ದಾಂತಗಳನ್ನು ಮೈಗೂಡಿಸಿಕೊಂಡು ಸಮಾಜ ಕಲ್ಯಾಣ ಇಲಾಖೆ ಖಾತೆಯನ್ನು ಸಮರ್ಥವಾಗಿ ನಿಭಾಯಿಸುತ್ತಿರುವ ಡಾ.ಎಚ್.ಸಿ.ಮಹದೇವಪ್ಪನವರನ್ನು ಲೋಕಸಭೆಗೆ ಕಳಿಸಿದರೆ ದಲಿತರು, ಶೋಷಿತ ಜನಾಂಗಕ್ಕೆ ಅನ್ಯಾಯ ಮಾಡಿದಂತಾಗುತ್ತದೆ. ಪಾರ್ಲಿಮೆಂಟ್ ಚುನಾವಣೆಗೆ ಸ್ಪರ್ಧಿಸಲು ರಾಜ್ಯದಲ್ಲಿ ಒಳ್ಳೊಳ್ಳೆ ದಿಗ್ಗಜರುಗಳಿದ್ದಾರೆ. ಅಂತಹವರನ್ನು ಹುಡುಕಿ ಕಣಕ್ಕಿಳಿಸಲಿ. ಸಚಿವ ಡಾ.ಎಚ್.ಸಿ.ಮಹದೇವಪ್ಪನವರ ಸೇವೆ ರಾಜ್ಯಕ್ಕೆ ಮೀಸಲಿರಬೇಕಾಗಿರುವುದರಿಂದ ಪಕ್ಷದ ನಾಯಕರುಗಳು ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಬೇಕೆಂದು ಎಸ್.ಎನ್.ರವಿಕುಮಾರ್ ವಿನಂತಿಸಿದ್ದಾರೆ.