Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ನಾಳೆ ಚಿತ್ರದುರ್ಗಕ್ಕೆ  ಸಚಿವ ಸತೀಶ್ ಜಾರಕಿಹೊಳಿ

03:20 PM Jan 27, 2024 IST | suddionenews
Advertisement

ಚಿತ್ರದುರ್ಗ ಜ. 27 : ರಾಜ್ಯ ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ಜ. 28 ರಂದು ಚಿತ್ರದುರ್ಗ ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.

Advertisement

ಸಚಿವರು ಅಂದು ಬೆಳಿಗ್ಗೆ ಉಡುಪಿ ಜಿಲ್ಲೆ ಕುಂದಾಪುರದಿಂದ ಹೆಲಿಕಾಪ್ಟರ್ ಮೂಲಕ ಹೊರಟು, ಮಧ್ಯಾಹ್ನ 12. 05 ಗಂಟೆಗೆ ಚಿತ್ರದುರ್ಗ ನಗರಕ್ಕೆ ಆಗಮಿಸುವರು.  ಬಳಿಕ ನಗರದ ಹೊರವಲಯದಲ್ಲಿರುವ ಶ್ರೀ ಬಸವಮೂರ್ತಿ ಮಾದಾರ ಚೆನ್ನಯ್ಯ ಪೀಠದ ಪಕ್ಕದ ಮೈದಾನದಲ್ಲಿ ಕರ್ನಾಟಕ ಶೋಷಿತ ಮಹಾ ಒಕ್ಕೂಟ ಮತ್ತು ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದ ಸಂಯುಕ್ತ ಆಶ್ರಯದ “ಶೋಷಿತ ಜಾಗೃತಿ ಸಮಾವೇಶ” ದಲ್ಲಿ ಭಾಗವಹಿಸುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ತಿಳಿಸಿದ್ದಾರೆ.

Advertisement
Advertisement
Tags :
bangaloreChief Minister SiddaramaiahchitradurgaMinister Sathish JarakiholiSatish jarakiholisuddionesuddione newstomorrowvisitಚಿತ್ರದುರ್ಗಬೆಂಗಳೂರುಮುಖ್ಯಮಂತ್ರಿ ಸಿದ್ದರಾಮಯ್ಯಸಚಿವ ಸತೀಶ್ ಜಾರಕಿಹೊಳಿಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article