Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಭೋವಿ ಗುರುಪೀಠಕ್ಕೆ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದ ಸಚಿವ ಎಸ್. ಎಸ್. ಮಲ್ಲಿಕಾರ್ಜುನ್

02:03 PM Apr 17, 2024 IST | suddionenews
Advertisement

 

Advertisement

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ ಏ. 17 : ಕರ್ನಾಟಕ ಸರಕಾರದ ಸಚಿವರಾದ ಎಸ್ ಎಸ್ ಮಲ್ಲಿಕಾರ್ಜುನ ದಾವಣಗೆರೆಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ಡಾ.ಪ್ರಭಾ ಮಲ್ಲಿಕಾರ್ಜುನ ಅವರ ಪರವಾಗಿ ಆಶೀರ್ವಾದ ಆಪೇಕ್ಷಿಸಿ ಚಿತ್ರದುರ್ಗ ಶ್ರೀ ಜಗದ್ಗುರು ಸಿದ್ದರಾಮೇಶ್ವರ ಮಹಾಸಂಸ್ಥಾನ ಭೋವಿ ಗುರುಪೀಠಕ್ಕೆ ಭೇಟಿ ನೀಡಿದರು.

Advertisement

ಭೋವಿ ಗುರುಪೀಠದ  ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ, ಕುಂಚಿಟಿಗ ಗುರುಪೀಠದ ಶ್ರೀ ಶಾಂತವೀರ ಸ್ವಾಮೀಜಿ, ವಾಲ್ಮೀಕಿ ಗುರುಪೀಠದ ಶ್ರೀ ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ  ಭಗೀರಥ ಗುರುಪೀಠದ ಶ್ರೀ ಪುರುಷೋತ್ತಮಾನಂದಪುರಿ ಸ್ವಾಮೀಜಿ, ಯಾದವ ಗುರುಪೀಠದ ಶ್ರೀ ಕೃಷ್ಣ ಯಾದವಾನಂದ ಸ್ವಾಮೀಜಿ, ಮಡಿವಾಳ ಗುರುಪೀಠದ ಶ್ರೀ ಬಸವ ಮಾಚಿದೇವ ಸ್ವಾಮೀಜಿ, ಈಡಿಗ ಗುರುಪೀಠದ ಶ್ರೀ ರೇಣುಕಾನಂದ ಸ್ವಾಮೀಜಿ, ಹಡಪದ ಗುರುಪೀಠದ ಶ್ರೀ ಅನ್ನದಾನಿ ಭಾರತಿ ಅಪ್ಪಣ್ಣ ಸ್ವಾಮೀಜಿ, ಕುಂಬಾರ ಗುರುಪೀಠದ ಶ್ರೀ ಬಸವ ಕುಂಬಾರ ಗುಂಡಯ್ಯ ಸ್ವಾಮೀಜಿ, ಶಿವಶಕ್ತಿ ಗುರುಪೀಠದ ಶ್ರೀ ಬಸವಪ್ರಸಾದ ಸ್ವಾಮೀಜಿ, ಪಾರಮಾರ್ಥಿಕ ಗವಿಮಠದ ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ, ಕೊರಟಗೆರೆ ಅನ್ನಪೂರ್ಣೇಶ್ವರಿ ಮಠದ ಶ್ರೀ ಬಸವ ಮಹಾಲಿಂಗ ಸ್ವಾಮೀಜಿ, ಬಸವಕಲ್ಯಾಣ  ಶ್ರೀ ಸತ್ಯಕ್ಕ ತಾಯಿ,  ಪೂಜ್ಯರ ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ದಾವಣಗೆರೆ ಮುಖಂಡರಾದ ಹೆಚ್ ಜಯಣ್ಣ, ಎ ಬಿ ನಾಗರಾಜ, ಶ್ರೀಮತಿ ಉಮಾ ಕುಮಾರ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

Advertisement
Tags :
bengaluruBhovi GurupeethchitradurgaMinister S S. Mallikarjunreceived the blessingssuddionesuddione newsಆಶೀರ್ವಾದಚಿತ್ರದುರ್ಗಬೆಂಗಳೂರುಭೋವಿ ಗುರುಪೀಠಸಚಿವ ಎಸ್. ಎಸ್. ಮಲ್ಲಿಕಾರ್ಜುನ್ಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article